ಬೆಂಗಳೂರು ಸೇರಿ ಎರಡು ದಿನ ರಾಜ್ಯದಲ್ಲಿ ವರುಣ ಅಬ್ಬರಿಸುವುದಾಗಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ಸದ್ಯ ಕರಾವಳಿಯಲ್ಲಿ ಗಾಳಿಯ ವೇಗ ಕೂಡ ಹೆಚ್ಚಾಗಲಿದ್ದು, ಇನ್ನೆರಡು ದಿನಗಳ ಕಾಲ ರಾಜ್ಯದ ಕೆಲ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ನಾಳೆ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ರಾಜಧಾನಿಯಲ್ಲೂ ಮಳೆ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿಎಸ್ ಪಾಟೀಲ್ ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗೋಪಾಲ್ ಜೋಶಿ ಪ್ರಕರಣ ಮತ್ತು ಮಾರಿಕೊಂಡ ಮಾಧ್ಯಮಗಳು
ಕರಾವಳಿಯಲ್ಲಿ ಪ್ರತಿ ಗಂಟೆಗೆ 35 ಕಿ.ಮೀ .ನಿಂದ 55 ಕಿ.ಮೀ .ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಚಂಡಮಾರುತದ ವಾತಾವರಣ ಇರಲಿದೆ. ಆದ್ದರಿಂದ, ಮೀನುಗಾರರು ಎಚ್ಚರವಹಿಸಬೇಕು ಎಂದು ಇಲಾಖೆ ತಿಳಿಸಿದೆ.
ಇದೇ 23ರವರೆಗೂ ರಾಜ್ಯದ ವಿವಿಧೆಡೆ ಭಾರಿ ಮಳೆ ಮುಂದುವರಿಯುವ ಬಗ್ಗೆ ಇಲಾಖೆ ಮುನ್ಸೂಚನೆ ನೀಡಿದೆ. 21ರಂದು ಎಂಟು ಜಿಲ್ಲೆಗಳಿಗೆ, 22ರಂದು 12 ಜಿಲ್ಲೆಗಳಿಗೆ ಹಾಗೂ 23ರಂದು ಐದು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್ ’ ಘೋಷಿಸಲಾಗಿದೆ.
