ಕರಾವಳಿ-ಮಲೆನಾಡಿನಲ್ಲಿ ಮಳೆ ಅಬ್ಬರ; ಹಲವು ರಸ್ತೆಗಳಲ್ಲಿ ಸಂಚಾರ ಬಂದ್‌

Date:

ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟಕ್ಕೆ ಹೆದ್ದಾರಿ ಬದಿಯ ಹಲವು ಗುಡ್ಡಗಳು ಕುಸಿದು ಬೀಳುತ್ತಿದ್ದು, ನಾನಾ ಭಾಗಗಳಲ್ಲಿ ಸಂಚಾರ ಬಂದ್‌ ಆಗಿದೆ. ಹಲವು ಪ್ರದೇಶಗಳಿಗೆ ಸಂಪರ್ಕ ಕಡಿತವಾಗಿವೆ. ಉತ್ತರ ಕನ್ನಡ, ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಗುಡ್ಡ ಕುಸಿತ ಪ್ರಕರಣಗಳು ಸಂಭವಿಸಿವೆ. ಪ್ರಮುಖ ಪಟ್ಟಣಗಳಿಗೆ ಸಂಪರ್ಕ ಒದಗಿಸುವ ರಸ್ತೆಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದ್ದು, ವ್ಯಾಪಾರ-ವಹಿವಾಟು, ಪ್ರವಾಸಗಳು ಮೊಟಕುಗೊಂಡಿವೆ.

- Advertisement -

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನಲ್ಲಿ ಶಿರೂರಿನ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿದಿದ್ದು, ಭಟ್ಕಳ-ಬೈಂದೂರು ನಡುವಿನ ಸಂಪರ್ಕ ಕಡಿತಗೊಂಡಿದೆ. ರಾಷ್ಟ್ರೀಯ ಹೆದ್ದಾರಿಯನ್ನು ಬಂದ್‌ ಮಾಡಲಾಗಿದೆ. ರಸ್ತೆಗೆ ಬಿದ್ದಿರುವ ಮಣ್ಣನ್ನು ತೆರವುಗೊಳಿಸುವ ಕಾರ್ಯಾಚರಣೆ ನಡೆಯುತ್ತಿದ್ದು, ಇನ್ನೂ ಕೆಲ ದಿನಗಳ ಕಾಲ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ನೀಡುವ ಸಾಧ್ಯತೆಗಳಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ರಾಗಿಹೊಸಳ್ಳಿ ಬಳಿ ಕೂಡ ರಾಷ್ಟ್ರೀಯ ಹೆದ್ದಾರಿ 766(ಇ)ರಲ್ಲಿ ಗುಡ್ಡು ಕುಸಿದಿದ್ದು, ಸಿರಸಿ ಮತ್ತು ಕುಮಟಾ ನಡುವಿನ ಸಂಪರ್ಕ ಕಡಿತಗೊಂಡಿದೆ. ವಾಹನ ಸವಾರರು ಸಿದ್ದಾಪುರ ಮಾರ್ಗವಾಗಿ ಸಂಚರಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಪ್ರಮುಖ ಪ್ರವಾಸಿ ತಾಣವಾದ ಯಾಣಕ್ಕೂ ಕೂಡ ಸಂಪರ್ಕ ಕಡಿತವಾಗಿದ್ದು, ಪ್ರವಾಸಿಗರ ಕುಮಟಾದಿಂದ ಮಾತ್ರವೇ ಯಾಣಕ್ಕೆ ತೆರಳುವಂತಾಗಿದೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಕಾಮಗಾರಿಯೂ ನಡೆಯುತ್ತಿದ್ದು, ಶಿರಾಡಿ ಘಾಟ್‌ನ ಪರಿಸ್ಥಿತಿ ಅಸ್ಥವ್ಯಸ್ಥವಾಗಿದೆ. ಶಿರಾಡಿ ಘಾಟ್‌ನಲ್ಲಿ ಸಂಚಾರ ಬಹುತೇಕ ಕಡಿತಗೊಂಡಿದೆ. ಜೊತೆಗೆ, ಸಂಪಾಜೆ ಬಳಿಯ ಘಾಟ್‌ನಲ್ಲಿಯೂ ಭೂಕುಸಿತ ಸಂಭವಿಸಿದೆ. ಬೆಂಗಳೂರು-ಮಂಗಳೂರು ನಡುವಿನ ಸಂಚಾರಕ್ಕೆ ಚಾರ್ಮಾಡಿ ಘಾಟ್‌ ಮಾರ್ಗವನ್ನಷ್ಟೇ ಬಳಸಬೇಕಾಗಿದೆ.

ಗುಡ್ಡ ಕುಸಿತ

ಇನ್ನು, ಮೈಸೂರು ಜಿಲ್ಲೆಯಲ್ಲಿ ಕಬಿನಿ ನದಿ ಉಕ್ಕಿ ಹರಿಯುತ್ತಿದ್ದು, ಕಬಿನಿ ಜಲಾಶಯವೂ ಬಹುತೇಕ ತುಂಬಿದೆ. ಪರಿಣಾಮ, ಜಲಾಶಯದಿಂದ ನದಿಗೆ ನೀರು ಹರಿಸಲಾಗಿದ್ದು, ಮೈಸೂರಿನಿಂದ ತಮಿಳುನಾಡು ಮತ್ತು ಕೇರಳಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 766 ನಂಜನಗೂಡಿನ ಮಲ್ಲನ ಮೂಲೆ ಮಠದ ಬಳಿ ಜಲಾವೃತಗೊಂಡಿದೆ. ಪರಿಣಾಮ, ವಾಹನ ಸಂಚಾರ ಸ್ಥಗಿತಗೊಂಡಿದ್ದು, ಮೈಸೂರಿನಿಂದ ಎರಡೂ ರಾಜ್ಯಗಳಿಗೆ ಸಂಪರ್ಕ ಕಡಿತಗೊಂಡಿದೆ.

ಕೊಡಗು ಜಿಲ್ಲೆಯಲ್ಲಿ ಮಳೆ ಅಬ್ಬರ ಹೆಚ್ಚಾಗಿದ್ದು, ಮಡಿಕೇರಿ-ವಿರಾಜಪೇಟೆ ರಾಜ್ಯ ಹೆದ್ದಾರಿಯಲ್ಲಿ ಪ್ರವಾಹ ಉಂಟಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮತ್ತು ಹೊರನಾಡು ನಡುವಿನ ರಸ್ತೆ, ಕಳಸ-ಹೊರನಾಡು ರಸ್ತೆ, ಶೃಂಗೇರಿ-ಕೊಪ್ಪ ರಸ್ತೆಗಳು ಅಲ್ಲಲ್ಲಿ ಜಲಾವೃತಗೊಂಡಿದ್ದು, ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಶೃಂಗೇರಿಯಿಂದ ಹೊರನಾಡಿಗೆ ಹೋಗುವ ರಸ್ತೆ ಸಂಪೂರ್ಣ ಬಂದ್ ಆಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....