ರಾಜ್ಯದ 12 ಜಿಲ್ಲೆಗಳಲ್ಲಿ ಅಕ್ಟೋಬರ್ 22ರವರೆಗೆ ಭಾರೀ ಮಳೆ: ಹವಾಮಾನ ಇಲಾಖೆ

Date:

ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಮಳೆಯ ಕೊರತೆ ಎದುರಾಗಿದ್ದರೂ, ಹಿಂಗಾರು ಮಳೆಯ ಅಬ್ಬರ ಹೆಚ್ಚಾಗದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಅಕ್ಟೋಬರ್‌ 22ರವರೆಗೆ ಸುಮಾರು 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

- Advertisement -

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ, ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ರಸ್ತೆಗಳು ಜಲಾವೃತಗೊಂಡು ವಾಹನ ಸವಾರರು ಪರದಾಡುವಂತಾಗಿದೆ. ಗ್ರಾಮೀಣ ಭಾಗಗಳಲ್ಲಿ ಮನೆಗಳು, ಕಟ್ಟಡಗಳು ಹಾಗೂ ಜಾನುವಾರುಗಳಿಗೆ ಹಾನಿಯಾಗಿದೆ. ಮುಂದಿನ ದಿನಗಳಲ್ಲಿಯೂ ಮಳೆ ಸುರಿಯಲಿದ್ದು, ಹಲವು ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್‌ಗಳನ್ನು ಘೋಷಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ತುಮಕೂರು, ದಾವಣಗೆರೆ, ವಿಜಯನಗರ, ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಅಬ್ಬರಿಸಲಿದೆ.

 ಪೈಕಿ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಉಳಿದಂತೆ ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

ಅಕ್ಟೋಬರ್ 18ರಿಂದ 23ರ ವರೆಗೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಸುರಿಯುವ ನಿರೀಕ್ಷೆಯಿದೆ. ಈಪ್ರದೇಶಗಳಲ್ಲಿ ಕೆಲವೆಡೆ 64.5 ಮಿಲಿಮೀಟರ್‌ನಿಂದ 115.5 ಮಿಲಿಮೀಟರ್‌ವರೆಗೆ ಭಾರೀ ಪ್ರಮಾಣದಲ್ಲಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಇಲಾಖೆ ಅಂದಾಜಿಸಿದೆ.

ಚಿಕ್ಕಮಗಳೂರು, ತುಮಕೂರು, ದಾವಣಗೆರೆ, ವಿಜಯನಗರ, ಬಳ್ಳಾರಿ, ಚಿತ್ರದುರ್ಗ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಮತ್ತು ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನಗಣತಿಯಲ್ಲೂ ಆರೆಸ್ಸೆಸ್‌ ಹಸ್ತಕ್ಷೇಪದ ಆತಂಕ: ಕೇಂದ್ರದ ಹೊಸ ನಿಯಮಕ್ಕೆ ಕಾಂಗ್ರೆಸ್ ಆಕ್ಷೇಪ!

2027ರ ಜನಗಣತಿಗೆ ಗಣತಿದಾರರಾಗಿ ಕಾರ್ಯನಿರ್ವಹಿಸುವವರ ಅರ್ಹತಾ ವ್ಯಾಪ್ತಿಯನ್ನು ಕೇಂದ್ರ ಸರ್ಕಾರ ವಿಸ್ತರಿಸಿರುವುದು...

ಬಬಲೇಶ್ವರ ನಾಕಾ ರಸ್ತೆ ಕಾಮಗಾರಿ ವಿಳಂಬಕ್ಕೆ ಆಪ್ ಆಕ್ರೋಶ; ಪಾಲಿಕೆಗೆ ಒಂದು ವಾರ ಗಡುವು

ಅಭಿವೃದ್ಧಿ ಕಾಮಗಾರಿ ಹೆಸರಿನಲ್ಲಿ ಬಬಲೇಶ್ವರ ನಾಕಾದಿಂದ ನಾಯರಾ ಪೆಟ್ರೋಲ್ ಪಂಪ್‌ವರೆಗಿನ ರಸ್ತೆಯ...

ಭಾರತ & ಚೀನಾದ H-1B ಉದ್ಯೋಗಿಗಳಿಂದ ಅಮೆರಿಕನ್ನರ ಉದ್ಯೋಗಕ್ಕೆ ಕುತ್ತು; ಸಂಸದ ರಿಲೆ ಮೂರ್ ಆರೋಪ

ಅಮೆರಿಕದ ಕಂಪ್ಯೂಟರ್‌ ಸೈನ್ಸ್‌ ಪದವೀಧರರ ಉದ್ಯೋಗಾವಕಾಶಗಳನ್ನು ಭಾರತ ಮತ್ತು ಚೀನಾದಿಂದ ಬರುವ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ; ಸುಪ್ರೀಂನದ್ದು ದ್ವಂದ್ವ ನಿಲುವಲ್ಲವೇ?

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ...