ಕರಾವಳಿ ಭಾಗದ ಕೆಲವೆಡೆ ಬುಧವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಇಲಾಖೆಯು ‘ಯೆಲ್ಲೊ ಅಲರ್ಟ್’ ನೀಡಿದೆ. ಈ ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗುವ ಸಂಭವವಿದ್ದು, ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಹಲವೆಡೆ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಂಶಯ ಪರಿಹರಿಸಿ, ನ್ಯಾಯಾಂಗದ ಘನತೆ ಎತ್ತಿ ಹಿಡಿದ ನ್ಯಾಯಮೂರ್ತಿ
ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಇದೇ 13ರವರೆಗೂ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.
ಗುಂಡ್ಲುಪೇಟೆ ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಹಾಗೂ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಮಂಗಳವಾರ ಮಧ್ಯಾಹ್ನ ಉತ್ತಮ ಮಳೆ ಸುರಿದಿದೆ. ಹುರುಳಿ, ಆಲಸಂದೆ ಸೇರಿದಂತೆ ಮಳೆಯಾಶ್ರಿತ ಬೆಳೆಗಳಿಗೆ ಅನುಕೂಲವಾಗಿದೆ. ತಗ್ಗು ಪ್ರದೇಶದಲ್ಲಿ ಮಳೆ ನಿಂತು ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ.
