ರಾಜ್ಯದ ಹಲವು ಭಾಗಗಳಲ್ಲಿ ಮೇ 13ರಿಂದ 17ರವರೆಗೆ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ. ಅಲ್ಲಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹಾಗೆಯೇ ಇಂದು ರಾಜ್ಯದಾದ್ಯಂತ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕೆಲವೆಡೆ ಗುಡುಗು, ಗಾಳಿ ಸಹಿತ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ. ಹೀಗಾಗಿ ಯೆಲ್ಲೋ ಅರ್ಲಟ್ ಘೋಷಿಸಲಾಗಿದೆ.
ಇದನ್ನು ಓದಿದ್ದೀರಾ? ಏಪ್ರಿಲ್-ಜೂನ್ ತಿಂಗಳುಗಳಲ್ಲಿ ಸಾಮಾನ್ಯಕ್ಕಿಂತ ಅಧಿಕ ತಾಪಮಾನ: ಹವಾಮಾನ ಇಲಾಖೆ ಮುನ್ಸೂಚನೆ
ಇನ್ನು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯ ಕೆಲವೆಡೆ ಗುಡುಗು ಸಹಿತ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.
ಮುಂದಿನ 7 ದಿನಗಳ #ಹವಾಮಾನ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: IMD)
— Karnataka State Natural Disaster Monitoring Centre (@KarnatakaSNDMC) May 12, 2025
ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಮೇ 13 ರಿಂದ 17 ರವರೆಗೆ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ, ಇನ್ನುಳಿದ ದಿನಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. #KSNDMC @KarnatakaVarthe
ದಕ್ಷಿಣ ಒಳನಾಡಿನ ಚಾಮರಾಜನಗರ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಭಾರಿ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಇದನ್ನು ಓದಿದ್ದೀರಾ? ಕರ್ನಾಟಕದ 17 ಜಿಲ್ಲೆಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ
ಇನ್ನು ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳ ಹಲವೆಡೆ ಗುಡುಗು ಸಹಿತ ಗಾಳಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವೆಡೆ ಮೇ 17ರವರೆಗೆ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ಉಲ್ಲೇಖಿಸಲಾಗಿದೆ.
