ಏ.2ರವರೆಗೆ ರಾಜ್ಯಾದ್ಯಂತ ಗುಡುಗು ಸಹಿತ ಭಾರೀ ಗಾಳಿ, ಮಳೆ: ಹವಾಮಾನ ಇಲಾಖೆ

Date:

ಏಪ್ರಿಲ್ 2ರವರೆಗೆ ರಾಜ್ಯಾದ್ಯಂತ ಒಣ ಹವೆ ಹಾಗೂ ಬಿಸಿಲಿನ ವಾತಾವರಣ ಮುಂದುವರಿಯಲಿದೆ. ಆದರೆ ಮಧ್ಯಾಹ್ನ ನಂತರ, ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಗುಡುಗು, ಸಿಡಿಲು ಸಹಿತ ಭಾರೀ ಗಾಳಿ, ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

- Advertisement -

ಇನ್ನು ಇಂದು ರಾಜ್ಯದಲ್ಲಿ ಮಧ್ಯಾಹ್ನ ನಂತರ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾದಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಇದನ್ನು ಓದಿದ್ದೀರಾ? ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ.

yellow alert

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೀದರ್ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ ಎಂದು ಇಲಾಖೆ ತಿಳಿಸಿದೆ.

ಏಪ್ರಿಲ್ 2ರವರೆಗೆ ದಕ್ಷಿನ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗುಡುಗು ಸಹಿತ ಭಾರೀ ಗಾಳಿ, ಮಳೆಯಾಗಲಿದೆ. ಬಳ್ಳಾರಿ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ಅಮೆರಿಕದ ಗುಪ್ತಚರರಿಗೇ ಸುಳಿವು ನೀಡದೆ ಉಪಗ್ರಹ ಹೊಡೆದುರುಳಿಸಿದ್ದ ಭಾರತದ ಕ್ಷಿಪಣಿ

ದಶಕಗಳ ಬಳಿಕ, 2019ರಲ್ಲಿ 'ಮಿಷನ್ ಶಕ್ತಿ' ಕಾರ್ಯಾಚರಣೆಯ ಮೂಲಕ ಉಪಗ್ರಹ...

ಈ ದಿನ ಸಂಪಾದಕೀಯ | ಡಿಕೆಶಿ ಪ್ರತಿರೋಧಕ್ಕೆ ಮಣಿದ ಚುನಾವಣಾ ಆಯೋಗ; ಈವರೆಗಿನ ಅಕ್ರಮಗಳಿಗೆ ಹೊಣೆ ಯಾರು?

ಕರ್ನಾಟಕದಲ್ಲಿ ಎಸ್‌ಐಆರ್‌ ಆರಂಭವಾಗುವ ಮೊದಲೇ ನಾಗರಿಕ ಸಂಘಟನೆಗಳು ಕಾಂಗ್ರೆಸ್‌ ಗೆ ಎಸ್‌ಐಆರ್‌...