ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

Date:

ಆಗಸ್ಟ್ 13ರಂದು ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಈ ನಡುವೆ ಭಾರತೀಯ ಹವಾಮಾನ ಇಲಾಖೆ (IMD) ಕರ್ನಾಟಕದ ಬಹುತೇಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಿದೆ.

- Advertisement -

ಇಂದು ರಾಜ್ಯಾದ್ಯಂತ ಅಲ್ಲಲ್ಲಿ ಗುಡುಗು, ಸಿಡಿಲು ಸಹಿತ ಜೋರಾದ ಗಾಳಿಯೊಂದಿಗೆ ಮಳೆಯಾಗಲಿದೆ. ಕರಾವಳಿ & ಮಲೆನಾಡು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮಳೆಯಾಗಲಿದೆ. ಒಳನಾಡು ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದ್ದು ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಇದನ್ನೂ ಓದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 5 ದಿನ ಮಳೆ ಅಬ್ಬರ: ಹವಾಮಾನ ಇಲಾಖೆ

ಇನ್ನು ಇಂದು ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ. ಗಾಳಿಯೊಂದಿಗೆ ಭಾರೀ ಮಳೆಯಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚಿನ ಸ್ಥಳಗಳಲ್ಲಿ ಗಂಟೆಗೆ 30-40 ಕಿ.ಮೀ. ನಿರಂತರ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಗಂಟೆಗೆ 40-50 ಕಿ.ಮೀ. ವೇಗದ ನಿರಂತರ ಗಾಳಿಯೊಂದಿಗೆ ಭಾರೀ ಮಳೆಯಾಗಲಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ. ವೇಗದ ಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಗದಗ, ಹಾವೇರಿ, ಧಾರವಾಡ, ಬೆಳಗಾವಿ, ಕೊಪ್ಪಳ, ಬಾಗಲಕೋಟೆ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳ ಕೆಲವೆಡೆ ಗಂಟೆಗೆ 40-50 ಕಿ.ಮೀ. ನಿರಂತರ ಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ ಮಂಡಳಿಯ ಚಪ್ಪಾಳೆ

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ...

ತಮಗೆ ಬಿಜೆಪಿ‌ ಸೇರುವಂತೆ ಗ್ಯಾನೇಶ್ ಕುಮಾರ್ ಆಹ್ವಾನಿಸಿದ್ದರು: ನಿವೃತ್ತ ಐಎಎಸ್ ಜಿಜಿ ಥಾಮ್ಸನ್

ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರು 2016ರಲ್ಲಿ ಸರ್ಕಾರಿ ಸೇವೆಯಲ್ಲಿದ್ದಾಗ...

Bhalki Ground Report | ಮುಸ್ಲಿಮರ ಮತ ಹಕ್ಕಿಗೆ ಕನ್ನ: ಬಗೆದಷ್ಟು ಬಯಲಾಗ್ತಿದೆ ‘ಫಾರ್ಮ್-7’ರ ಸಂಚು?

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಈಶ್ವರ ಬಿ.ಖಂಡ್ರೆ ಅವರು ಪ್ರತಿನಿಧಿಸುವ...

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ ʼನೀರೋʼ; ಭಾರತ ಉರಿಯುತ್ತಿರುವಾಗ ಭಜನೆ ಮಾಡಿದ ʼಮೋದಿʼ!

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ,...