ಮುಂದಿನ ಏಳು ದಿನ ರಾಜ್ಯದಲ್ಲಿ ಭಾರೀ ಮಳೆ: ಆರೆಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

Date:

ಮುಂದಿನ ಏಳು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆ ಹಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮಂಗಳೂರಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.

- Advertisement -

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ. ನಿರಂತರ ಗಾಳಿಯೊಂದಿಗೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇದನ್ನು ಓದಿದ್ದೀರಾ? ರಾಜ್ಯದಲ್ಲಿ ಮುಂದಿನ 7 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಇನ್ನು ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ಗದಗದ ಹೆಚ್ಚಿನ ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದ್ದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ದಕ್ಷಿಣ ಒಳನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಮೈಸೂರು ಮತ್ತು ದಾವಣಗೆರೆ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ವರದಿ ಉಲ್ಲೇಖಿಸಿದೆ.

ಇನ್ನುಳಿದಂತೆ ಕೋಲಾರ, ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...