ರಾಜ್ಯದಲ್ಲಿ ಆಗಸ್ಟ್ 14ರಿಂದ ಮಳೆ ತೀವ್ರತೆ ಹೆಚ್ಚಳ: ಹವಾಮಾನ ಇಲಾಖೆ

Date:

Advertisements

ಮುಂದಿನ ಏಳು ದಿನಗಳ ಕಾಲ ರಾಜ್ಯದಾದ್ಯಂತ ತೀವ್ರ ಗಾಳಿಯೊಂದಿಗೆ ಅಲ್ಲಲ್ಲಿ ಸಾಧಾರಣ ಮತ್ತು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್ 14ರಿಂದ ಮಳೆ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಇಂದಿನಿಂದ ಆಗಸ್ಟ್ 13ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಸ್ಥಳಗಳಲ್ಲಿ ಸಾಧಾರಣ ಮಳೆಯಾಗಲಿದೆ. ಆದರೆ ಆಗಸ್ಟ್ 14ರಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಹೇಳಿದೆ.

ಇದನ್ನು ಓದಿದ್ದೀರಾ? ಆಗಸ್ಟ್ 5ರಿಂದ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Advertisements

ಕರ್ನಾಟಕದ ಒಳನಾಡಿನ ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಇಂದು(ಆಗಸ್ಟ್ 9) ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ನಾಳೆಯಿಂದ ಗುಡುಗು ಇಲ್ಲದೆ, ಸಾಧಾರಣ ಮಳೆಯಾಗಲಿದೆ.

ಆದರೆ ಆಗಸ್ಟ್ 14ರಿಂದ ಮತ್ತೆ ಮಳೆ ಅಬ್ಬರ ಹೆಚ್ಚಾಗಲಿದೆ. ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ದಕ್ಷಿಣ ಒಳನಾಡಿನಲ್ಲಿ ನಿರಂತರ ಮಳೆಯಾಗಲಿದೆ. ಆಗಸ್ಟ್ 14ರಂದು ಶಿವಮೊಗ್ಗ, ಚಿಕ್ಕಮಗಳೂರು ಒಂದೆರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯೆಯಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ: SIT ತನಿಖೆ ನಿಷ್ಪಕ್ಷಪಾತವಾಗಿ ಮುಂದುವರಿಸಲು ಸರ್ಕಾರಕ್ಕೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಆಗ್ರಹ

ಧರ್ಮಸ್ಥಳದಲ್ಲಿ ನಡೆದಿರುವ ಮಹಿಳೆಯರ ನಾಪತ್ತೆ, ಅತ್ಯಾಚಾರ ಮತ್ತು ಬರ್ಬರ ಕೊಲೆಗಳ ಪ್ರಕರಣಗಳ...

ಪಿಒಪಿ ಬಳಸಲ್ಲ ಎಂದು ಗಣೇಶೋತ್ಸವ ಸಮಿತಿಯಿಂದ ಮುಚ್ಚಳಿಕೆ ಬರೆಸಿಕೊಳ್ಳಿ: ಈಶ್ವರ ಖಂಡ್ರೆ ಸೂಚನೆ

ಸಾರ್ವಜನಿಕ ಗಣೇಶೋತ್ಸವಗಳಲ್ಲಿ ಪಿಒಪಿ ಗಣಪತಿ ಮೂರ್ತಿ ಬಳಸುವುದಿಲ್ಲವೆಂದು ಪೆಂಡಾಲ್‌ಗೆ ಅನುಮತಿ ನೀಡುವ...

ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್‌ ವಶಕ್ಕೆ, ಬ್ರಹ್ಮಾವರ ಪೊಲೀಸ್ ಠಾಣೆ ಸುತ್ತ ಒಂದು ದಿನದ ನಿಷೇಧಾಜ್ಞೆ ಜಾರಿ

ಮಹೇಶ್ ಶೆಟ್ಟಿ ತಿಮರೋಡಿ ತೀವ್ರ ವಿಚಾರಣೆಯ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸ್ ಠಾಣೆ...

Download Eedina App Android / iOS

X