ಮಧ್ಯಾಹ್ನವೇ ಮಳೆ ಅಬ್ಬರ: ಇನ್ನೂ 3 ದಿನ ರಾಜ್ಯದ 13 ಜಿಲ್ಲೆಗಳಿಗೆ ಭಾರೀ ಮಳೆ

Date:

ಕಳೆದ ಕೆಲವು ದಿನಗಳಿಂದ ಕಾಣೆಯಾಗಿದ್ದ ಮಳೆ, ಮತ್ತೆ ಆರ್ಭಟಿಸಲಾರಂಭಿಸಿದೆ. ಇಂದು (ಮಂಗಳವಾರ) ಮಧ್ಯಾಹ್ನವೇ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಧಾರಾಕಾರ ಮಳೆ ಸುರಿಯುತ್ತಿದೆ. ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದ್ದಂತೆ, ಮಧ್ಯಾಹ್ನದ ವೇಳೆಗೆ ದಿಢೀರ್ ಮೋಡ ಕವಿದ ವಾತಾವರಣ ನಿರ್ಮಾಣವಾಗಿ ಮಳೆ ಸುರಿದಿದೆ. ಚಳಿಯ ಜೊತೆಗೆ ಮಳೆಯೂ ಸೇರಿ ನಗರದ ಜನಜೀವನವನ್ನು ತಂಪಾಗಿಸಿದೆ. ರಾಜ್ಯದ 13 ಜಿಲ್ಲೆಗಳಲ್ಲಿ ಇನ್ನೂ 3 ದಿನ ಭಾರೀ ಮಳೆಯಾಗುವ ನಿರೀಕ್ಷೆ ಹೆಚ್ಚಾಗಿದೆ.

- Advertisement -

ಮುಂದಿನ ಮೂರು ದಿನಗಳ ಕಾಲ ಮಳೆಯ ತೀವ್ರತೆ ಹೆಚ್ಚಿಗಲಿರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ (ರಾಮನಗರ), ಕೋಲಾರ, ಮಂಡ್ಯ, ಮೈಸೂರು, ಚಾಮರಾಜನಗರ ಮತ್ತು ಕೊಡಗು ಸೇರಿದಂತೆ ಒಟ್ಟು 8 ಜಿಲ್ಲೆಗಳಿಗೆ ಮುನ್ನೆಚ್ಚರಿಕಾ ಕ್ರಮವಾಗಿ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಈ ಜಿಲ್ಲೆಗಳ ಜೊತೆಗೆ ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮತ ಬದಲಾಗಿಲ್ಲ, ಮನಸ್ಸು ಬದಲಾಗಿದೆ: ಮತಾಂತರವೋ? ಮನಸಾಂತರವೋ?

ಭಾರತದ ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೂ ಧಾರ್ಮಿಕ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ಬಲವಂತ, ಬೆದರಿಕೆ, ವಂಚನೆ ಅಥವಾ ಆಮಿಷದ ಮೂಲಕ ಧಾರ್ಮಿಕ ನಂಬಿಕೆಯನ್ನು ಬದಲಾಯಿಸುವುದು ಕಾನೂನು ಮತ್ತು ನೈತಿಕತೆಯ ದೃಷ್ಟಿಯಿಂದ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ....

ಯುಪಿ ಚುನಾವಣೆ | BJPಗೆ ಕ್ಷೇತ್ರ ಹಂಚಿಕೆ ಸವಾಲು;...

ಉತ್ತರ ಪ್ರದೇಶದ 2027ರ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿವೆ. ಸತತ ಮೂರನೇ ಬಾರಿಗೆ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಹೆಣಗಾಡುತ್ತಿದ್ದು, ಎನ್‌ಡಿಎ ಮಿತ್ರಪಕ್ಷಗಳೊಂದಿಗೆ ಸ್ಥಾನ ಹಂಚಿಕೆ ಮಾತುಕತೆ ಆರಂಭಿಸಿದೆ. ಮತ್ತೊಂದೆಡೆ ಸಮಾಜವಾದಿ...

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600...

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17 ದಿನಗಳಲ್ಲಿ ಜಾಗತಿಕವಾಗಿ ₹1,600 ಕೋಟಿಗೂ ಅಧಿಕ ಕಮಾಯಿ ಮಾಡಿ ದಾಖಲೆ ಬರೆದಿದೆ. ಈ ಮೂಲಕ 'ದಂಗಲ್', 'ಧುರಂಧರ್-2', 'ಬಾಹುಬಲಿ-2' ಹಾಗೂ...

ಇಂದು ಮಧ್ಯಾಹ್ನ ಸುರಿದ ದಿಢೀರ್ ಮಳೆಯಿಂದಾಗಿ ಬೆಂಗಳೂರಿನಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ. ಮಳೆಯಿಂದ ಆಶ್ರಯಪಡೆಯಲು, ಬೈಕ್ ಸವಾರರು ರಸ್ತೆಗಳ ಇಕ್ಕೆಲಗಳಲ್ಲಿ ವಾಹನ  ನಿಲ್ಲಿಸಿ, ಅಂಗಡಿ ಮುಂಗಟ್ಟುಗಳ ಮುಂದೆ ನಿಂತಿದ್ದು, ಇತರ ವಾಹನಗಳ ಸಂಚಾರಕ್ಕೆ ನಿಧಾನಗೊಂಡಿದೆ.

ಈಗಾಗಲೇ ಚಳಿಯಿಂದ ನಡುಗುತ್ತಿದ್ದ ರಾಜ್ಯದ ಜನರಿಗೆ ಅಕಾಲಿಕ ಮಳೆಯು ಮತ್ತಷ್ಟು ನಡುಕ ಹುಟ್ಟಿಸಿದ್ದು, ಸಂಜೆ ವೇಳೆಗೆ ತಾಪಮಾನ ಇನ್ನಷ್ಟು ಕುಸಿಯುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯ ವಾತಾವರಣವಿದ್ದರೆ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಒಣಹವೆಯೇ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸ್ಪಷ್ಟಪಡಿಸಿದೆ.

ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಕನಿಷ್ಠ ತಾಪಮಾನವು ತೀವ್ರವಾಗಿ ಕುಸಿಯುತ್ತಿದ್ದು, ಒಟ್ಟಾರೆ 11.4 ಡಿಗ್ರಿ ಸೆಲ್ಸಿಯಸ್‌ನಿಂದ 22.1 ಡಿಗ್ರಿ ಸೆಲ್ಸಿಯಸ್‌ವರೆಗೆ ದಾಖಲಾಗುತ್ತಿದೆ. ವಿಶೇಷವಾಗಿ ಕಿತ್ತೂರು ಕರ್ನಾಟಕ ಭಾಗದಲ್ಲಿ ಚಳಿಯ ತೀವ್ರತೆ ಹೆಚ್ಚಾಗಿದ್ದು, ಬಾಗಲಕೋಟೆ, ಬೆಳಗಾವಿ, ಹಾವೇರಿ, ಗದಗ, ಧಾರವಾಡ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನವು 12ರಿಂದ 14 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿ ದಾಖಲಾಗುತ್ತಿದೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | 113 ಕ್ಷೇತ್ರಗಳ ಮೀಸಲಾತಿ ಪಟ್ಟಿ ಪ್ರಕಟ: 59 ಕ್ಷೇತ್ರಗಳು ಮಹಿಳೆಯರಿಗೆ

ಶಿವಮೊಗ್ಗ ಜಿಲ್ಲೆಯ 7 ತಾಲೂಕು ಪಂಚಾಯಿತಿಗಳ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ...

ಲಂಡನ್ ವಿಮಾನ ಏರದಂತೆ ಸಿಜೆಪಿ ನಾಯಕ ಸೌರವ್ ದಾಸ್ ತಡೆದ ವಲಸೆ ಅಧಿಕಾರಿಗಳು!

ಬ್ರಿಟನ್‌ನ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಉಪನ್ಯಾಸ ನೀಡಲು ತೆರಳುತ್ತಿದ್ದ 'ಕಾಕ್ರೋಚ್ ಜನತಾ ಪಾರ್ಟಿ'...

ತಂದೆ ಹತ್ಯೆಯಾಗಲೆಂದೇ ಭದ್ರತೆ ಹಿಂಪಡೆಯಲಾಗಿತ್ತು: ರಾಹುಲ್ ಗಾಂಧಿ ಗಂಭೀರ ಆರೋಪ

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಭದ್ರತೆಯನ್ನು ಹಿಂಪಡೆದಿದ್ದು ಆಕಸ್ಮಿಕವಲ್ಲ, ಬದಲಾಗಿ ಅವರ...

ಒಕ್ಕಲಿಗ ಸ್ವಾಮಿ ಮೇಲೆ ಬಿದ್ದ ಅಣ್ಣ-ತಮ್ಮಂದಿರು

ಒಕ್ಕಲಿಗ ಸಮುದಾಯದ ನಾಯಕತ್ವವನ್ನು ಕುಟುಂಬದ ಹಿಡಿತದಲ್ಲೇ ಉಳಿಸಿಕೊಳ್ಳುವ ಧಾವಂತದಲ್ಲಿ ಎಚ್‌.ಡಿ. ರೇವಣ್ಣ...