ರಾಜ್ಯದ 6 ಜಿಲ್ಲೆಗಳಲ್ಲಿ ಭಾರಿ ಮಳೆ: ಯೆಲ್ಲೋ ಅಲರ್ಟ್​ ಘೋಷಣೆ

Date:

ಕರ್ನಾಟಕದ ಬಹುತೇಕ ಕಡೆ ಮುಂಗಾರು ದುರ್ಬಲವಾಗಿದ್ದು, ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ತುಸು ಹೆಚ್ಚಿದೆ. ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

- Advertisement -

ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಹಾಸನ, ದಾವಣಗೆರೆ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಸಾಧಾರಣ ಮಳೆಯಾಗಲಿದೆ. ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್​​ನಲ್ಲಿ ಒಣಹವೆ ಮುಂದುವರೆಯಲಿದೆ.

ಹಾವೇರಿ, ಗದಗ, ಧಾರವಾಡ, ಬೆಳಗಾವಿಯಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ. ಕದ್ರಾ, ಆಗುಂಬೆ, ಕ್ಯಾಸಲ್​ರಾಕ್, ಖಾನಾಪುರ್, ಮಂಕಿ, ಯಲ್ಲಾಪುರ, ಸಿದ್ದಾಪುರ, ಭಾಗಮಂಡಲ, ಕಮ್ಮರಡಿ, ಶೃಂಗೇರಿ, ಕೊಪ್ಪ, ಸೋಮವಾರಪೇಟೆ, ಮಾಣಿ, ಪುತ್ತೂರು, ಬೆಳ್​ತಂಗಡಿ, ಗೇರುಸೊಪ್ಪ, ಅಂಕೋಲಾ, ಜೋಯ್ಡಾ, ಹಿರೇಕೆರೂರು, ಸಂಕೇಶ್ವರ, ಲೋಂಡಾ, ನಿಪ್ಪಾಣಿ, ಧಾರವಾಡ, ಆನವಟ್ಟಿ, ದಾವಣಗೆರೆ, ಹುಣಸೂರಿನಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಎಚ್​​ಎಎಲ್​ನಲ್ಲಿ 30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಿ.ಆರ್ ಪಾಟೀಲ್‌ ಆರೋಪಗಳೂ, ಸರ್ಕಾರದ ನೈತಿಕತೆಯೂ

ಹೊನ್ನಾವರದಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್​ಪೋರ್ಟ್​​ನಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 31.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿಯಲ್ಲಿ 25.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್​ನಲ್ಲಿ32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 32.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....