ಮುಂದಿನ ನಾಲ್ಕು ದಿನ ಭಾರೀ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

Date:

Advertisements

ಇಂದು ಮತ್ತು ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂನಚೆ ನೀಡಿದೆ. ಹಾಗೆಯೇ ಜುಲೈ 13ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಕರ್ನಾಟಕದಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು ಜುಲೈ 15ರವರೆಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಇದನ್ನು ಓದಿದ್ದೀರಾ? ಒಂಬತ್ತು ದಿನ ಮುನ್ನವೇ ದೇಶವನ್ನು ಆವರಿಸಿದ ಮುಂಗಾರು ಮಳೆ: ಹಠಾತ್ ಪ್ರವಾಹದ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

Advertisements

ಬೆಳಗಾವಿ, ವಿಜಯಪುರ, ಬೀದರ್, ಧಾರವಾಡ, ಕಲಬುರಗಿ, ಗದಗ ಜಿಲ್ಲೆಗಳಲ್ಲಿ ಒಂದೆರಡು ಕಡೆ ಗಂಟೆಗೆ 40-50 ಕಿ.ಮೀ. ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ. ಹಾವೇರಿ, ಬಾಗಲಕೋಟೆ, ರಾಯಚೂರು, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ. ನಿರಂತರ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

rain

ಇನ್ನು ಕರ್ನಾಟಕದ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೋಲಾರ, ಮೈಸೂರು, ಹಾಸನ ಮತ್ತು ಮಂಡ್ಯ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜುಲೈ 8ರಿಂದ 12ರವರೆಗೆ ಕರಾವಳಿ ಮತ್ತು ಹೊರಗೆ ಗಾಳಿ ವೇಗವಾಗಿ ಬೀಸುವ ಸಾಧ್ಯತೆಯಿರುವ ಕಾರಣ ಈ ಸಮಯದಲ್ಲಿ ಮೀನುಗಾರರು ಸಮುದ್ರ ಪ್ರದೇಶಕ್ಕೆ ತೆರಳಬಾರದು ಎಂದೂ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ. ಹಗುರ ಮಳೆಯಾಗುವ ಸಾಧ್ಯತೆಯಿದೆ. ನಿರಂತರ ಗಾಳಿ ಬೀಸುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30 ಡಿಗ್ರಿ ಸೆಲ್ಸಿಯಸ್‌ ಮತ್ತು 20 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆಯಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಸುತ್ತ ವ್ಯವಸ್ಥಿತ ಷಡ್ಯಂತ್ರ, ಹಿಂದಿನ ಶಕ್ತಿಗಳನ್ನು ಎಸ್‌ಐಟಿ ಪತ್ತೆ ಮಾಡಲಿ: ಸುನಿಲ್‍ ಕುಮಾರ್

ಧರ್ಮಸ್ಥಳಕ್ಕೆ ಸಂಬಂಧಿಸಿ ಎಸ್‍ಐಟಿ ತನಿಖೆಯಲ್ಲಿ ಬಿಜೆಪಿ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು...

ನಾನು ದಲಿತರನ್ನು ವಿರೋಧಿಸಿಲ್ಲ, ನನ್ನಿಂದ ತಪ್ಪಾಗಿದ್ದರೆ ಕ್ಷಮೆ ಇರಲಿ: ಶಾಸಕ ಜಿ.ಟಿ.ದೇವೇಗೌಡ

ಸರ್ಕಾರದ ಪಾಲುಗಾರಿಕೆ ಇರುವ ಸಂಘಗಳಲ್ಲಿ ನಾಮನಿರ್ದೇಶಿತ ಸದಸ್ಯರನ್ನು ಸೇರಿಸಿ ಹಾಗೂ ಒಬ್ಬ...

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆ ಸ್ವಾಗತ, ಬಿಜೆಪಿ ಮುಖಂಡರ ನಡೆಗೆ ಖಂಡನೆ: ಸಿಪಿಐಎಂ

ನಾಡಹಬ್ಬ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ, ಲೇಖಕಿ ಬಾನು ಮುಷ್ತಾಕ್...

ವಿಧಾನಸಭೆ ಅಧಿವೇಶನದಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದಕ್ಕೆ ಕ್ಷಮೆಯಾಚಿಸಿದ ಡಿ ಕೆ ಶಿವಕುಮಾರ್

ವಿಧಾನಸಭೆ ಅಧಿವೇಶನದಲ್ಲಿಯೇ ‘ನಮಸ್ತೆ ಸದಾ ವತ್ಸಲೇ ಮಾತೃಭೂಮಿ’ ಎಂದು ಆರ್‌ಎಸ್‌ಎಸ್‌ ಗೀತೆ...

Download Eedina App Android / iOS

X