ರಾಜ್ಯದಲ್ಲಿಂದು ಒಟ್ಟು ಎಂಟು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆಯು ನೀಡಿದೆ. ಈ ಎಂಟು ಜಿಲ್ಲೆಗಳಲ್ಲಿಗೂ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಕಲಬುರಗಿ, ಯಾದಗಿರಿ, ರಾಯಚೂರು, ಗದಗ, ಕೊಪ್ಪಳ, ಬಳ್ಳಾರಿ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಘೋಷಿಸಿದೆ.
ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಇದನ್ನು ಓದಿದ್ದೀರಾ? ಸೆಪ್ಟೆಂಬರ್ 24ರಿಂದ ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮತ್ತೆ ಮಳೆ: ಹವಾಮಾನ ಇಲಾಖೆ
ಇನ್ನು ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.
ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ 29 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಬಹುದು ಎಂದು ವರದಿಯಾಗಿದೆ.
ಇನ್ನು ನಿನ್ನೆ ಬೀದರ್ ಜಿಲ್ಲೆಯ ಚಿಟಗುಪ್ಪ, ಹುಮನಾಬಾದ್, ಮಂಠಾಳ, ಭಾಲ್ಕಿಯಲ್ಲಿ ಮಳೆಯಾಗಿದೆ. ಉಡುಪಿ ಜಿಲ್ಲೆಯ ಕೆಲವೆಡೆ, ದಕ್ಷಿಣ ಕನ್ನಡ ಜಿಲ್ಲೆಯ ಪಣಂಬೂರು, ಮಾಣಿ, ಮೂಲ್ಕಿಯಲ್ಲಿ ಮಳೆ ಸುರಿದಿದೆ. ಯಾದಗಿರಿಯ ಕೆಂಭಾವಿ ಪ್ರದೇಶದಲ್ಲಿ, ವಿಜಯಪುರದ ಕೆಲವೆಡೆ ಮಳೆಯಾಗಿದೆ.
ಮುಂದಿನ 5 ದಿನಗಳ #ಮಳೆ #ಮುನ್ಸೂಚನೆ ಮತ್ತು #ಎಚ್ಚರಿಕೆಗಳು: (ಮೂಲ: IMD)
— Karnataka State Natural Disaster Monitoring Centre (@KarnatakaSNDMC) September 22, 2024
ರಾಜ್ಯದ ಕರಾವಳಿ & ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಚದುರಿದಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 24 ರವರೆಗೆ ಗುಡುಗು ಮಿಂಚು ಸಹಿತ ಚದುರಿದಿಂದ pic.twitter.com/45XzmCRsLs
