ಚನ್ನಪಟ್ಟಣ ಉಪಚುನಾವಣೆಯಲ್ಲಿ ಪುತ್ರ ನಿಖಿಲ್ ಕುಮಾರಸ್ವಾಮಿ ಸೋಲಿನ ಬಳಿಕ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಮೊದಲ ಪ್ರತಿಕ್ರಿಯೆ ನೀಡಿದರು.
ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಫಲಿತಾಂಶ ಬಂದಾಗಿದೆ, ಈಗ ಏನು ಚರ್ಚೆ ಮಾಡಿದರೂ ಪ್ರಯೋಜನ ಇಲ್ಲ. ಫಲಿತಾಂಶ ಒಪ್ಪಿಕೊಳ್ಳಲೇಬೇಕು. ಏನೇ ಇದ್ದರೂ ಆಮೇಲೆ ಮಾತಾಡುತ್ತೇನೆ ಎಂದು ಹೊರಟರು.
ಚನ್ನಪಟ್ಟಣ ಉಪಚುನಾವಣೆ ಫಲಿತಾಂಶದ ಬಳಿಕ ಯಾವುದೇ ಕಾರ್ಯಕ್ರಮ ಹಾಕಿಕೊಳ್ಳದ ಹೆಚ್‌ಡಿಕೆ, ಜೆ ಪಿ ನಗರದ ನಿವಾಸದಲ್ಲಿಯೇ ಇದ್ದರು. ಪುತ್ರ ನಿಖಿಲ್ ಸಹ ಜೊತೆಗಿದ್ದರು. ನವೆಂಬರ್ 25ರಂದು (ನಾಳೆ) ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಲಿರುವ ಹಿನ್ನೆಲೆ ಸಚಿವ ಕುಮಾರಸ್ವಾಮಿ ಇಂದೇ ದೆಹಲಿಗೆ ತೆರಳುತ್ತಿದ್ದಾರೆ. ಸಂಸತ್ ಅಧಿವೇಶನದಲ್ಲಿ ಭಾಗವಹಿಸಲು ಇಂದು ಮಧ್ಯಾಹ್ನ 12.30ರ ವಿಮಾನದಲ್ಲಿ ದೆಹಲಿಗೆ ಪ್ರಯಾಣಿಸಲಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಮೆರಿಕ ಲಂಚ-ವಂಚನೆ ಪ್ರಕರಣದಲ್ಲಿ ‘ಮೋದಾನಿ’ ಆರೋಪಿಯಲ್ಲವೇ?
