ರಾಜ್ಯದ 9 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

Date:

ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟ ಮತ್ತೆ ತೀವ್ರಗೊಂಡಿದೆ. ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಒಟ್ಟು 9 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಳೆ ಅಬ್ಬರ ಹೆಚ್ಚಾಗಲಿರುವ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ (ಐಎಂಡಿ) ಯೆಲ್ಲೋ ಅಲರ್ಟ್ ಘೋಷಿಸಿದೆ.

- Advertisement -

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮಲೆನಾಡಿನ ಭಾಗಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆ ಸುರಿಯಲಿದೆ. ಅಂತೆಯೇ, ಉತ್ತರ ಒಳನಾಡಿನ ಬೀದರ್, ಕಲಬುರಗಿ ಹಾಗೂ ಬೆಳಗಾವಿ ಜಿಲ್ಲೆಗಳ ಹಲವೆಡೆ ಮಳೆ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಅಂತೆಯೇ, ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಹವಾಮಾನ ವೈಪರೀತ್ಯ ಉಂಟಾಗಿದ್ದು, ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ಬೆಂಗಳೂರು ಗ್ರಾಮಾಂತರ, ಹಾಸನ, ಮೈಸೂರು, ಮಂಡ್ಯ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ವಿಜಯನಗರ, ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿಯೂ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಇಲಾಖೆ ವಿವರಿಸಿದೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗಂಟೆಗೆ 40 ಕಿಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಆತಂಕ ಇದೆ ಎಂದು ಇಲಾಖೆ ತಿಳಿಸಿದೆ. ಬಿರುಗಾಳಿ ಬೀಸುವ ಸಂದರ್ಭದಲ್ಲಿ ಮರಗಳು ಅಥವಾ ಹಳೆಯ ಕಟ್ಟಡಗಳ ಹತ್ತಿರ ನಿಲ್ಲಬಾರದು, ವಾಹನ ಸವಾರರು ಜಾಗರೂಕರಾಗಿ ವಾಹನ ಚಲಾಯಿಸಬೇಕು ಹವಾಮಾನ ಇಲಾಖೆ ಎಚ್ಚರಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‌ಬೀದರ್‌ | ಮತದಾನ ಹಕ್ಕು ಕಸಿಯುವ ʼಎಸ್‌ಐಆರ್ʼ ಪ್ರಕ್ರಿಯೆ ವಿರೋಧಿಸಿ ಅ.12ರಂದು ಪ್ರತಿಭಟನೆ

ದೇಶಾದ್ಯಂತ ಎಸ್‌ಐಆರ್ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಕೋಟ್ಯಂತರ ಮತದಾರರನ್ನು ಕೈಬಿಡಲಾಗಿರುವುದನ್ನು ಆರೋಪಿಸಿ,...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...

ʼವೋಟ್‌ ಚೋರಿʼ ಆರೋಪಕ್ಕೆ ಪುರಾವೆ ಅಗತ್ಯʼ: ಚುನಾವಣಾ ಆಯೋಗದ ಪರ 124 ನಿವೃತ್ತ ಅಧಿಕಾರಿಗಳ ಪತ್ರ

ಚುನಾವಣಾ ಅಕ್ರಮಗಳ ಆರೋಪಗಳಿಗೆ ವಿಶ್ವಾಸಾರ್ಹ ಪುರಾವೆಗಳು ಅಗತ್ಯ ಎಂದು ಪ್ರತಿಪಾದಿಸಿರುವ 124...

ಮುದ್ದೇಬಿಹಾಳ | ದೆಹಲಿ ಸಭೆಗೂ ಮುನ್ನ ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ₹8,500 ಕನಿಷ್ಠ ಬೆಲೆ ಹಾಗೂ ಹೆಚ್ಚುವರಿಯಾಗಿ...