ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇನ್ನೂ 7 ದಿನ ಮಳೆ ಅಬ್ಬರ: ಹವಾಮಾನ ಇಲಾಖೆ

Date:

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆ ಉಂಟಾಗಿದ್ದು, ಕರಾವಳಿ ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ 7 ದಿನಗಳ ಕಾಲ ಮಳೆ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

- Advertisement -

ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು, ಕೇರಳ, ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ಹೇಳಿಕೆ. ಕರ್ನಾಟಕದಲ್ಲಿ ಉತ್ತರ ಒಳನಾಡು ಮತ್ತು ದಕ್ಷಣ ಒಳನಾಡು ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಬೆಳಗಾವಿ, ಯಾದಗಿರಿ, ರಾಯಚೂರು, ಕಲಬುರಗಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಉತ್ತರ ಕರ್ನಾಟಕದಲ್ಲಿ ಕಳೆದ ಒಂದು ವಾರದಲ್ಲಿ ಭಾರೀ ಮಳೆಯಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ 10 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ನಾಶವಾಗಿದ್ದು, ಸುಮಾರು 110 ಕೋಟಿ ರೂ. ನಷ್ಟವಾಗಿದೆ ಎಂದು ವರದಿಯಾಗಿದೆ.

ಬೆಂಗಳೂರಿನಲ್ಲಿ ಸೋಮವಾರ ಸಂಜೆ ಭಾರೀ ಮಳೆಯಾಗಿದ್ದು, 3.4 ಮಿಮೀ ಮಳೆ ದಾಖಲಾಗಿದೆ. ಬನಶಂಕರಿ, ಜೆಪಿನಗರ, ಶಾಂತಿನಗರ, ಮೆಜೆಸ್ಟಿಕ್, ವಿಧಾನಸೌಧ, ಕೆ.ಆರ್‌. ಸರ್ಕಲ್‌, ಕಾರ್ಪೊರೇಷನ್‌, ಮೆಜೆಸ್ಟಿಕ್‌, ರಾಜಾಜಿನಗರ, ಯಶವಂತಪುರ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಮಳೆ ಸುರಿದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಪ್ಪನ ಅಗ್ರಹಾರದಿಂದ ಬೆಳಗಾವಿ ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಎತ್ತಂಗಡಿ

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ...

Form 7 ಅರ್ಜಿ ವಿವಾದ; ತನಿಖೆಗೆ SIT ರಚನೆಗೆ ಸರ್ಕಾರ ಚಿಂತನೆ

ರಾಜ್ಯದಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವ ಉದ್ದೇಶದಿಂದ ಬೃಹತ್‌ ಪ್ರಮಾಣದಲ್ಲಿ Form...

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...