ಕರ್ನಾಟಕದ 11 ಜಿಲ್ಲೆಗಳಲ್ಲಿ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

Date:

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಒಡಿಶಾ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು ಹಾಗೂ ಕರ್ನಾಟಕದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕರ್ನಾಟಕದ 11 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದಿರುವ ಇಲಾಖೆ, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಿದೆ.

- Advertisement -

ಚಿಕ್ಕಮಗಳೂರು, ಕೊಡಗು, ಹಾಸನ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆ ಸುರಿಯಲಿದೆ ಎಂದು ಇಲಾಖೆ ತಿಳಿಸಿದೆ. ಜೊತೆಗೆ, ಮಂಡ್ಯ, ಚಾಮರಾಜನಗರ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲೂ ಅಧಿಕ ಮಳೆಯಾಗಲಿದೆ ಎಂದು ಹೇಳಿದೆ. ಈ ಎಲ್ಲ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಈ ಜಿಲ್ಲೆಗಳಲ್ಲದೆ, ಇನ್ನೂ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೋಚನೆ ನೀಡಿದೆ. ರಾಯಚೂರು, ಬಳ್ಳಾರಿ ಜಿಲ್ಲೆಗಳಲ್ಲಿಯೂ ತಣ್ಣನೆಯ ಗಾಳಿ ಬೀಸಲಿದ್ದು, ಮಳೆಯ ಮುನ್ಸೂಚನೆ ಇದೆ ಎಂದು ಹೇಳಿದೆ. ಬೆಂಗಳೂರಿನಲ್ಲಿಯೂ ಮೋಡ ಕವಿದ ವಾತಾವರಣವಿದೆ.

ಆದರೆ, ಕರಾವಳಿ ಭಾಗದಲ್ಲಿ ಮಳೆಯ ನಿರೀಕ್ಷೆ ಕಡಿಮೆ ಇದೆ. ದಕ್ಷಿಣ ಫೆಸಿಫಿಕ್‌ ಮಹಾಸಾಗರದಲ್ಲಿ ತಾಪಮಾನ ಏರಿಕೆಯಿಂದಾಗಿ ಎಲ್‌ ನಿನೋ ರೂಪುಗೊಳ್ಳುತ್ತಿರುವ ಕಾರಣದಿಂದಾಗಿ, ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆಯ ಕುರಿತು ಹವಾಮಾನ ತಜ್ಞರು ಚರ್ಚಿಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಪಪ್ರಚಾರ ವಿಡಿಯೋ: ಇಬ್ಬರು ಪೊಲೀಸ್ ವಶಕ್ಕೆ

ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೇಜೋವಧೆ ಮಾಡುವ ಉದ್ದೇಶದಿಂದ...

ಅಲ್ಲಾವುದ್ದೀನನ ಅದ್ಭುತ ದೀಪದಂತೆ ಜಿಎಸ್‌ಎಸ್;‌ ʼಹಣತೆಯಿಂದ ಹಣತೆಗೆʼ ಸಂವಾದದಲ್ಲಿ ಮೇಷ್ಟ್ರು ನೆನಪು

ಒಂದು ಹಣತೆಯಿಂದ ಮತ್ತೊಂದು ಹಣತೆಯನ್ನು ಹಚ್ಚಿದಾಗ ಮೊದಲ ಹಣತೆಯ ಬೆಳಕು ಕಡಿಮೆಯಾಗುವುದಿಲ್ಲ,...

ಹಿಂಗಾರು ಆರ್ಭಟ; ಮುಂದಿನ 4 ದಿನ ರಾಜ್ಯದ 11 ಜಿಲ್ಲೆಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

ರಾಜ್ಯದಲ್ಲಿ ಮುಂಗಾರು ಕ್ಷೀಣಿಸಿ, ಹಿಂಗಾರು ಮಾರುತಗಳ ಚಟುವಟಿಕೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ...

ಬೇಡ್ತಿ ನದಿ ತಿರುವು ಯೋಜನೆಯೂ, ಬೊಮ್ಮಾಯಿ-ಕಾಗೇರಿ ಪೀಕಲಾಟವೂ

ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಇದ್ದಕ್ಕಿದ್ದಂತೆಯೇ ಬೇಡ್ತಿ-ವರದಾ ಮತ್ತು...