ರಾಜ್ಯದ ಹಲವು ಜಿಲ್ಲೆಗಳಲ್ಲಿ ಅ.16ರವರೆಗೆ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

Date:

ಅಕ್ಟೋಬರ್ 16ರವರೆಗೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ. ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಅಧಿಕ ಮಳೆಯಾಗಲಿದೆ. ಅಕ್ಟೋಬರ್ 17ರಂದು ಕರಾವಳಿ ಕರ್ನಾಟಕದಲ್ಲಿ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಎಚ್ಚರಿಕೆ ನೀಡಿದೆ.

- Advertisement -

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವೆಡೆ ಮುಂದಿನ ಒಂದೆರಡು ದಿನಗಳ ಕಾಲ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ವರದಿ ಹೇಳಿದೆ. ಆದರೆ ಮೀನುಗಾರರಿಗೆ ಯಾವುದೇ ಎಚ್ಚರಿಕೆ ನೀಡಲಾಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ಎರಡು ದಿನ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಅಕ್ಟೋಬರ್ 15ರಂದು ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಕೆಲವೆಡೆ ಬಿರುಗಾಳಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಅ.16ರಂದು ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಮಳೆಯಾಗಲಿದೆ. ಬೀದರ್, ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆಯಿದೆ.

ಇನ್ನು ನಾಳೆ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನದ ಒಂದೆರಡು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳ ಹಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಅ.16ರಂದು ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳ ಹಲವೆಡೆ ಬಿರುಗಾಳಿ, ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...