ಹೆಚ್‌ ಡಿ ಕುಮಾರಸ್ವಾಮಿ ಭಯೋತ್ಪಾದಕರ ಒಂದು ಭಾಗವೇ: ಡಿ ಕೆ ಶಿವಕುಮಾರ್‌ ಪ್ರಶ್ನೆ

Date:

ಹೆಚ್‌ ಡಿ ಕುಮಾರಸ್ವಾಮಿ ಅವರೂ ಸಹ ಭಯೋತ್ಪಾದಕರ ಭಾಗವಾಗಿದ್ದಾರೆಯೇ? ಅವರೂ ಸಹ ವಿಧಾನಸೌಧದಲ್ಲಿ ಕುಳಿತಿರಲಿಲ್ಲವೇ? ಅವರಿಗೂ ಹಾಗೂ ಅವರ ಪಕ್ಷದವರಿಗೂ, ಅವರ ಆಡಳಿತಕ್ಕೂ ಇದು ಅನ್ವಯಿಸುತ್ತದೆ ಡಿಸಿಎಂ ಡಿ ಕೆ ಶಿವಕುಮಾರ್ ತಿರುಗೇಟು ನೀಡಿದರು.

- Advertisement -

ದೆಹಲಿಯಲ್ಲಿ ಎಐಸಿಸಿ ನೂತನ ಕಟ್ಟಡ ಇಂದಿರಾ ಭವನದ ಆವರಣದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮತಗಳ್ಳತನ ಬಗ್ಗೆ ರಾಜ್ಯದ ಸಹಿ ಸಂಗ್ರಹವನ್ನು ಹಸ್ತಾಂತರಿಸಿದ ಬಳಿಕ ಸುದ್ದಿಗಾರರು ‘ವಿಧಾನಸೌಧದಲ್ಲಿ ಭಯೋತ್ಪಾದಕರಿದ್ದಾರೆ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ ಹೀಗೆ ಉತ್ತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

“ಚುನಾವಣೆಗಳಲ್ಲಿ ಮತ ಕಳ್ಳತನ‌ ನಡೆಯುತ್ತಿರುವ ಬಗ್ಗೆ ಮೊದಲು ಪತ್ತೆ ಹಚ್ಚಿದ್ದೇ ಕರ್ನಾಟಕದಲ್ಲಿ. ಈಗ ಮಹಾರಾಷ್ಟ್ರ, ಹರಿಯಾಣ, ಬಿಹಾರದಲ್ಲಿ ನಡೆಸಿರುವ ಅಕ್ರಮಗಳು ಬೆಳಕಿಗೆ ಬಂದಿವೆ. ನಮ್ಮ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಾಂಕೇತಿಕವಾಗಿ ಸಹಿ ಸಂಗ್ರಹ ಅಭಿಯಾನದ ದಾಖಲೆಗಳನ್ನು ಹಸ್ತಾಂತರಿಸಿದ್ದೇವೆ. 100 ವರ್ಷಗಳ ಹಿಂದೆ ಮಹಾತ್ಮ ಗಾಂಧೀಜಿ ಅವರು ನಿಭಾಯಿಸಿದ್ದ ಜವಾಬ್ದಾರಿಯನ್ನು ಈಗ ನಮ್ಮ ರಾಜ್ಯದ ಮಲ್ಲಿಕಾರ್ಜುನ ಖರ್ಗೆ ಅವರು ನಿಭಾಯಿಸುತ್ತಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಮತದಾನದ ಹಕ್ಕು ರಕ್ಷಣೆ ಹೋರಾಟ ಮಾಡಿದ್ದೇವೆ. ಒಬ್ಬರಿಗೆ ಒಂದು ಮತ ಎಂದು ನಾವು ಹೋರಾಟ ಮಾಡುತ್ತಿದ್ದೇವೆ. ಮತ ಕಳ್ಳತನವನ್ನು ಮೊದಲು ಪಚ್ಚೆ ಹಚ್ಚಿದ್ದೇ ನಮ್ಮ ರಾಜ್ಯದಲ್ಲಿ. ಎಐಸಿಸಿ ಸಂಶೋಧನಾ ವಿಭಾಗ, ನಮ್ಮ ಅಭ್ಯರ್ಥಿಯಾಗಿದ್ದ ಮನ್ಸೂರ್ ಅಲಿ ಖಾನ್, ಕೆಪಿಸಿಸಿ ತಂಡ ಸೇರಿ ಈ ಮತ ಕಳ್ಳತನ ಪತ್ತೆ ಮಾಡಿ ಎಐಸಿಸಿಗೆ ಮಾಹಿತಿ ನೀಡಿದೆವು” ಎಂದು ವಿವರಿಸಿದರು.

“ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿಗೆ ಆಗಮಿಸಿ ಫ್ರೀಡಂ ಪಾರ್ಕ್ ನಿಂದ ಈ ಹೋರಾಟ ಆರಂಭಿಸಲಾಯಿತು. ನಂತರ ಮಹಾರಾಷ್ಟ್ರ, ಹರಿಯಾಣ ಚುನಾವಣಾ ಅಕ್ರಮ ಬಯಲಾಗಿ ಈ ಹೋರಾಟ ಬಿಹಾರದವರೆಗೂ ಹಬ್ಬಿತು. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ ಅವರ ನಿರ್ದೇಶನದ ಮೇರೆಗೆ ಈ ಅಭಿಯಾನ ಪೂರ್ಣಗೊಳಿಸಿದ್ದೇವೆ” ಎಂದರು.

“ನಮ್ಮ ಕಾರ್ಯಕರ್ತರು, ಬ್ಲಾಕ್, ಜಿಲ್ಲಾಧ್ಯಕ್ಷರು ಹಾಗೂ ಪಕ್ಷದ ವಿವಿಧ ಘಟಕಗಳ ಪರಿಶ್ರಮದಿಂದ ಸಂಗ್ರಹಿಸಲಾದ ಸಹಿಗಳನ್ನು ಸಲ್ಲಿಕೆ ಮಾಡಿದ್ದೇವೆ. ನಾವು ನಮ್ಮ ಕರ್ತವ್ಯ ಮಾಡಿದ್ದು, ಮೊನ್ನೆಯಷ್ಟೇ ನಾನು ಹಾಗೂ ಸಿಎಂ ಈ ವಿಚಾರವಾಗಿ ಮಾಧ್ಯಮಗೋಷ್ಠಿ ನಡೆಸಿದ್ದೇವೆ. ನಮ್ಮ ಕಾರ್ಯಕರ್ತರು ಈ ಅಭಿಯಾನವನ್ನು ಇನ್ನೂ ಮುಂದುವರಿಸುತ್ತಿದ್ದು, ನಂತರ ಸಂಗ್ರಹಿಸುವ ಸಹಿ ದಾಖಲೆಗಳನ್ನು ಮುಂದಿನ ದಿನಗಳಲ್ಲಿ ಸಲ್ಲಿಕೆ ಮಾಡುತ್ತೇವೆ” ಎಂದು ಹೇಳಿದರು.

“ಮತಕಳ್ಳತನ ಖಂಡಿತವಾಗಿ ಆಗಿದೆ. ಬಿಹಾರದಲ್ಲಿ ಎಸ್ಐಆರ್ ನಡೆದಾಗ ನ್ಯಾಯಾಲಯ ಮಧ್ಯಪ್ರವೇಶ ಮಾಡಿ ಏಕೆ ಸೂಚನೆ ನೀಡಿತು? ರಾಹುಲ್ ಗಾಂಧಿ ಅವರು ಇದರ ಬಗ್ಗೆ ಮೊದಲ ಪತ್ರಿಕಾಗೋಷ್ಠಿ ನಡೆಸಿದ ನಂತರ ಮಾಧ್ಯಮಗಳು ಬೆಂಗಳೂರಿಗೆ ಬಂದು ಉಲ್ಲೇಖಿತ ಮನೆಗಳ ಸಂಖ್ಯೆ ಸೇರಿದಂತೆ ಯಾವ, ಯಾವ ಕಡೆ ಅಕ್ರಮ ನಡೆದಿದೆ ಎಂದು ಫ್ಯಾಕ್ಟ್ ಚೆಕ್ ಮಾಡಿದವು. ಯಾವ ಸರ್ಕಾರವೂ ಅದರ ವೈಫಲ್ಯ ಒಪ್ಪಿಕೊಳ್ಳುವುದಿಲ್ಲ. ವಿರೋಧ ಪಕ್ಷದ ಕೆಲಸವೇ ವೈಫಲ್ಯಗಳನ್ನು ಕಂಡುಹಿಡಿದು ತಿಳಿಸುವುದು” ಎಂದರು.

ಸಂವಿಧಾನಿಕ ಸಂಸ್ಥೆಗಳ ದುರುಪಯೋಗ

“ಚುನಾವಣಾ ಆಯೋಗವು ಬಿಹಾರದ ಮತದಾರರಿಗೆ ಸರಿಯಾದ ನ್ಯಾಯ ಒದಗಿಸಿಲ್ಲ. ಬಿಜೆಪಿ ಸಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ‌ ಮಾಡಿಕೊಂಡಿದೆ. ಯಾವುದು ಕಾಡದಿದ್ದರೂ ಆತ್ಮಸಾಕ್ಷಿ ಎನ್ನುವುದು ಇದ್ದೇ ಇರುತ್ತದೆ. ಅದು ಅಂತಿಮವಾಗಿ ಕೆಲಸ ಮಾಡಲಿದೆ” ಎಂದು ಹೇಳಿದರು.

ಮುಖ್ಯಮಂತ್ರಿ ಹುದ್ದೆ ಬದಲಾವಣೆ ಬಗೆಗಿನ ಊಹಾಪೋಹಗಳ ಬಗ್ಗೆ ಕೇಳಿದಾಗ, “ನಾನು ರಾಜಕೀಯ ವಿಚಾರಗಳನ್ನು ಮಾತನಾಡುವುದಿಲ್ಲ. ನಾನು ಪ್ರಜಾಪ್ರಭುತ್ವ, ಮತದಾನದ ಹಕ್ಕು, ಸಂವಿಧಾನವನ್ನು ಉಳಿಸುವ ವಿಚಾರವಾಗಿ ಮಾತನಾಡುತ್ತೇನೆ” ಎಂದು ಉತ್ತರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...

ನಕಲಿ ಔಷಧ ಜಾಲ ಭೇದಿಸಿದ ಎಸ್‌ಐಟಿ: ಅಜರ್‌ಬೈಜಾನ್‌ಗೆ ಪರಾರಿಯಾಗಿದ್ದ ಕಿಂಗ್‌ಪಿನ್‌ ಪ್ರಶಾಂತ್‌ ಸೆರೆ

ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ನಕಲಿ ಔಷಧ...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...