ರಾಜ್ಯದಲ್ಲಿ ಮಧ್ಯಾಹ್ನವೇ ಮಳೆ ಅಬ್ಬರ; 13 ಜಿಲ್ಲೆಗಳಲ್ಲಿ ಇನ್ನೂ 4 ದಿನ ಭರ್ಜರಿ ಮಳೆ: ಹವಾಮಾನ ಇಲಾಖೆ

Date:

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಿಂಗಾರು ಮಳೆ ಅಬ್ಬರ ಹೆಚ್ಚಾಗಿದೆ. ಗುರುವಾರ ಮಧ್ಯಾಹ್ನವೇ ಬೆಂಗಳೂರು, ತುಮಕೂರು, ಹಾಸನ ಸೇರಿದಂತೆ ನಾನಾ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿದಿದೆ. ಇನ್ನೂ 4 ದಿನಗಳ ಕಾಲ ಸುಮಾರು 13 ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

- Advertisement -

ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ ಹಾಗೂ ಚಾಮರಾಜನಗರ ಮತ್ತು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಕ್ಟೋಬರ್ 27ರವರೆಗೆ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಟಿಪ್ಪು ನಿಜ ಕನಸು’ಗಳಿಂದ ‘ಗಾಂಧೀ ಹತ್ಯೆಯ ಸತ್ಯ’ದವರೆಗೆ: ಇತಿಹಾಸ...

ನಾಟಕಕಾರ, ಬರಹಗಾರ ಅಡ್ಡಂಡ ಕಾರ್ಯಪ್ಪ ಹಿಂದಿನಿಂದಲೂ ಒಂದಲ್ಲೊಂದು ಕಾರಣಕ್ಕೆ ಸಾರ್ವಜನಿಕ ಚರ್ಚೆಯ ಮುನ್ನೆಲೆಗೆ ಬಂದಿರುವ ಹೆಸರು. ಇತಿಹಾಸದ ನಿರೂಪಣೆ, ರಂಗಭೂಮಿಯ ಬಳಕೆ, ಧಾರ್ಮಿಕ ಮತ್ತು ರಾಜಕೀಯ ವಿಚಾರಗಳ ಅಭಿವ್ಯಕ್ತಿ ಹಾಗೂ ಕೋಮು ಸೌಹಾರ್ದದ...

ಭಾವೈಕ್ಯತೆಯ ಹೆಜ್ಜೆನಾದ: ಕದ್ರಿ ದೇಗುಲದ ಯಕ್ಷಗಾನದಲ್ಲಿ ‘ಮಹಿಷಾಸುರ ಮರ್ದಿನಿ’ಯಾಗಿ...

ಕಲೆಗೆ ಯಾವುದೇ ಧರ್ಮ, ಜಾತಿಗಳ ಭೇದವಿಲ್ಲ ಎಂಬುದನ್ನು ಕರಾವಳಿಯ ಹೆಮ್ಮೆಯ ಸಾಂಪ್ರದಾಯಿಕ ಕಲೆ ಮತ್ತೊಮ್ಮೆ ಅತ್ಯಂತ ಸುಂದರವಾಗಿ ಸಾಬೀತುಪಡಿಸಿದೆ. ಮಂಗಳೂರಿನ ಐತಿಹಾಸಿಕ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವೇದಿಕೆಯಲ್ಲಿ ಮುಸ್ಲಿಂ ಮಹಿಳೆಯೊಬ್ಬರು 'ಮಹಿಷಾಸುರ...

ಪದವೀಧರರು, ಶಿಕ್ಷಕರೇ ಗಮನಿಸಿ.. ಅ.23ರಂದು ಪ್ರಾಶಸ್ತ್ಯ ಮತ ಚಲಾಯಿಸುವಾಗ...

ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆ-2026ರ ಮತದಾನ ಅಕ್ಟೋಬರ್ 23ರಂದು ನಡೆಯಲಿದೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯನ್ನು ಆರಿಸಲು ಪ್ರಾಶಸ್ತ್ಯ ಮತದಾನ ಪದ್ಧತಿಯನ್ನು ಅನುಸರಿಸಬೇಕು. ಈ ಸಂದರ್ಭದಲ್ಲಿ...

ಬೆಂಗಳೂರಿನಲ್ಲಿ ಗುರುವಾರ ಮಧ್ಯಾಹ್ನ ದಿಢೀರ್ ಮಳೆಯಾಗಿದ್ದು, ವಾಹನ ಸಂಚಾರ ಮತ್ತು ಜನಜೀವನ ಅಸ್ತವ್ಯಸ್ತಗೊಂಡಿದೆ. ಜಯನಗರ, ಲಾಲ್‌ಬಾಗ್, ಕೆಆರ್ ಮಾರ್ಕೆಟ್, ಕಾರ್ಪೊರೇಷನ್, ಶಾಂತಿನಗರ, ವಿಧಾನಸೌಧ, ರಾಜಾಜಿನಗರ ಹಾಗೂ ಮಲ್ಲೇಶ್ವರಂ ಭಾಗಗಳಲ್ಲಿ ಮಳೆ ಸುರಿದಿದೆ.

ಏಕಾಏಕಿ ಸುರಿದ ಈ ಮಳೆಯಿಂದಾಗಿ ಕೆಲಸ ಕಾರ್ಯಗಳಿಗೆ ತೆರಳುತ್ತಿದ್ದ ಸಾರ್ವಜನಿಕರು, ಪಾದಚಾರಿಗಳು ಹಾಗೂ ದ್ವಿಚಕ್ರ ವಾಹನ ಸವಾರರು ಪರದಾಡುವಂತಾಗಿದೆ.

ಈ ಲೇಖನ ಓದಿದ್ದೀರಾ?: ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ ಸರ್ಕಾರಗಳು!

ಹಿಂಗಾರು ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಒಳಹರಿವು ಮತ್ತು ನೀರಿನ ಸಂಗ್ರಹಣೆ ಚೇತರಿಕೆ ಕಂಡಿದೆ. ಕೆಆರ್‌ಎಸ್ ಜಲಾಶಯದಲ್ಲಿ ಪ್ರಸ್ತುತ ಹೊರಹರಿವಿಗಿಂತ ಒಳಹರಿವಿನ ಮಟ್ಟ ಹೆಚ್ಚಿದ್ದು, 3,080 ಕ್ಯುಸೆಕ್ ನೀರು ಹರಿದುಬರುತ್ತಿದೆ. ಕೆಆರ್‌ಎಸ್ ಜಲಾಶಯದ ಗರಿಷ್ಠ ಮಟ್ಟ 2,468 ಅಡಿಗಳಾಗಿದ್ದು, ಪ್ರಸ್ತುತ ನೀರಿನ ಮಟ್ಟ 2,445.86 ಅಡಿಗಳಷ್ಟಿದೆ.

ಅಂತಯೇ, ಹೇಮಾವತಿ ಜಲಾಶಯದಲ್ಲಿ 16.180 ಟಿಎಂಸಿ (ಶೇ.43.60) ಹಾಗೂ ಕಬಿನಿ ಜಲಾಶಯದಲ್ಲಿ 11.300 ಟಿಎಂಸಿ (ಶೇ.57.90) ನೀರು ಸಂಗ್ರಹಗೊಂಡಿದ್ದು, ಕಬಿನಿಗೆ 1,021 ಕ್ಯುಸೆಕ್ ಒಳಹರಿವು ಇದೆ. ಕೃಷ್ಣಾ ಕೊಳ್ಳದ ಆಲಮಟ್ಟಿ ಜಲಾಶಯದಲ್ಲಿ 80.019 ಟಿಎಂಸಿ (ಶೇ.65.01) ನೀರಿದ್ದು, ಒಳಹರಿವು ಶೂನ್ಯವಿದ್ದರೂ 29,062 ಕ್ಯುಸೆಕ್ ಹೊರಹರಿವು ದಾಖಲಾಗಿದೆ.  ತುಂಗಭದ್ರಾ ಜಲಾಶಯದಲ್ಲಿ ಶೇ.47.59ರಷ್ಟು ಅಂದರೆ 50.344 ಟಿಎಂಸಿ ಸಂಗ್ರಹವಿದ್ದು, ಹಾರಂಗಿ ಜಲಾಶಯದಲ್ಲಿ ನೀರಿನ ಸಂಗ್ರಹ ಪ್ರಮಾಣ ಶೇ.55.84ರಷ್ಟಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾವೈಕ್ಯತೆಯ ಹೆಜ್ಜೆನಾದ: ಕದ್ರಿ ದೇಗುಲದ ಯಕ್ಷಗಾನದಲ್ಲಿ ‘ಮಹಿಷಾಸುರ ಮರ್ದಿನಿ’ಯಾಗಿ ಮಿಂಚಿದ ಆರ್ಷಿಯಾ ಖಾನ್

ಕಲೆಗೆ ಯಾವುದೇ ಧರ್ಮ, ಜಾತಿಗಳ ಭೇದವಿಲ್ಲ ಎಂಬುದನ್ನು ಕರಾವಳಿಯ ಹೆಮ್ಮೆಯ ಸಾಂಪ್ರದಾಯಿಕ...

ಅಭಿವೃದ್ಧಿ ಹೆಸರಲ್ಲಿ 23 ಲಕ್ಷ ಮರಗಳಿಗೆ ಕುತ್ತು; ಅರುಣಾಚಲದ ಜಲವಿದ್ಯುತ್‌ ಯೋಜನೆ ಅನುಮತಿ ಕೋರಿದ NHPC

ಅರುಣಾಚಲ ಪ್ರದೇಶದಲ್ಲಿ 1,720 ಮೆಗಾವ್ಯಾಟ್ ಸಾಮರ್ಥ್ಯದ ಕಮಲಾ ಜಲವಿದ್ಯುತ್ ಯೋಜನೆ ಅನುಷ್ಠಾನಗೊಳಿಸಲು...

ಭಾರತ–ನ್ಯೂಜಿಲೆಂಡ್ ಟಿ20 ಸರಣಿ: ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ

ಕ್ರೈಸ್ಟ್‌ಚರ್ಚ್‌ನ ಹ್ಯಾಗ್ಲಿ ಓವಲ್ ಮೈದಾನದಲ್ಲಿ ಗುರುವಾರ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಐದು...

ಬೆಂಗಳೂರು | ಮಧ್ಯರಾತ್ರಿ 3 ಗಂಟೆಯಾದರೂ ಪಟಾಕಿ ಸದ್ದು; ಫನ್ ವರ್ಲ್ಡ್ ವಿರುದ್ಧ ರಮ್ಯಾ ಕಿಡಿ

ಬೆಂಗಳೂರಿನಲ್ಲಿ ರಾತ್ರಿ ವೇಳೆ ಸಾರ್ವಜನಿಕರ ನಿದ್ದೆಗೆ ಭಂಗ ತರುವ ಮತ್ತು ಶಬ್ದಮಾಲಿನ್ಯ...