ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ; 14 ಜಿಲ್ಲೆಗಳಲ್ಲಿ ಇನ್ನೂ 3 ದಿನ ಭಾರೀ ಮಳೆ: ಹವಾಮಾನ ಇಲಾಖೆ

Date:

ಭಾರತದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಸೆಪ್ಟೆಂಬರ್ ಆರಂಭದಲ್ಲೇ ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇನ್ನೂ ಮೂರು ದಿನಗಳ ಕಾಲ ರಾಜ್ಯದ 14 ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

- Advertisement -

ಕರಾವಳಿಯ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಗಾಳಿಯೂ ತೀವ್ರವಾಗಿ ಬೀಸಲಿದ್ದು, ಮೀನುಗಾರರು ಎಚ್ಚರಿಕೆ ವಹಿಸಲು ಸೂಚಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಉತ್ತರ ಒಳನಾಡಿನ ಗದಗ, ಬಳ್ಳಾರಿ, ಹಾವೇರಿ, ಬಾಗಲಕೋಟೆ ಹಾಗೂ ಧಾರವಾಡ ಜಿಲ್ಲೆಗಳಲ್ಲಿಯೂ ಉತ್ತಮ ಮಳೆಯಾಗಲಿದೆ. ಇನ್ನು, ರಾಜಧಾನಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗಬಹುದು ಎಂದು ಇಲಾಖೆ ತಿಳಿಸಿದೆ.

ಕರ್ನಾಟಕವಲ್ಲದೆ ದೇಶದ 19 ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಛತ್ತೀಸ್‌ಗಢ, ಒಡಿಶಾ, ಬಿಹಾರ, ಜಾರ್ಖಂಡ್ ಹಾಗೂ ಮಧ್ಯಪ್ರದೇಶಗಳಲ್ಲಿ ಮಳೆ ಹೆಚ್ಚಾಗಲಿದೆ. ಹಿಮಾಚಲ ಪ್ರದೇಶ ಮತ್ತು ಹರಿಯಾಣದಲ್ಲಿ ಸೆಪ್ಟೆಂಬರ್ 7ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಎರಡೂ ರಾಜ್ಯಗಳಲ್ಲಿ ಪ್ರವಾಹ ಮತ್ತು ಭೂಕುಸಿತದ ಆತಂಕ ಎದುರಾಗಿದೆ. ಈಶಾನ್ಯ ರಾಜ್ಯಗಳಾದ ಅಸ್ಸಾಂ, ಮೇಘಾಲಯ, ಪಶ್ಚಿಮ ಬಂಗಾಳ ಹಾಗೂ ಅರುಣಾಚಲ ಪ್ರದೇಶದಲ್ಲೂ ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಬಲೇಶ್ವರ ನಾಕಾ ರಸ್ತೆ ಕಾಮಗಾರಿ ವಿಳಂಬಕ್ಕೆ ಆಪ್ ಆಕ್ರೋಶ; ಪಾಲಿಕೆಗೆ ಒಂದು ವಾರ ಗಡುವು

ಅಭಿವೃದ್ಧಿ ಕಾಮಗಾರಿ ಹೆಸರಿನಲ್ಲಿ ಬಬಲೇಶ್ವರ ನಾಕಾದಿಂದ ನಾಯರಾ ಪೆಟ್ರೋಲ್ ಪಂಪ್‌ವರೆಗಿನ ರಸ್ತೆಯ...

ಭಾರತ & ಚೀನಾದ H-1B ಉದ್ಯೋಗಿಗಳಿಂದ ಅಮೆರಿಕನ್ನರ ಉದ್ಯೋಗಕ್ಕೆ ಕುತ್ತು; ಸಂಸದ ರಿಲೆ ಮೂರ್ ಆರೋಪ

ಅಮೆರಿಕದ ಕಂಪ್ಯೂಟರ್‌ ಸೈನ್ಸ್‌ ಪದವೀಧರರ ಉದ್ಯೋಗಾವಕಾಶಗಳನ್ನು ಭಾರತ ಮತ್ತು ಚೀನಾದಿಂದ ಬರುವ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ; ಸುಪ್ರೀಂನದ್ದು ದ್ವಂದ್ವ ನಿಲುವಲ್ಲವೇ?

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ...

ದೇಶ ತೊರೆಯುವಂತೆ ನೋಟಿಸ್‌; ಹೈಕೋರ್ಟ್ ಮೆಟ್ಟಿಲೇರಿದ ನಟ ಇಮ್ರಾನ್ ಖಾನ್

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆದ...