‘ಅವರು RSS ಗೀತೆ ಹಾಡಬಹುದು, ಶಾ ಜೊತೆ ಕೂರಬಹುದು’; ಡಿಕೆಶಿ ವಿರುದ್ಧ ರಾಜಣ್ಣ ವಾಗ್ದಾಳಿ

Date:

“ಅವರು (ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್) ಆರ್‌ಎಸ್‌ಎಸ್‌ ಗೀತೆ ಹಾಡಬಹುದು, ಖಾಸಗಿ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕ ಅಮಿತ್ ಶಾ ಜೊತೆಗೆ ವೇದಿಕೆ ಹಂಚಿಕೊಳ್ಳಬಹುದು, ಏನು ಬೇಕಾದರೂ ಮಾಡಬಹುದು. ನಾವು ಏನೂ ಮಾತಾಡುವಂತಿಲ್ಲ” ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ವಾಗ್ದಾಳಿ ನಡೆಸಿದ್ದಾರೆ.

- Advertisement -

ರಾಹುಲ್ ಗಾಂಧಿಯವರು ನಡೆಸುತ್ತಿರುವ ‘ವೋಟ್ ಚೋರಿ ಅಭಿಯಾನ’ ಸಂದರ್ಭದಲ್ಲಿ ಟೀಕೆ ಮಾಡಿ, ಸಚಿವ ಸ್ಥಾನ ಕಳೆದುಕೊಂಡಿರುವ ರಾಜಣ್ಣ, ಇಂದು ತುಮಕೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. ಸದನದ ಒಳಗೆ ‘ನಮಸ್ತೆ ಸದಾ ವತ್ಸಲೆ’ ಹಾಡಿ ವಿವಾದ ಮೈಮೇಲೆ ಎಳೆದುಕೊಂಡಿರುವ ಡಿ.ಕೆ.ಶಿವಕುಮಾರ್ ಅವರನ್ನು ಉದ್ದೇಶಿಸಿ ಟೀಕಾಪ್ರಹಾರ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ಅಶೋಕ್ ಸಿಂಘಾಲ್ ಜನ್ಮಶತಮಾನೋತ್ಸವ: ಕೋಮುವಾದದ ರೂವಾರಿಯ ವೈಭವೀಕರಣ –...

ಬೆಂಗಳೂರಿನಿಂದ ದೆಹಲಿಯವರೆಗೆ ನಡೆಯುತ್ತಿರುವ ಅಶೋಕ್ ಸಿಂಘಾಲ್ ಅವರ ಜನ್ಮಶತಮಾನೋತ್ಸವದ ಆಚರಣೆಗಳು ಭಾರತದ ಪ್ರಜಾಸತ್ತಾತ್ಮಕ ಭವಿಷ್ಯಕ್ಕೆ ಒಡ್ಡಿರುವ ಅಪಾಯದ ಮುನ್ಸೂಚನೆಯಾಗಿವೆ. ಕೋಮು ಸೌಹಾರ್ದತೆಗೆ ಕೊಳ್ಳಿ ಇಟ್ಟ, ಹಿಂಸಾಚಾರಗಳನ್ನು ಪ್ರೇರೇಪಿಸಿದ ಮತ್ತು ದೇಶದ ಬಹುತ್ವವನ್ನು ಸದಾ...

“ಪ್ರಯಾಗ್‌ರಾಜ್‌ನ ಗಂಗೆಯಲ್ಲಿ ಸ್ನಾನ ಮಾಡಿದ ಮಾತ್ರಕ್ಕೆ ಬಡತನ ನಿವಾರಣೆಯಾಗುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದರು. ಇದರ ನಂತರವೂ ಡಿ.ಕೆ.ಶಿವಕುಮಾರ್ ಹೋಗಿ ಪುಣ್ಯ ಸ್ನಾನ ಮಾಡಿದರು. ಅಂಬಾನಿ ಮಗನ ಮದುವೆಯ ಆಮಂತ್ರಣವನ್ನು ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ ಸ್ವೀಕರಿಸುವುದಿಲ್ಲ. ಅಂತಹ ಮದುವೆಗೆ ಇವರು (ಡಿಕೆಶಿ) ಕುಟುಂಬ ಸಮೇತ ಹೋಗುತ್ತಾರೆ” ಎಂದು ಕಿಡಿಕಾರಿದರು.

ಇದನ್ನೂ ಓದಿರಿ: ಅಲೆಮಾರಿಗಳ ಹಕ್ಕು ತಿರಸ್ಕರಿಸಿದ ಸಿಎಂ; ಹೋರಾಟ ತೀವ್ರಗೊಳಿಸಲು ನಿರ್ಧಾರ

“ನಾವು ಯಾವುದೇ ಶಾಸಕರ, ಮಂತ್ರಿಗಳ ಸಭೆ ಕರೆಯುವ ಹಾಗಿಲ್ಲ. ಬೇರೆಯವರು ಕರೆಯಬಹುದು, ಮಾತಾಡಬಹುದು. ಇದಕ್ಕೆಲ್ಲ ಸೂಕ್ತ ಸಮಯದಲ್ಲಿ ಉತ್ತರ ನೀಡುತ್ತೇವೆ” ಎಂದು ಪ್ರತಿಕ್ರಿಯಿಸಿದ್ದಾರೆ.

ಟೀಕೆಗೆ ಗುರಿಯಾಗಿರುವ ಡಿಕೆಶಿ

ಡಿ.ಕೆ.ಶಿವಕುಮಾರ್ ಅವರು ಇತ್ತೀಚೆಗೆ ಭಾರೀ ಟೀಕೆಗೆ ಒಳಗಾಗಿದ್ದಾರೆ. ಸೌಜನ್ಯ ಪರ ಹೋರಾಟಗಾರ ತಿಮರೋಡಿ ಬಂಧನಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದ ಅವರು, “ನಮ್ಮ ನಾಯಕ ಬಿ.ಎಲ್. ಸಂತೋಷ್ ಅವರನ್ನು ಟೀಕಿಸಿದವನನ್ನು ಒದ್ದು ಒಳಗೆ ಹಾಕಿಸಿದ್ದೇವೆ” ಎಂದಿದ್ದರು. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಸಂತೋಷ್ ಅವರನ್ನು ವಹಿಸಿಕೊಂಡು ಮಾತನಾಡಿ, ವ್ಯಂಗ್ಯಕ್ಕೆ ಗುರಿಯಾಗಿದ್ದರು.

ಧರ್ಮಸ್ಥಳ ಸತ್ತ ನಡೆಯುತ್ತಿರುವ ವಿದ್ಯಮಾನಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿ, ತನಿಖೆ ನಡೆಸುತ್ತಿದೆ. ಎಸ್‌ಐಟಿ ರಚನೆ ವಿರುದ್ಧ ಮಾತನಾಡಿ ಡಿ.ಕೆ.ಶಿವಕುಮಾರ್ ಸುದ್ದಿಯಲ್ಲಿದ್ದರು. ತಮ್ಮದೇ ಸರ್ಕಾರ ರಚಿಸಿರುವ ಎಸ್‌ಐಟಿ ವಿರುದ್ಧ ಮಾತನಾಡುತ್ತಿರುವುದು ಸರಿಯೇ ಎಂದು ಜನರು ಪ್ರತಿಕ್ರಿಯಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...