ಮುಂದಿನ 5 ದಿನಗಳ ಕಾಲ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ವ್ಯಾಪಕವಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಛತ್ತೀಸ್‌ಗಢ ಮತ್ತು ಲಾಗೋವಾ ಪ್ರದೇಶದಲ್ಲಿ ಚಂಡಮಾರುತವಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ. ಇದು ಕ್ರಮೇಣ ದಕ್ಷಿಣಕ್ಕೆ ಚಲಿಸುತ್ತಿದೆ. ಮಾನ್ಸೂನ್ ರೇಖೆಯು ಪ್ರಸ್ತುತ ಮಹಾರಾಷ್ಟ್ರದಿಂದ ಹಲವಾರು ರಾಜ್ಯಗಳಿಗೆ ವಿಸ್ತರಿಸಲಿದೆ ಎಂದು ಹೇಳಲಾಗಿದೆ.
ಇನ್ನು ರಾಜ್ಯದಲ್ಲಿ ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಕೆರೆ-ಕಟ್ಟೆ ಹಾಗೂ ಕರ್ನಾಟಕದ ಬಹುತೇಕ ಜಲಾಶಯಗಳು ತುಂಬಿ ಹರಿಯುತ್ತಿವೆ. ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪವನ್ – ಕಂಗನಾ ಎಂಬ ‘ಬುದ್ಧಿ’ವಂತರು ಮತ್ತು ಬಿಜೆಪಿ
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ರಾಯಚೂರು, ಕೊಪ್ಪಳ, ಹಾವೇರ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆಯಲ್ಲಿ ಕೂಡ ಮಳೆಯಾಗಲಿದೆ.
ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 35-45 ಕಿ.ಮೀ ಯಿಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕಿಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಲಾಗಿದೆ.
ಬೆಳ್ತಂಗಡಿ, ಉಡುಪಿ, ಉಡುಪಿ, ಪಣಂಬೂರು, ಹೊನ್ನಾವರ, ಕದ್ರಾ, ಕುಮಟಾ, ಬನವಾಸಿ, ಬೆಳಗಾವಿ, ಕುಡತಿನಿ, ಸೇಡಂ, ಕಲಬುರಗಿ, ಕಾರವಾರ, ಸುಳ್ಯ, ಪುತ್ತೂರು, ಶಿರಾಲಿ, ಸಿದ್ದಾಪುರ, ಅಂಕೋಲಾ, ಕುಂದಾಪುರ, ಮಂಕಿ, ಧರ್ಮಸ್ಥಳ, ಜೇವರ್ಗಿ, ಭಾಗಮಂಡಲ, ಕೋಟ, ಕಾರ್ಕಳ, ಲಿಂಗನಮಕ್ಕಿ, ವಿಜಯನಗರ, ದಾವಣಗೆರೆ, ಹಿರಿಯೂರಿನಲ್ಲಿ ಮಳೆಯಾಗಿದೆ.