ರಾಜ್ಯದಲ್ಲಿ ಮಳೆ ಅಬ್ಬರ: 23 ಜಿಲ್ಲೆಗಳಲ್ಲಿ ಇನ್ನೂ 4 ದಿನ ಮಳೆ ಆರ್ಭಟ

Date:

ಕರ್ನಾಟಕದಲ್ಲಿ ಕಳೆದ ಎರಡು ದಿನಗಳಿಂದ ಮಳೆ ಅಬ್ಬರ ಹೆಚ್ಚಾಗಿದೆ. ಮುಂಗಾರು ಪೂರ್ವ ಮಳೆಗೆ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳು ನಲುಗಿ ಹೋಗಿವೆ. ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಮಳೆ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

- Advertisement -

ಹವಾಮಾನ ಇಲಾಖೆಯು ಮುಂದಿನ ನಾಲ್ಕು ದಿನಗಳ ಕಾಲ ರಾಜ್ಯದ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಮತ್ತು 12 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಮೇ 23ರವರೆಗೆ ರಾಜ್ಯದ ನಾನಾ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಿದೆ.

ಇನ್ನು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ತುಮಕೂರು ಜಿಲ್ಲೆಗಳಲ್ಲಿಯೂ ಮಳೆ ಸುರಿಯಲಿದ್ದು, ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ಈ ಲೇಖನ ಓದಿದ್ದೀರಾ?: ‘ತಿರಂಗಾ ಯಾತ್ರೆ’ ಯಾರಿಗಾಗಿ? ದೇಶಕ್ಕೋ-ಮೋದಿಗೋ?

ಶನಿವಾರ ಮಧ್ಯಾಹ್ನದಿಂದಲೇ ಬೆಂಗಳೂರು ಸೇರಿ ಹಲವೆಡೆ ಭಾರೀ ಮಳೆಯಾಗಿದೆ. ಬೆಂಗಳೂರಿನಲ್ಲಿ ಬೆಂಬಿಡದೆ ಸುರಿದ ಮಳೆಯಿಂದಾಗಿ, ಹಲವಾರು ಪ್ರದೇಶಗಳು ಜಲಾವೃತಗೊಂಡಿದ್ದವು. ಅದರಲ್ಲೂ ಸಾಯಿ ಲೇಔಟ್‌ ಸಂಪೂಂರ್ಣ ಜಲವೃತಗೊಂಡು, ಜನಜೀವನ ಅಸ್ತವ್ಯಸ್ತಗೊಂಡಿತ್ತು. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಆರ್‌ಸಿಬಿ-ಕೆಕೆಆರ್‌ ನಡುವಿನ ಪಂದ್ಯ ರದ್ದಾಗಿದೆ.

ಬೆಂಗಳೂರು ಮಾತ್ರವಲ್ಲದೆ, ಶಿವಮೊಗ್ಗ, ದಾವಣಗೆರೆ, ವಿಜಯಪುರ, ಮಂಡ್ಯ, ಹಾಸನ, ಮೈಸೂರು, ಕೋಲಾರ, ಗದಗ, ಕೊಡಗು ಜಿಲ್ಲೆಗಳಲ್ಲಿಯೂ ಭಾರೀ ಮಳೆಯಾಗಿದೆ. ಗುಂಡ್ಲುಪೇಟೆ, ಗುತ್ತಲ್, ಹರಪನಹಳ್ಳಿ, ಧರ್ಮಸ್ಥಳ, ಬೆಳ್ಳೂರು, ನಾಗಮಂಗಲ, ಕುಮಟಾ, ಕದ್ರಾ, ಪುತ್ತೂರು, ಯಗಟಿ, ಸೋಮವಾರಪೇಟೆ, ಬರಗೂರು, ಟಿಜಿ ಹಳ್ಳಿ, ನಾಪೋಕ್ಲು, ಮಸ್ಕಿ, ಬಾದಾಮಿ, ಅಂಕೋಲಾ ಸೇರಿದಂತೆ ನಾನಾ ಪ್ರದೇಶಗಳಲ್ಲಿ ಭರ್ಜರಿ ಮಳೆಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...