ಶನಿವಾರದಿಂದ ನಾಲ್ಕು ದಿನ ಭಾರಿ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

Date:

ರಾಜ್ಯದ ಹಲವೆಡೆ ಶನಿವಾರದಿಂದ ನಾಲ್ಕು ದಿನಗಳು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಾವಣಗೆರೆ, ಚಿತ್ರದುರ್ಗ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗೆ ಶನಿವಾರ ‘ಯೆಲ್ಲೊ ಅಲರ್ಟ್’ ನೀಡಲಾಗಿದ್ದು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾನುವಾರ ಮಳೆ ವ್ಯಾಪಿಸಿಕೊಳ್ಳುವ ಸಂಭವವಿದ್ದು, 11 ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.

- Advertisement -

ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಯ ಜತೆಗೆ ಮಂಡ್ಯ, ಹಾಸನ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಯ ಕೆಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದೆಡೆ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಬೆಂಗಳೂರಿನಲ್ಲಿ ಎರಡು ದಿನಗಳು ಮೋಡ ಕವಿದ ವಾತಾವರಣ ಇರಲಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹೇಳಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಯ ಹಲವೆಡೆ ಇದೇ 10ರವರೆಗೂ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರು ನಗರದಲ್ಲಿ ಶನಿವಾರ ಬೆಳಿಗ್ಗೆ ಮಳೆ ಸಾಧಾರಣ ಮಳೆಯಾಗಿದೆ. ರಾಜಾಜಿನಗರ, ಯಶವಂತಪುರ, ಶ್ರೀರಾಂಪುರ, ಮೆಜೆಸ್ಟಿಕ್‌, ವಿಜಯನಗರ, ಬಸವೇಶ್ವರ ನಗರದಲ್ಲಿ ಇಂದು ಬೆಳಿಗ್ಗೆ ಮೂರು ತಾಸು ಮಳೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....