ಬಾನು ಮುಷ್ತಾಕ್‌ರನ್ನು ʼದಸರಾ ಉದ್ಘಾಟನೆʼಗೆ ಆಹ್ವಾನಿಸಿರುವುದಕ್ಕೆ ನನ್ನ ತಕರಾರು ಇಲ್ಲ: ಎಚ್‌ಡಿಕೆ

Date:

ಲೇಖಕಿ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ಆಹ್ವಾನಿಸಿರುವುದಕ್ಕೆ ನನ್ನ ತಕರಾರು ಏನೂ ಇಲ್ಲ. ಆದರೆ ಈ ವಿಚಾರದಲ್ಲಿ ಕೆಲವರು ಉದ್ಧಟತನ‌ ತೋರಿಸುತ್ತಿದ್ದಾರೆ. ಅದು ಬೇಡ ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿದರು.

- Advertisement -

ಬೆಂಗಳೂರು ನಗರದಲ್ಲಿ ಇಂದು ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಕೇಂದ್ರ ಸಚಿವರು, ತಾಯಿಯ ಮೆರವಣಿಗೆ ಜವಾಬ್ದಾರಿಯನ್ನು ಕೊಟ್ಟಿದ್ದಾರೆ. ಇದಕ್ಕೆ ನನ್ನ ತಕರಾರು ಏನೂ ಇಲ್ಲ. ಆದರೆ ಕೆಲವರು ಈ ಬಗ್ಗೆ ಬಹಳ ಉದ್ಧಟತನ‌ದಿಂದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅದು ಧಾರ್ಮಿಕ ಕ್ಷೇತ್ರದ ವಿಚಾರದಲ್ಲಿ ಬೇಡ, ಬೇಕಾಗಿಯೂ ಇಲ್ಲ. ಬಾನು ಮುಷ್ತಾಕ್ ಅವರಿಂದ ಪೂಜೆ‌ ಮಾಡಿಸುವುದು ಬೇರೆ. ಆದರೆ ಚಾಮುಂಡೇಶ್ವರಿ ದೇಗುಲ ಹಿಂದೂಗಳ ಆಸ್ತಿಯಲ್ಲ ಅಂತಾರೆ. ಹಿಂದೂ ಧಾರ್ಮಿಕ ಕ್ಷೇತ್ರಗಳಿಗೆ ಈ ರೀತಿ ಅಪಚಾರ ಸರಿಯಲ್ಲ. ಇದು ಕಾಂಗ್ರೆಸ್ ಸರಕಾರಕ್ಕೆ ಆಪತ್ತು ತರಲಿದೆ ಎಂಬುದನ್ನು ಮರೆಯಬಾರದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಧರ್ಮಸ್ಥಳದ ವಿಚಾರದಲ್ಲಿ ಈ ಸರಕಾರ ನಡೆದುಕೊಂಡಿದ್ದು ಸರಿಯಲ್ಲ, ಅದಕ್ಕೆ ಮುಂದಿನ ದಿನಗಳಲ್ಲಿ ಶ್ರೀ ಮಂಜುನಾಥ ಸ್ವಾಮಿ ಶಿಕ್ಷೆ ನೀಡುವುದು ಖಚಿತ. ಆರಂಭಿಕ ಹಂತದಿಂದ ಕೂಡ ಸರಕಾರ ಸರಿಯಾಗಿ ನಡೆದುಕೊಂಡಿಲ್ಲ. ಇಲ್ಲಿ ರಾಜಕೀಯ ಅಥವಾ ಧರ್ಮವನ್ನು ತರುವುದಿಲ್ಲ. ಆದರೆ ಕ್ಷೇತ್ರದ ಬಗ್ಗೆ ಸರಕಾರ ನಡೆದುಕೊಂಡ ರೀತಿ ಮಾತ್ರ ಅಪಮಾನ ಉಂಟು ಮಾಡುವ ರೀತಿಯಲ್ಲಿ ನಡೆದುಕೊಂಡಿದೆ. ಇದು ಅಕ್ಷಮ್ಯ ಎಂದು ಅವರು ಹೇಳಿದರು.

ಈ ದಿನ ಸಂಪಾದಕೀಯ | ಮಾನವಶಕ್ತಿ ಸದ್ಬಳಕೆಗೆ ಇದು ಸಕಾಲ: ಮೋದಿ ಮನಸ್ಸು ಮಾಡುವರೇ?

ಆರಂಭದಿಂದಲೂ ತನಿಖೆಯ ನಾಟಕ ನಡೆದಿದೆ. ಸಿ.ಎಸ್. ದ್ವಾರಕಾನಾಥ್ ಎನ್ನುವ ವ್ಯಕ್ತಿ ಮೊದಲು ದೂರು ನೀಡಿರುತ್ತಾರೆ. ಅವರು ದೂರು ನೀಡಿದ ತಕ್ಷಣ ಮುಖ್ಯಮಂತ್ರಿಗಳು ಅತ್ಯಂತ ವೇಗವಾಗಿ ಕ್ರಮ ಕೈಗೊಂಡು ಎಸ್ ಐಟಿ ರಚನೆಗೆ ಆದೇಶ ಮಾಡುತ್ತಾರೆ. ಇದರ ಹಿಂದೆ ಕೆಲ ಎಡಪಂಥೀಯ ಶಕ್ತಿಗಳ ಹುನ್ನಾರದ ಜತೆಗೆ ಕಾಣದ ಶಕ್ತಿಗಳ ಬಹುದೊಡ್ಡ ಕುತಂತ್ರ ಅಡಗಿದೆ ಎಂದು ಅವರು ಆಪಾದಿಸಿದರು.

ಡಿಸಿಎಂ ಆರೆಸ್ಸೆಸ್‌ ಗೀತೆ ಹಾಡಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಅವರು ಸದನದಲ್ಲಿ ಆರೆಸ್ಸೆಸ್‌ ಗೀತೆ ಹಾಡಿದ್ದಾರೆ. ತಮಾಷೆಗೂ ಆ ರೀತಿ ಹೇಳುವುದನ್ನು ಕಾಂಗ್ರೆಸ್ ನಾಯಕರು ಒಪ್ಪಲ್ಲ. ಈಗ ಅವರಿಗೆ ಕ್ಷಮೆ ಕೇಳುವ ಪರಿಸ್ಥಿತಿ ಎದುರಾಗಿದೆ ಎಂದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...