ಕುತ್ತಿಗೆಗೆ ಚಾಕು ಹಿಡಿದು ರಸ್ತೆಯಲ್ಲಿ ಎಳೆದಾಡಿದ; ಚಿನ್ನದ ಸರಕ್ಕಾಗಿ ಫೆವಿಕ್ವಿಕ್‌ನಿಂದ ಕೈ ಅಂಟಿಸಿದ ಕಿರಾತಕ!

Date:

ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ಚಿನ್ನದ ಸರ ಕಳವು ಮಾಡಲು ಯತ್ನಿಸಿದ ವ್ಯಕ್ತಿಯೊಬ್ಬ ಅಂಗಡಿಯ ಮಹಿಳಾ ಸಿಬ್ಬಂದಿಯ ಕುತ್ತಿಗೆಗೆ ಚಾಕು ಹಿಡಿದು ಕೊಲೆ ಬೆದರಿಕೆ ಹಾಕಿರುವ ಘಟನೆ ಇಂದಿರಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆ ಅಕ್ಟೋಬರ್‌ 31ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

- Advertisement -

ಪ್ರಭುರಾಜ್ ಅಲಿಯಾಸ್ ರಾಜ್ ಎಂಬಾತ ಕೃತ್ಯ ಎಸಗಿದ ಆರೋಪಿ. ಅಂಗಡಿಯೊಂದಕ್ಕೆ ನುಗ್ಗಿದ ಆತ, ಯಾರೋ ತನ್ನನ್ನು ಬೆನ್ನಟ್ಟಿಕೊಂಡು ಕೊಲೆ ಮಾಡಲು ಬರುತ್ತಿದ್ದಾರೆ ಎಂದು ಸುಳ್ಳು ಕಥೆ ಹೇಳಿ ಮಹಿಳೆಯ ಬಳಿ ಆಶ್ರಯ ಕೇಳಿದ್ದಾನೆ. ಬಳಿಕ ಏಕಾಏಕಿ ಚಾಕು ತೆಗೆದು ಮಹಿಳೆಯ ಕುತ್ತಿಗೆಗೆ ಹಿಡಿದು ಚಿನ್ನದ ಸರ ನೀಡುವಂತೆ ಬೆದರಿಸಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಮನಿಗೆ ₹150 ಕೋಟಿ, ಸೀತೆಗೆ ₹12 ಕೋಟಿ! ಬಿಗ್...

₹4,000 ಕೋಟಿಯ ಬೃಹತ್ ಬಜೆಟ್‌ನ 'ರಾಮಾಯಣ' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈ ಹೊತ್ತಿನಲ್ಲಿ ಚಿತ್ರರಂಗದ ಅದೇ ಹಳೆ ಹಣೆಬರಹವೊಂದು ಚರ್ಚೆಗೆ ಸಿಕ್ಕಿದೆ. ರಾಮನ ಪಾತ್ರಕ್ಕೆ ₹150 ಕೋಟಿ, ರಾವಣನಿಗೆ ₹100 ಕೋಟಿ ಸಂಭಾವನೆ!...

ರಾಮಲೀಲಾ ಮೈದಾನದಲ್ಲಿ ವಿಪಕ್ಷಗಳ ಬಲಪ್ರದರ್ಶನ; ಬೀದಿ ಹೋರಾಟ ಬೇರುಮಟ್ಟದ...

ನವಂಬರ್ 1ರಂದು ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ನಡೆದ ಪ್ರತಿಭಟನಾ ಸಮಾವೇಶವು ಭಾರತೀಯ ರಾಜಕಾರಣದಲ್ಲಿ ಮತ್ತೊಂದು ಮಹತ್ವದ ರಾಜಕೀಯ ಮೈಲಿಗಲ್ಲಾಗಿ ದಾಖಲಾಗಿದೆ. ಚುನಾವಣಾ ಆಕ್ರಮ, ಎಸ್‌ಐಆರ್ ಷಡ್ಯಂತ್ರದ ವಿರುದ್ಧ ಮತ್ತು ಮುಖ್ಯ ಚುನಾವಣಾ...

ಮಣಿಪುರವನ್ನು ಜನಾಂಗೀಯ ಘರ್ಷಣೆಯ ದಳ್ಳುರಿಗೆ ತಳ್ಳಿ ಕೈಚೆಲ್ಲಿದೆ ಮೋ-ಶಾ...

ಮ್ಯಾನ್ಮಾರ್‌ನೊಂದಿಗೆ ಸುಮಾರು 400 ಕಿಲೋಮೀಟರ್ ಗಡಿ ಹಂಚಿಕೊಳ್ಳುವ ಈಶಾನ್ಯ ಭಾರತದ ಗಡಿ ರಾಜ್ಯ ಮಣಿಪುರದಲ್ಲಿ ಶತಮಾನಗಳಿಂದ ಬೆಳೆದು ಬಂದಿದ್ದ ಸೌಹಾರ್ದತೆಯ ಬೇರುಗಳನ್ನು ಸಂಪೂರ್ಣವಾಗಿ ಕೊಳೆತು ಹೋಗಲು ಕೇಂದ್ರ ಸರ್ಕಾರ ಬಿಟ್ಟಂತಿದೆ. 2023ರಿಂದ ನಡೆಯುತ್ತಿರುವ...

ಮಹಿಳೆಯ ಕೊರಳಲ್ಲಿದ್ದ ಸುಮಾರು 35 ಗ್ರಾಂ ತೂಕದ, ಅಂದಾಜು 4.5 ಲಕ್ಷ ರೂ. ಮೌಲ್ಯದ ಚಿನ್ನದ ಸರವನ್ನು ಕಸಿದುಕೊಳ್ಳಲು ಆರೋಪಿ ಯತ್ನಿಸಿದ್ದಾನೆ. ಮಹಿಳೆ ಪ್ರತಿರೋಧ ತೋರದಂತೆ ಮತ್ತು ತಪ್ಪಿಸಿಕೊಳ್ಳದಂತೆ ಆಕೆಯ ಎರಡೂ ಕೈಗಳಿಗೆ ಫೆವಿಕ್ವಿಕ್ ಅಂಟು ಹಾಕಿ ಅಂಗಡಿಯ ಮೇಜಿಗೆ ಅಂಟಿಸಿದ್ದಾನೆ ಎನ್ನಲಾಗಿದೆ.

ಆರೋಪಿ ಚಿನ್ನದ ಸರ ಕಸಿಯಲು ಯತ್ನಿಸುತ್ತಿದ್ದಾಗ ಮಹಿಳೆ ಜೋರಾಗಿ ಕಿರುಚಿಕೊಂಡಿದ್ದಾರೆ. ಆಕೆಯ ಕೂಗಾಟ ಕೇಳಿದ ಅಕ್ಕಪಕ್ಕದ ಅಂಗಡಿಗಳ ವ್ಯಾಪಾರಿಗಳು ಹಾಗೂ ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿದ್ದಾರೆ. ಜನರು ಸುತ್ತುವರಿದಿದ್ದನ್ನು ಗಮನಿಸಿದ ಆರೋಪಿ, ಮಹಿಳೆಯ ಕುತ್ತಿಗೆಗೆ ಚಾಕು ಹಿಡಿದು ಯಾರಾದರೂ ಹತ್ತಿರ ಬಂದರೆ ಕೊಲೆ ಮಾಡುವುದಾಗಿ ಬೆದರಿಸಿದ್ದಾನೆ. ಅಲ್ಲದೆ, ಮಹಿಳೆಯನ್ನು ಗುರಾಣಿಯಂತೆ ಬಳಸಿಕೊಂಡು ಅಲ್ಲಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಆದರೆ ಸ್ಥಳೀಯರು ಸಮಯಪ್ರಜ್ಞೆ ಮೆರೆದು ಆರೋಪಿಯ ಗಮನ ಬೇರೆಡೆಗೆ ಸೆಳೆದು ಆತನನ್ನು ಹಿಡಿದು ಮಹಿಳೆಯನ್ನು ರಕ್ಷಿಸಿದ್ದಾರೆ. ಬಳಿಕ ಆರೋಪಿಯನ್ನು ಇಂದಿರಾನಗರ ಪೊಲೀಸರಿಗೆ ಒಪ್ಪಿಸಿದ್ದಾರೆ.

ಇದನ್ನೂ ಓದಿ: ತಿಂಗಳಿಗೆ ಲಕ್ಷಾಂತರ ಲಾಭದ ಆಮಿಷವೊಡ್ಡಿ 11.46 ಕೋಟಿ ವಂಚನೆ; ಶಿವಮೊಗ್ಗ ದಂಪತಿ ವಿರುದ್ಧ ಕೇಸ್

ಘಟನೆಯಲ್ಲಿ ಮಹಿಳೆಯನ್ನು ರಕ್ಷಿಸಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಆಕೆಗೆ ಗಂಭೀರ ಗಾಯಗಳಾಗಿಲ್ಲ ಎಂದು ತಿಳಿದುಬಂದಿದೆ. ಇಂದಿರಾನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪ್ರಭುರಾಜ್‌ನನ್ನು ಬಂಧಿಸಿದ್ದಾರೆ. ಬಳಿಕ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿ ಡೆಲಿವರಿ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದ್ದು, ಆತನ ಹಿನ್ನೆಲೆ ಹಾಗೂ ಕೃತ್ಯದ ಹಿಂದಿನ ಉದ್ದೇಶದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಘಟನೆಯ ವೇಳೆ ಆರೋಪಿ ಮಹಿಳೆಗೆ ಚಾಕು ತೋರಿಸಿ ಬೆದರಿಸುತ್ತಿರುವ ಹಾಗೂ ಆಕೆಯನ್ನು ಎಳೆದಾಡುತ್ತಿರುವ ದೃಶ್ಯಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಕೆಲಸ ಮಾಡುವ ಮಹಿಳೆಯರ ಸುರಕ್ಷತೆ ಕುರಿತು ಆತಂಕ ಮೂಡಿಸಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

EPFO ಸದಸ್ಯರಿಗೆ ಸಿಹಿಸುದ್ದಿ: Whatsappನಲ್ಲೇ ಸಿಗಲಿದೆ ಇಪಿಎಫ್‌ ಖಾತೆ ವಿವರ

ನೌಕರರ ಭವಿಷ್ಯ ನಿಧಿ ಸಂಸ್ಥೆಯು (EPFO) ತನ್ನ ಕೋಟ್ಯಂತರ ಸದಸ್ಯರ...

‘SIR ಹೋರಾಟದಲ್ಲಿ ನೀವೇಕೆ ಭಾಗವಹಿಸಿದಿರಿ’; ಬೇಷರತ್ ಕ್ಷಮೆ ಕೇಳುವಂತೆ ನಟ ಇಮ್ರಾನ್ ಖಾನ್‌ಗೆ ಬಾಂಬೆ ಹೈಕೋರ್ಟ್ ಸೂಚನೆ

ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮುಂಬೈನಲ್ಲಿ ನಡೆದಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದಕ್ಕೆ...

ಬೀದರ್ | ಅವೈಜ್ಞಾನಿಕ ಚರಂಡಿ: ರಸ್ತೆ ಮೇಲೆ ಕೊಳಚೆ ನೀರು, ಜನರ ಆಕ್ರೋಶ

ಬೀದರ್ ನಗರದ ಶಹಾಪುರ ಗೇಟ್ ಪ್ರದೇಶದಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಿರುವ ಚರಂಡಿಯಿಂದಾಗಿ ಕೊಳಚೆ...

20 ವರ್ಷಗಳಲ್ಲಿ 171 ಐಐಟಿ ವಿದ್ಯಾರ್ಥಿಗಳ ಸಾವು; ಎಸ್‌ಟಿ-ಎಸ್‌ಸಿ ವಿದ್ಯಾರ್ಥಿಗಳೇ ಹೆಚ್ಚು: ಆರ್‌ಟಿಐ ವರದಿ ಬಹಿರಂಗ

ದೇಶದ ಅತ್ಯಂತ ಪ್ರತಿಷ್ಠಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಾದ ಐಐಟಿಗಳಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ...