ಮಂಡ್ಯದಲ್ಲಿ ಕೈಗಾರಿಕೆ ಸ್ಥಾಪನೆಗೆ ಸ್ಥಳ ಕೇಳಿ ಸಿಎಂಗೆ ಪತ್ರ ಬರೆದ ಎಚ್ ಡಿ ಕುಮಾರಸ್ವಾಮಿ

Date:

ಮಂಡ್ಯ ಜಿಲ್ಲೆಯಲ್ಲಿ ಕೈಗಾರಿಕೆ ಸ್ಥಾಪನೆ ಮಾಡುವುದಕ್ಕೆ ಜಾಗ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಇಬ್ಬರಿಗೂ ಪತ್ರ ಬರೆದಿದ್ದೇನೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು.

- Advertisement -

ಮಂಡ್ಯದಲ್ಲಿ ದಿಶಾ ಸಮಿತಿ ಸಭೆಯ ನಂತರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, “ಮಂಡ್ಯ ಜಿಲ್ಲೆಯಲ್ಲಿ ದೊಡ್ಡ ಕೈಗಾರಿಕೆ ಸ್ಥಾಪನೆ ಮಾಡಬೇಕೆನ್ನುವ ಬೇಡಿಕೆ ಇದೆ. ನಾನು ಸಂಸದನಾಗಿ ಒಂದೂವರೆ ವರ್ಷ ಆಯಿತು. ಕೈಗಾರಿಕೆಗೆ ಜಾಗ ಕೊಡಿ ಎಂದು ಡಿಸಿ ಅವರಿಗೆ ಪತ್ರ ಬರೆದಿದ್ದೇನೆ. ಪಾಪ.. ಅವರು ಜಾಗ ಹುಡುಕುತ್ತಲೇ ಇದ್ದಾರೆ. ಜಿಲ್ಲಾಧಿಕಾರಿಗಳು ಜಾಗ ಹುಡುಕಿದ್ರು ಸಿಕ್ಕಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ರಾಜ್ಯದಲ್ಲಿ ಕೇಂದ್ರದಿಂದ ಏನೇ ಕೆಲಸ ಆಗಬೇಕಿದ್ದರೂ ರಾಜ್ಯದ ಸಹಕಾರ ಬೇಕಿದೆ. ಸಹಕಾರ ಸಿಗುತ್ತದೆ ಎಂಬ ನಂಬಿಕೆ ಇದೆ. ಮಂಡ್ಯ ಶಾಸಕರು ಜಾಗ ಕೊಡುವುದಾದರೆ ಕೊಡಲಿ. ಸರಕಾರದಿಂದ ಸ್ವಾಧೀನ ಮಾಡಿಸಿ ನಮಗೆ ಕೊಡಲಿ. ಎಲ್ಲರೂ ಸೇರಿ ಕೈಗಾರಿಕೆ ತಂದು ಉದ್ಯೋಗ ಸೃಷ್ಟಿ ಮಾಡೋಣ. ಮಂಡ್ಯಕ್ಕೆ ಏನು ತಂದ್ರಿ ಅಂತ ಕೇಳುವವರು ನೀವು ಜಿಲ್ಲೆಗೆ ಏನು ತಂದಿದ್ದೀರಾ ಹೇಳಿ. ಚಿಲ್ಲರೆ ರಾಜಕೀಯ ಮಾಡುವುದನ್ನು ನಿಲ್ಲಿಸಲಿ. ಕಾರ್ಖಾನೆ ಸ್ಥಾಪನೆ ವಿಚಾರವಾಗಿ ಸಿಎಂ ಸಿದ್ಧರಾಮಯ್ಯ ಅವರು, ಸಚಿವ ಎಂ.ಬಿ. ಪಾಟೀಲ್ ಅವರಿಗೆ ಪತ್ರ ಬರೆದಿದ್ದೇನೆ. ಅವರಿಂದ ಏನು ಪ್ರತಿಕ್ರಿಯೆ ಬರುತ್ತದೋ ನೋಡೋಣ” ಎಂದು ಸಚಿವರು ತಿಳಿಸಿದರು.

ಶಿಕ್ಷಕರ ಕಷ್ಟ ನೋಡಲಾಗದೆ ವೇತನಕ್ಕೆ ಹಣ ನೀಡುತ್ತಿದ್ದೇನೆ

“ಮೈಷುಗರ್ ಶಾಲೆ ಶಿಕ್ಷಕರಿಗೆ ಸಂಬಳ ಕೊಡುವ ಯೋಗ್ಯತೆ ಇಲ್ಲ ಈ ಸರ್ಕಾರಕ್ಕೆ. ಸಂಬಳ ಕೊಡಲು ದುಡ್ಡಿಲ್ಲ ಎಂದರೆ ಈ ಸರ್ಕಾರದಲ್ಲಿ ದುಡ್ಡಿಲ್ಲ ಅಂತ ಆಯ್ತು. ನಾನು ಸಿಎಂ ಆಗಿದ್ದಾಗ ಕಾರ್ಖಾನೆಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿ ಬಜೆಟ್ ನಾಲ್ಕು ₹100 ಕೋಟಿ ಇಟ್ಟಿದ್ದೆ‌. ಆ ದುಡ್ಡು ಎಲ್ಲಿ ಹೋಯಿತು? ಈಗ ನೋಡಿದರೆ ಕೀಳು ಮಟ್ಟದಲ್ಲಿ ಮಾತನಾಡುತ್ತೀರಾ?” ಎಂದು ಸಚಿವರು ತರಾಟೆಗೆ ತೆಗೆದುಕೊಂಡರು.

ಮಂಡ್ಯ ಕೃಷಿ ವಿವಿ ತಂದಿದ್ದೇವೆ, ಸಂತೋಷ. ಐದು ವರ್ಷ ಬಿಟ್ಟು ಮಾತಾಡೋಣ. ಬೆಂಗಳೂರು ನಗರ ವಿವಿಯಲ್ಲಿ 161 ಪ್ರಾಧ್ಯಾಪಕರು ಇರಬೇಕು. ಆದರೆ ಈಗ ಕೇವಲ 9 ಜನ ಪ್ರಾಧ್ಯಾಪಕರು ಇದ್ದಾರೆ. ರಾಜ್ಯದಲ್ಲಿ 65 ಸಾವಿರ ಶಿಕ್ಷಕರ ಕೊರತೆ ಇದೆ. ಇವರು ಯಾರನ್ನು ನೇಮಕ ಮಾಡುವ ಯೋಗ್ಯತೆ ಇಲ್ಲ ಎಂದು ಸಚಿವರು ಹರಿಹಾಯ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....