ರಾಜ್ಯದ 18 ಜಿಲ್ಲೆಗಳಲ್ಲಿ ಜುಲೈ 30ರವರೆಗೆ ಭಾರೀ ಮಳೆ: ಹವಾಮಾನ ಇಲಾಖೆ

Date:

ಜೂನ್ ಮತ್ತು ಜುಲೈ ಆರಂಭದಲ್ಲಿ ಕಾಣೆಯಾಗಿದ್ದ ಮುಂಗಾರು ಮಳೆ, ಇತ್ತೀಚೆಗೆ ಬಿರುಸು ಪಡೆದುಕೊಂಡಿದೆ. ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ವಿವಿಧ ಭಾಗಗಳಲ್ಲಿ ಜುಲೈ 30ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮುಂದಿನ ನಾಲ್ಕು ದಿನಗಳ ಕಾಲ ಸುಮಾರು 18 ಜಿಲ್ಲೆಗಳಲ್ಲಿ ಗಾಳಿಯ ವೇಗ ಮತ್ತು ಮಳೆಯ ತೀವ್ರತೆ ಹೆಚ್ಚಾಗಲಿದೆ ಎಂದಿರುವ ಇಲಾಖೆ, ಈ ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೇಂಜ್ ಅಲರ್ಟ್‌ ಘೋಷಿಸಿದೆ.

- Advertisement -

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಜುಲೈ ತಿಂಗಳ ಅಂತ್ಯದವರೆಗೂ ಬಿರುಗಾಳಿ ಮತ್ತು ಗುಡುಗು ಮಿಂಚು ಸಹಿತ ಅತಿ ಭಾರಿ ಮಳೆಯಾಗಲಿದೆ. ಅಂತೆಯೇ, ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿಯೂ ಬಿಟ್ಟುಬಿಡದೆ ಧಾರಾಕಾರ ಮಳೆ ಸುರಿಯಲಿದೆ ಎಂದು ಇಲಾಖೆ ಹೇಳಿದೆ. ಈ ಎಲ್ಲ ಜಿಲ್ಲೆಗಳಿಗೂ ಆರೆಂಜ್ ಅಲರ್ಟ್‌ ಘೋಷಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಹಾವೇರಿ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ, ಗದಗ, ಕೊಪ್ಪಳ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿಯೂ ಮಳೆ ಆರ್ಭಟ ಇರಲಿದೆ ಎಂದು ಇಲಾಖೆ ತಿಳಿಸಿದ್ದು, ಈ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್‌ ಘೋಷಿಸಿದೆ.

Advertisements

ಕರಾವಳಿ ಭಾಗದಲ್ಲಿ ಸಮುದ್ರದಲ್ಲಿ ಅಲೆಗಳ ಆರ್ಭಟ ಹೆಚ್ಚಿರಲಿದ್ದು, ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಮತ್ತು ಪ್ರವಾಸಿಗರು ಹಾಗೂ ಸಾರ್ವಜನಿಕರು ಸಮುದ್ರ ತೀರಗಳಿಗೆ ತೆರಳದಂತೆ ಸೂಚನೆ ನೀಡಲಾಗಿದೆ.

ಇನ್ನು, ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರುಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗುವ ಸ್ಯಾದ್ಯತೆಯಿದೆ.

ಮಳೆಯ ಆರ್ಭಟ ಹೆಚ್ಚಾಗಿರುವ ಪ್ರದೇಶಗಳಲ್ಲಿ ನದಿ, ಹಳ್ಳ-ಕೊಳ್ಳ ಹಾಗೂ ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಳ್ಳುತ್ತಿರುವುದರಿಂದ ಸಾರ್ವಜನಿಕರು ಮತ್ತು ಪೋಷಕರು ಜಾಗರೂಕರಾಗಿರಬೇಕು. ವಿಶೇಷವಾಗಿ ಮಕ್ಕಳು ಜಲಮೂಲಗಳ ಹತ್ತಿರ ತೆರಳದಂತೆ ನಿಗಾ ವಹಿಸುಬೇಕು ಎಂದು ಜಿಲ್ಲಾಡಳಿತಗಳು ಮತ್ತು ಹವಾಮಾನ ಇಲಾಖೆ ಮನವಿ ಮಾಡಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು ಕಲಬುರಗಿಯಲ್ಲಿ ಎಸ್ಎಫ್ಐ 17ನೇ ರಾಜ್ಯ ಸಮ್ಮೇಳನ: ಬಸವರಾಜ ಎಸ್

ಸಾರ್ವಜನಿಕ ಶಿಕ್ಷಣವನ್ನು ಬಲಪಡಿಸಲು, ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸಲು, ಕೋಮು ಸೌಹಾರ್ದತೆಗಾಗಿ,...

ಉದ್ಯೋಗ ಮಾಹಿತಿ: SSLC, ITI ಪಾಸಾದವರಿಗೆ ಅವಕಾಶ; BHELನಲ್ಲಿ 660 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸರ್ಕಾರಿ ವಲಯದ 'ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್' (BHEL) ಸಂಸ್ಥೆ ಬೃಹತ್...

ಬಾಗಲಕೋಟೆ | ಆಶಾ ಕಾರ್ಯಕರ್ತೆಯರಿಗೆ ರೂ.15000 ಮಾಸಿಕ ವೇತನ ನಿಗದಿಪಡಿಸಲು ಆಗ್ರಹ

ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿರುವ ಸಂದರ್ಭದಲ್ಲಿ, ಆಶಾ ಕಾರ್ಯಕರ್ತೆಯರಿಗೆ ನೀಡುತ್ತಿರುವ...