ಹೃದಯಾಘಾತ | ಜನರು ಆತಂಕ ಪಡುವ ಅಗತ್ಯವಿಲ್ಲ: ಸಚಿವ ಶರಣ್ ಪ್ರಕಾಶ್ ಪಾಟೀಲ್

Date:

Advertisements

ರಾಜ್ಯದಲ್ಲಿ ಈಗ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ. ಸರಾಸರಿ ಹೃದಯಾಘಾತದ ಪ್ರಕರಣಗಳು ಕಳೆದ ವರ್ಷದಷ್ಟೇ ಇದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಹೇಳಿದರು.

ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರೊಂದಿಗೆ ವಿಕಾಸಸೌಧದಲ್ಲಿ ಜಂಟಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವರು, “ಸರ್ಕಾರ ಈ ವಿಷಯದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತಿದೆ. ಜನರು ಆತಂಕಪಡಬಾರದು” ಎಂದು ತಿಳಿಸಿದರು.

“ಹಾಸನದಲ್ಲಿ ಹೃದಯಾಘಾತ ಪ್ರಕರಣ ಹೆಚ್ಚುತ್ತಿವೆ ಎನ್ನುವ ಸುದ್ದಿ ಕೇಳಿ ಜಯದೇವ ಆಸ್ಫತ್ರೆ ಸೇರಿದಂತೆ ಆನೇಕ ಆಸ್ಫತ್ರೆಗಳಲ್ಲಿ ರೋಗಿಗಳ ಸಂಖ್ಯೆ ಮತ್ತು ಮುಂಜಾಗ್ರತೆ ಕ್ರಮ ತೆಗೆದುಕೊಳ್ಳುವವರ ಸಂಖ್ಯೆಯೂ ಗಣನೀಯವಾಗಿ ಏರಿಕೆಯಾಗಿದೆ. ಇದರಿಂದ ವಿಚಿತ್ರ ಸನ್ನಿವೇಶ ಎದುರಾಗುತ್ತಿದೆ. ಕೋವಿಡ್ ಲಸಿಕೆಗೂ ಹಾಸನದಲ್ಲಿ ಸಂಭವಿಸಿದ ಹೃದಯಾಘಾತ ಪ್ರಕರಣಗಳಿಗೂ ಯಾವುದೇ ಸಂಬಂಧವಿಲ್ಲ. ವ್ಯಾಕ್ಸಿನ್ ಬಗ್ಗೆ ಅನುಮಾನ ಬೇಡ. ಹಾಸನ ಜಿಲ್ಲೆಯಲ್ಲಿ ಮಾತ್ರ ಪ್ರಕರಣ ಬೇರೆ ಆಗಿದೆ ಅನ್ನೋದು ತಪ್ಪು” ಎಂದು ವಿವರಿಸಿದರು.

Advertisements

“ಹೃದಯಾಘಾತದ ಆತಂಕ ಕೈಬಿಟ್ಟು ಉತ್ತಮ ಜೀವನಶೈಲಿ, ಅಗತ್ಯ ನಿದ್ರೆ ಮತ್ತು ದೈಹಿಕ ವ್ಯಾಯಾಮ ಮಾಡುವುದು ಅಗತ್ಯ. ಹೃದಯಾಘಾತದ ರೋಗ ಲಕ್ಷಣಗಳು ಇದ್ದರೆ ಮಾತ್ರ ಆಸ್ಪತ್ರೆಗೆ ಹೋಗಿ ತಪಾಸಣೆ ಮಾಡಿಸಿಕೊಳ್ಳಿ. ಸುಖಾ ಸುಮ್ಮನೆ ಹೋಗಬೇಡಿ” ಎಂದು ಕಿವಿಮಾತು ಹೇಳಿದರು.

ಹಾಸನ ಪ್ರಕರಣ ಕುರಿತು ಅಧ್ಯಯನ

“ಹಾಸನ ಪ್ರಕರಣದಲ್ಲಿ 24 ಮಂದಿ ಮೃತರ ಕುರಿತು ಅಧ್ಯಯನ ನಡೆಸಲಾಗುತ್ತಿದೆ. 20 ಪ್ರಕರಣಗಳಲ್ಲಿ 10 ಹಾರ್ಟ್ ಅಟ್ಯಾಕ್ ಆಗಿದೆ. ಇತರೆ ಕಾರಣಗಳಿಂದ ಸಾವು ಸಂಭವಿಸಿವೆ ಎನ್ನುವುದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ. ಜಯದೇವ ಆಸ್ಫತ್ರೆಗಳಲ್ಲಿ ಹೃದ್ರೂಗ ತಜ್ಞ ಡಾ ಕೆ. ಎಸ್. ರವೀಂದ್ರನಾಥ್ ಅವರ ನೇತೃತ್ವದಲ್ಲಿ ಅನಾಲಿಸಿಸ್ ಆಗಿದ್ದು. ಹೃದಯಾಘಾತ ಸಂಬಂಧ ಸಾವು ಹೆಚ್ಚಾಗಿಲ್ಲ. ಈ ಹಿಂದೆ ಆಗ್ತಾ ಇತ್ತು. ಈಗಲೂ ಆಗ್ತಾ ಇದೆ” ಎಂದರು.

ಕೋವಿಡ್‌ ನಂತರ ಜನರ ಜೀವನ ಶೈಲಿ ಬದಲು

“ಕೋವಿಡ್‌ ನಂತರದ ಜೀವನ ಶೈಲಿಯಿಂದ ಡಯಾಬಿಟಿಸ್ , ಬಿಪಿ ಹೆಚ್ಚಾಗಿದೆ. ಆಹಾರ ಪದ್ದತಿ ಬದಲಾಗಿದೆ. ಒತ್ತಡ ಜಾಸ್ತಿ ಆಗಿದೆ. ಈ ಮಧ್ಯೆ ಯುವಕರಲ್ಲಿ ಯಾಕೆ ಸಾವು ಆಗ್ತಿದೆ ಅಂತ ಅಧ್ಯಯನ ಮಾಡುತ್ತಿದ್ದೇವೆ. ಜನವರಿಯಲ್ಲಿ 178 ಜನರು ಅಡ್ಮಿಟ್ ಆಗಿದ್ದರು 11 ಜನ ಮೃತಪಟ್ಟಿದ್ದಾರೆ. ಫೆಬ್ರವರಿಯಲ್ಲಿ 181 ಜನರ ಪೈಕಿ 10 ಜನ, ಮಾರ್ಚ್‌ನಲ್ಲಿ 200 ಜನರಲ್ಲಿ 9 ಜನ ಹಾಗೂ ಬೆಂಗಳೂರಲ್ಲಿ 2165 ಜನರು ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಈ ಪೈಕಿ 101 ಜನ ಮೃತಪಟ್ಟಿದ್ದಾರೆ” ಎಂದು ಮಾಹಿತಿ ನೀಡಿದರು.

ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, “ಮಕ್ಕಳಲ್ಲಿ ಸ್ಕ್ರೀನಿಂಗ್ ಮಾಡುವ ಆಗತ್ಯವಿಲ್ಲ. ಜನರಿಗೆ ಜಯದೇವ ಆಸ್ಪತ್ರೆಯಿಂದ ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸುತ್ತೇವೆ. ರಸ್ತೆ ಬದಿ ಆಹಾರ ಮತ್ತು ಆಹಾರ ತಯಾರಿಸುವ ವಿಧಾನದ ಬಗ್ಗೆ ಕಟ್ಟುನಿಟ್ಟಿನ ಕ್ರಮವಹಿಸುತ್ತಿದ್ದೇವೆ” ಎಂದರು.

ಈ ಸಂದರ್ಭದಲ್ಲಿ ಜಯದೇವ ಆಸ್ಪತ್ರೆಯ ಹೃದಯ ತಜ್ಞರಾದ ಡಾ ಕೆ. ಎಸ್. ರವೀಂದ್ರನಾಥ್, ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೋಷಿನ್, ಇಲಾಖೆ ನಿರ್ದೇಶಕಿ ಡಾ. ಬಿ.ಎಲ್. ಸುಜಾತಾ ರಾಥೋಡ್ ಹಾಗೂ ಇತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X