ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಭಾರತೀಯ ಹವಾಮಾನ ಇಲಾಖೆಯು ಒಟ್ಟು ನಾಲ್ಕು ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋಷಿಸಿದೆ. ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಹಾಸನ, ಕೊಡಗು, ಮೈಸೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ.
ಇದನ್ನು ಓದಿದ್ದೀರಾ? ಕರಾವಳಿಯಲ್ಲಿ ಮಳೆ ಅಬ್ಬರ | ಹವಾಮಾನ ಇಲಾಖೆಯಿಂದ ‘ಆರೆಂಜ್’ ಅಲರ್ಟ್ ಘೋಷಣೆ
This video cannot be played in your browser. Open the video directly
ದಕ್ಷಿಣ ಒಳನಾಡಿನ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಇನ್ನು ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಡಿಗ್ರಿ ಸೆಲ್ಸಿಯಸ್ ಮತ್ತು 20 ಡಿಗ್ರಿ ಸೆಲ್ಸಿಯಸ್ ಆಗಿರಬಹುದು.
ಮುಂದಿನ 5 ದಿನಗಳ #ಮಳೆ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: IMD)
— Karnataka State Natural Disaster Monitoring Centre (@KarnatakaSNDMC) September 29, 2024
ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಇಂದು ಚದುರಿದಿಂದ ಅಲ್ಲಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆ , ನಂತರ ಮಳೆ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ. pic.twitter.com/VXeMBLhp90





