ಜೂ. 13ರಂದು ರಾಜ್ಯದ ಹಲವೆಡೆ ಭಾರಿ ಮಳೆ: ಹವಾಮಾನ ಇಲಾಖೆ

Date:

ರಾಜ್ಯಕ್ಕೆ ಈಗಾಗಲೇ ಮುಂಗಾರು ಪ್ರವೇಶಿಸಿದ್ದು, ಕರಾವಳಿ ಜಿಲ್ಲೆಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಜೂನ್ 15ರವರೆಗೂ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ. ಜೂನ್ 13ರಂದು ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

- Advertisement -

ಇಂದು ಕರಾವಳಿಯಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಉಳಿದಂತೆ ಜೂನ್ 15ರವರೆಗೂ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಕಾರಣ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಇದನ್ನು ಓದಿದ್ದೀರಾ? ಹವಾಮಾನ ವರದಿ | ಮುಂದಿನ 3 ದಿನ ರಾಜ್ಯದ 14 ಜಿಲ್ಲೆಗಳಲ್ಲಿ ಭಾರೀ ಮಳೆ

ಜೂನ್ 15ರವರೆಗೂ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಗಂಟೆಗೆ ಸುಮಾರು 30-40 ಕಿ.ಮೀ. ವೇಗ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಜೂನ್ 16ರಿಂದ ಎರಡು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ಇನ್ನು ಜೂನ್ 13ರಂದು ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ಹಾವೇರಿ, ಗದಗ ಮತ್ತು ರಾಯಚೂರು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗಂಟೆಗೆ 40-50 ಕಿ.ಮೀ. ಬಿರುಗಾಳಿ, ಗುಡುಗು ಸಹಿತ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಕೊಪ್ಪಳ, ವಿಜಯಪುರ ಜಿಲ್ಲೆಗಳ ಹಲವೆಡೆ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಗುಡುಗು ಮಳೆಯಾಗಲಿದೆ ಎಂದು ಐಎಂಡಿ ಹೇಳಿದೆ.

rain 35

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ. ಬಿರುಗಾಳಿಯೊಂದಿಗೆ ಭಾರೀ ಮಳೆಯಾಗಲಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಹಲವೆಡೆ ಗಂಟೆಗೆ 30-40 ಕಿ.ಮೀ. ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ SIR:​’ಹಳೆಯ’ ಮತದಾರರಿಗೆ ‘ಹೊಸ’ ಫಾರ್ಮ್ ಏಕೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ತರಾಟೆ

ದೆಹಲಿಯಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಹಿಂದಿನ ಮತದಾರರ...

ಡಯಾಜಿಯೊ ಇಂಡಿಯಾದ ನೂತನ ಜನರಲ್ ಕೌನ್ಸೆಲ್ ಆಗಿ ಸಮೀರ್ ಚುಘ್ ನೇಮಕ

ಪ್ರಮುಖ ಮದ್ಯ ಉತ್ಪಾದನಾ ಕಂಪನಿಯಾದ ಡಯಾಜಿಯೊ ಇಂಡಿಯಾ (Diageo India) ಸಂಸ್ಥೆಯ...

ಬೀದರ್‌ | ಶೈಕ್ಷಣಿಕ ಜ್ಞಾನದೊಂದಿಗೆ ಮಾನವೀಯ ಮೌಲ್ಯ ಬೆಳೆಸಿಕೊಳ್ಳಿ : ಜ್ಯೋತಿರ್ಮಯಾನಂದ ಸ್ವಾಮೀಜಿ

ವಿದ್ಯಾರ್ಥಿಗಳು ಶಿಸ್ತು, ಸಂಯಮ, ಪರಿಶ್ರಮ ಹಾಗೂ ಉತ್ತಮ ಮೌಲ್ಯಗಳನ್ನು ನಿತ್ಯ ಜೀವನದಲ್ಲಿ...

ಈ ದಿನ ಸಂಪಾದಕೀಯ | ಎಸ್‌ಐಆರ್‌ ಮುಗೀತು; ಉತ್ತರ ಸಿಗದ ಪ್ರಶ್ನೆಗಳಿನ್ನೂ ಬಾಕಿ ಇವೆ!

ಎಸ್‌ಐಆರ್‌ ಮುಗಿದಿದೆ, ಅಂತಿಮ ಮತದಾರರ ಪಟ್ಟಿಯೂ ಪ್ರಕಟವಾಗಿದೆ. ಆದರೆ ಉತ್ತರ...