ಬೆಂಗಳೂರು ಸೇರಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಅಕ್ಟೋಬರ್ 20ರವರೆಗೆ ಮಳೆಯಾಗಲಿದ್ದು, ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮೈಸೂರು, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬಾಳೆಹೊನ್ನೂರು, ಕಾರ್ಕಳ, ನಂಜನಗೂಡು, ಜಯಪುರ, ಬೆಳ್ಳೂರು, ಸೋಮವಾರಪೇಟೆ, ಸರಗೂರು, ಉಪ್ಪಿನಂಗಡಿ, ಕದ್ರಾ, ಶಿರಾಲಿ, ಹಳಿಯಾಳ, ಹಾವೇರಿ, ಚಾಮರಾಜನಗರ, ಕುಶಾಲನಗರ, ನಾಪೊಕ್ಲು, ಕಮ್ಮರಡಿ, ಹುಣಸೂರಿನಲ್ಲಿ ಮಳೆಯಾಗಿದೆ. ಹಾರಂಗಿ, ಸಿದ್ದಾಪುರ, ಉಡುಪಿ, ಯಲ್ಲಾಪುರ, ಸಂಕೇಶ್ವರ, ಹಿಡಕಲ್, ಚಿಕ್ಕೋಡಿ, ಯಡವಾಡ, ಮಹಾಲಿಂಗಪುರ, ಭಾಗಮಂಡಲ, ಪೊನ್ನಂಪೇಟೆ, ಎಚ್ಡಿಕೋಟೆ, ಮದ್ದೂರು, ದಾವಣಗೆರೆ, ಗುಂಡ್ಲುಪೇಟೆ, ನಾಗಮಂಗಲದಲ್ಲಿ ಮಳೆಯಾಗಿದೆ.
ರಾಯಚೂರಿನಲ್ಲಿ 33.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 17.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸೋಮವಾರ ಬೆಳಗಿನ ಜಾವದಿಂದಲೇ ಗುಡುಗು ಸಹಿತ ಮಳೆಯಾಗುತ್ತಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಚ್‌ಡಿಕೆ V/s ಎಡಿಜಿಪಿ ಚಂದ್ರಶೇಖರ್- ಇದು ಸಾಮಾನ್ಯ ವಿದ್ಯಮಾನವಲ್ಲ
ಎಚ್ಎಎಲ್ನಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 27.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೀದರ್ನಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 32.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಗದಗದಲ್ಲಿ 30.4ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 31.9ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 30.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Yedina is an excellent news app know kannada which gives news impartiality, I wish it every success.