ಮುಂದಿನ 5 ದಿನ ರಾಜ್ಯದ 15 ಜಿಲ್ಲೆಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

Date:

ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಅಂದರೆ ಆಗಸ್ಟ್ 25ರವರೆಗೆ ರಾಜ್ಯದ 15 ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ.

- Advertisement -

ಮುಖ್ಯವಾಗಿ ರಾಜ್ಯದ 15 ಜಿಲ್ಲೆಗಳಲ್ಲಿ ಮಳೆಯ ಪ್ರಭಾವ ಹೆಚ್ಚಿರಲಿದೆ. ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಬಿರುಗಾಳಿ ಹಾಗೂ ಗುಡುಗು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನೂ ಓದಿ: ಹವಾಮಾನ ಇಲಾಖೆ ಅಲರ್ಟ್ | ಆ.19ರಿಂದ ಕೆಲ ದಿನ ಭಾರಿ ಗಾಳಿ ಮಳೆ, ಬೆಂಗಳೂರಲ್ಲಿ ಹೇಗಿರಲಿದೆ ವಾತಾವರಣ?

ಯಾವ್ಯಾವ ಜಿಲ್ಲೆಗಳಲ್ಲಿ ಮಳೆ?

ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 3 ರಿಂದ 5 ದಿನಗಳ ಕಾಲ ಸಾಧಾರಣದಿಂದ ಭಾರಿ ಮಳೆಯಾಗಲಿದ್ದು, ಗಾಳಿಯ ವೇಗವೂ ಹೆಚ್ಚಿರಲಿದೆ. ಕರಾವಳಿ ಭಾಗದಲ್ಲಿ ಸಮುದ್ರದಲ್ಲಿ ಅಲೆಗಳ ಆರ್ಭಟ ಹೆಚ್ಚಿರಲಿದ್ದು, ಮೀನುಗಾರರು ಜಾಗರೂಕರಾಗಿರಲು ಹಾಗೂ ಆಳ ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಇನ್ನು ಮಲೆನಾಡು ಹಾಗೂ ದಕ್ಷಿಣ ಒಳನಾಡಿ 7 ಜಿಲ್ಲೆಗಳಲ್ಲಿ ಮಳೆ ಇರಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಮುಂದಿನ 48 ರಿಂದ 72 ಗಂಟೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.

ಉತ್ತರ ಒಳನಾಡಿನ ಐದು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಹಾವೇರಿ, ಬೀದರ್ ಮತ್ತು ಕಲಬುರಗಿ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ರಾಜಧಾನಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಕಾಲ ಭಾಗಶಃ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇಂದು ಅಲ್ಲಲ್ಲಿ ಈಗಾಗಲೇ ಸಾಧಾರಣ ಮಳೆ ಆರಂಭವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ ಉದ್ಘಾಟನೆಗೆ ಅಭಿನವ ಗವಿಸಿದ್ದೇಶ್ವರ ಶ್ರೀಗೆ ಆಹ್ವಾನ

ಕೊಪ್ಪಳದ ಗವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಅವರು ಈ...

ಪತ್ರಕರ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಮಹಿಳೆಯರಿಗೆ ಸುರಕ್ಷತೆಯೇ ಇಲ್ಲವೇ: ಮೋಶಾಗೆ ಪ್ರಿಯಾಂಕಾ ಗಾಂಧಿ ಪ್ರಶ್ನೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆಯ ವರದಿಗಾರಿಕೆ ಮಾಡುತ್ತಿದ್ದ ಮಹಿಳಾ ಪತ್ರಕರ್ತೆಯರ ಮೇಲೆ...