ಮುಂದಿನ 4 ದಿನ ರಾಜ್ಯದ 21 ಜಿಲ್ಲೆಗಳಲ್ಲಿ ಮಳೆ ಅಬ್ಬರ: ಹವಾಮಾನ ಇಲಾಖೆ

Date:

ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಒಟ್ಟು 21 ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ನೈಋತ್ಯ ಮುಂಗಾರು ದುರ್ಬಲಗೊಂಡಿದ್ದರೂ, ದಕ್ಷಿಣ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ವಾತಾವರಣದಲ್ಲಿ ಬದಲಾವಣೆಯಾಗಿದ್ದು, ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.

- Advertisement -

ದಕ್ಷಿಣ ಒಳನಾಡು ಮತ್ತು ಮಲೆನಾಡಿನ 12 ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ತುಮಕೂರು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು ಮತ್ತು ಬಿರುಗಾಳಿ ಸಹಿತ (ಗಂಟೆಗೆ 30-40 ಕಿ.ಮೀ ವೇಗ) ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಇದನ್ನೂ ಓದಿ: ರಾಜ್ಯದ 9 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಕರಾವಳಿಯ 3 ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಉತ್ತರ ಒಳನಾಡಿನ 6 ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಬೀದರ್, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಹೇಳಿದೆ.

ಉಳಿದಂತೆ ಬಾಗಲಕೋಟೆ, ವಿಜಯಪುರ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ ಹಾಗೂ ಹಾವೇರಿ ಸೇರಿದಂತೆ 10 ಜಿಲ್ಲೆಗಳಲ್ಲಿ ಪ್ರಮುಖವಾಗಿ ಒಣಹವೆ ಮುಂದುವರಿಯಲಿದೆ.

ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ನಾಲ್ಕು ದಿನ ಆಕಾಶವು ಭಾಗಶಃ ಮೋಡಕವಿದಂತಿರಲಿದೆ. ಸಂಜೆ ಅಥವಾ ರಾತ್ರಿಯ ವೇಳೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ತಾಪಮಾನವು ಗರಿಷ್ಠ 31°C ಮತ್ತು ಕನಿಷ್ಠ 21°C ಆಸುಪಾಸಿನಲ್ಲಿರಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ, ಪೊಲೀಸರು, ಕಟ್ಟಡ ಕಾರ್ಮಿಕರಿಗೂ ಆಘಾತ!

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್,...

ವಿಜಯಪುರ | ಅಂತಿಮ ಮತದಾರರ ಪಟ್ಟಿ ಪ್ರಕಟ: ನಾಗಠಾಣದಲ್ಲಿ ಅತಿ ಹೆಚ್ಚು ಮತದಾರರು

ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಅಕ್ಟೋಬರ್ 27ರಂದು...

ಆಸ್ಕರ್‌ 2027 | ಇವೇ, ರೇಸ್‌ನಲ್ಲಿರುವ 9 ಬಹುನಿರೀಕ್ಷಿತ ಸಿನಿಮಾಗಳು!

2027ರ ಪ್ರತಿಷ್ಠಿತ ಅಕಾಡೆಮಿ ಪ್ರಶಸ್ತಿ (ಆಸ್ಕರ್) ರೇಸ್‌ಗೆ ಈಗಿನಿಂದಲೇ ಕೌಂಟ್‌ಡೌನ್ ಆರಂಭವಾಗಿದೆ....