ರಾಜ್ಯದಾದ್ಯಂತ ಮುಂದಿನ 5 ದಿನಗಳವರೆಗೆ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಗಾಳಿಯ ವೇಗ ಗಂಟೆಗೆ 30-50 ಕಿಮೀ ತಲುಪುವ ಸಾಧ್ಯತೆಯಿದೆ.
ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿನ ಒಂದೆರಡು ಸ್ಥಳಗಳಲ್ಲಿ ಮುಂದಿನ ಐದು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಹೇಳಿದೆ.
ಇದನ್ನು ಓದಿದ್ದೀರಾ? ಏಪ್ರಿಲ್-ಜೂನ್ ತಿಂಗಳುಗಳಲ್ಲಿ ಸಾಮಾನ್ಯಕ್ಕಿಂತ ಅಧಿಕ ತಾಪಮಾನ: ಹವಾಮಾನ ಇಲಾಖೆ ಮುನ್ಸೂಚನೆ
ಇನ್ನು ಉತ್ತರ ಒಳನಾಡಿನ ರಾಯಚೂರು, ಕೊಪ್ಪಳ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿಒಣ ಹವಾಮಾನ ಇರುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ದಕ್ಷಿಣ ಒಳನಾಡಿನ ವಿಜಯನಗರ, ಶಿವಮೊಗ್ಗ, ಚಿಕ್ಕಮಗಳೂರು, ತುಮಕೊರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿಒಣ ಹವಾಮಾನ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ 5 ದಿನಗಳ #ಹವಾಮಾನ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: IMD)
— Karnataka State Natural Disaster Monitoring Centre (@KarnatakaSNDMC) April 13, 2025
ರಾಜ್ಯದಾದ್ಯಂತ ಮುಂದಿನ 5 ದಿನಗಳವರೆಗೆ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 30-50 ಕಿಮೀ ತಲುಪುವ ಸಾದ್ಯತೆಯಿದ್ದು, ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ. pic.twitter.com/5bMLbmPSO4
ಇನ್ನು ಮುಂದಿನ ಐದು ದಿನಗಳವರೆಗೆ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಗರಿಷ್ಠ ತಾಪಮಾನದಲ್ಲಿ ದೊಡ್ಡ ಬದಲಾವಣೆಯಾಗಿಲ್ಲ, ತಾಪಮಾನ ಕುಸಿಯುವ ಸಾಧ್ಯತೆಯಿದೆ. ಮುಂದಿನ ಐದು ದಿನಗಳವರೆಗೆ ಉತ್ತರ ಒಳನಾಡಿನಲ್ಲಿ ಗರಿಷ್ಠ ತಾಪಮಾನದಲ್ಲಿ ಯಾವುದೇ ಬದಲಾವಣೆಯಾಗುವುದಿಲ್ಲ ಎಂದು ಇಲಾಖೆ ಹೇಳಿದೆ.
