ರಾಜ್ಯದ 11 ಜಿಲ್ಲೆಗಳಲ್ಲಿ 3 ದಿನ ಭಾರೀ ಮಳೆ; ಕೆಲವೆಡೆ ಒಣಹವೆ: ಹವಾಮಾನ ಇಲಾಖೆ

Date:

ರಾಜ್ಯದಲ್ಲಿ ಮಳೆಯ ಅಬ್ಬರ ನಿಧಾನವಾಗಿ ಕಡಿಮೆಯಾಗುವ ಲಕ್ಷಣಗಳು ಕಂಡುಬರುತ್ತಿದ್ದರೂ, ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ವಿಶೇಷವಾಗಿ ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರ ಸೇರಿದಂತೆ 11 ಜಿಲ್ಲೆಗಳಲ್ಲಿ ಸೆಪ್ಟೆಂಬರ್ 9ರವರೆಗೆ ಗುಡುಗು ಸಹಿತ ಧಾರಾಕಾರ ಮಳೆ ಸುರಿಯಲಿದೆ ಎಂದು ಇಲಾಖೆ ಸೂಚನೆ ನೀಡಿದೆ.

- Advertisement -

ಹವಾಮಾನ ಮುನ್ಸೂಚನೆಯ ಪ್ರಕಾರ, ಉತ್ತರ ಒಳನಾಡಿನಲ್ಲಿ ಮಳೆಯ ಪ್ರಮಾಣ ಮತ್ತಷ್ಟು ಕಡಿಮೆಯಾಗುವ ಸೂಚನೆಗಳಿದ್ದರೆ, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಹಲವು ಜಿಲ್ಲೆಗಳಲ್ಲಿ ಮಳೆಯೂ ಸುರಿಯಲಿದೆ. ಸರ್ಕಾರವು ಮೋಡ ಬಿತ್ತನೆಯನ್ನೂ ಮಾಡಿದ್ದು, ಇದರಿಂದ ಹೆಚ್ಚಿನ ಮಳೆಯನ್ನೂ ನಿರೀಕ್ಷಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳು, ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಮಂಡ್ಯ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಮಳೆ ಅಬ್ಬರ ಇರಲಿದೆ ಎಂದು ಇಲಾಖೆ ತಿಳಿಸಿದೆ.

ಮುಂದಿನ ಮೂರು ದಿನಗಳ ಕಾಲ ಮಳೆ ಅಬ್ಬರ ಇರಲಿದೆ. ಆ ನಂತರದ ಒಂದು ವಾರ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಕೆಲವೆಡೆ ಮಳೆ ಬೀಳದಿದ್ದರೂ, ಮೋಡ ಕವಿದ ವಾತಾವರಣ ಇರಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಉತ್ತರ ಒಳನಾಡಿನಲ್ಲಿ ಮಳೆಯ ಪ್ರಮಾಣ ಮತ್ತಷ್ಟು ಕಡಿಮೆಯಾಗುವ ಸೂಚನೆ ಇದೆ. ಬೆಳಗಾವಿ ಜಿಲ್ಲೆಯ ಒಂದೆರಡು ಕಡೆ ಮಳೆಯಾಗುವ ಸಾಧ್ಯತೆ ಇದ್ದರೆ, ಬೀದರ್‌ನಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಬಿಸಿಲು ಮತ್ತು ಮೋಡದ ವಾತಾವರಣ ಇರಲಿದೆ. ಬಾಗಲಕೋಟೆ, ವಿಜಯಪುರ, ಕಲಬುರಗಿ, ರಾಯಚೂರು, ಕೊಪ್ಪಳ ಮತ್ತು ಯಾದಗಿರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಇಲಾಖೆ ವಿವರಿಸಿದೆ.

ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯಿಂದ ಗಾಳಿಯ ಚಲನೆಯೂ ರಾಜ್ಯದ ಹವಾಮಾನದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಈ ಬೆಳವಣಿಗೆಗಳು ಮುಂದಿನ ದಿನಗಳಲ್ಲಿ ಹಿಂಗಾರು ಮಾರುತಗಳ ಬೆಳವಣಿಗೆಯ ಮೇಲೂ ಪ್ರಭಾವ ಬೀರಬಲಿವೆ. ಆದರೂ, ಈ ವರ್ಷ ರಾಜ್ಯದಲ್ಲಿ ಹೆಚ್ಚಿನ ಮಳೆ ನಿರೀಕ್ಷೆ ಸಾಧ್ಯವಿಲ್ಲ ಎಂದು ಹವಾಮಾನ ತಜ್ಞರು ಹೇಳುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ನಕಲಿ ವೈದ್ಯರಿಗೆ ಔಷಧ ಪೂರೈಕೆ : 7 ಮೆಡಿಕಲ್‌ಗಳ ಪರವಾನಗಿ ಅಮಾನತು

ನಕಲಿ ವೈದ್ಯರಿಗೆ ಔಷಧಗಳನ್ನು ಸರಬರಾಜು ಮಾಡಿದ ಆರೋಪದ ಹಿನ್ನೆಲೆ ಜಿಲ್ಲೆಯ ಏಳು...

ʼತ್ರಿವರ್ಣ ಧ್ವಜ ಹಾರಿಸಲು ಅನುಮತಿ ಬೇಕಿಲ್ಲʼ; ಪೊಲೀಸ್ ನೋಟಿಸ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ನೇಹಾ ಬೋರಾ

ರಾಷ್ಟ್ರಧ್ವಜ ಹಾರಿಸಲು ಯಾರ ಅನುಮತಿಯೂ ಅಗತ್ಯವಿಲ್ಲ ಎಂದು ವಾದಿಸಿರುವ ಎಐಎಸ್‌ಎ (AISA)...

ಬೀದರ್‌ | ಕನಿಷ್ಠ ವೇತನ ಪಾವತಿಗೆ ಅರಣ್ಯ ಇಲಾಖೆ ದಿನಗೂಲಿ ನೌಕರರ ಮನವಿ

ಔರಾದ ತಾಲ್ಲೂಕಿನ ಸಾಮಾಜಿಕ ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೀಕ್ಷಕರು ಹಾಗೂ ದಿನಗೂಲಿ...

ಬೀದರ್‌ | ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸೋಣ : ಡಿಸಿ ಶಿಲ್ಪಾ ಶರ್ಮಾ

ಬೀದರ್ ಜಿಲ್ಲೆಯಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಆಕರ್ಷಕವಾಗಿ...