ಕಲ್ಯಾಣ ಕರ್ನಾಟಕದಲ್ಲಿ ಅತಿವೃಷ್ಟಿ; ರಾಷ್ಟ್ರೀಯ ವಿಪತ್ತೆಂದು ಘೋಷಿಸಲು ರೈತ ಸಂಘ ಆಗ್ರಹ

Date:

ಕಳೆದ 3 ತಿಂಗಳುಗಳಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ರೈತರು ಬೆಳೆದಿದ್ದ ಬೆಳೆಗಳು ನಾಶವಾಗಿವೆ. ಉದ್ಯೋಗ ಮತ್ತಿತರ ಜೀವನಾಧಾರಗಳನ್ನು ಜನರು ಕಳೆದುಕೊಂಡಿದ್ದಾರೆ. ಈ ಅತಿವೃಷ್ಟಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು ಎಂದು ಕರ್ನಾಟಕ ಪ್ರಾಂತ ರೈತ ಸಂಘ (KPRS) ಆಗ್ರಹಿಸಿದೆ.

- Advertisement -

ಕಲ್ಯಾಣ ಕರ್ನಾಟಕ ಭಾಗದಲ್ಲಿ ಎದುರಾಗಿರುವ ಅತಿವೃಷ್ಟಿ ಕುರಿತು ಕೆಪಿಆರ್‌ಎಸ್‌ನ ಅಧ್ಯಕ್ಷ ಯು ಬಸವರಾಜ ಮತ್ತು ಪ್ರಧಾನ ಕಾರ್ಯದರ್ಶಿ ಟಿ ಯಶವಂತ ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ. “ಭಾರೀ ಮಳೆಯಿಂದಾಗಿ ಕಲ್ಯಾಣ ಕರ್ನಾಟಕದ ರೈತರು, ಕೃಷಿ ಕೂಲಿಕಾರರು ಹಾಗೂ ಇನ್ನಿತರ ಕೂಲಿಕಾರರ ಪರಿಸ್ಥಿತಿ ಶೋಚನಿಯವಾಗಿದೆ. ಕಲ್ಯಾಣ ಕರ್ನಾಟಕದ ಅತಿವೃಷ್ಟಿ, ಪ್ರವಾಹ ವಿಕೋಪವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಶಿಫಾರಸು ಮಾಡಬೇಕು. ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕೇಳಬೇಕು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಕಲ್ಬುರ್ಗಿ, ಯಾದಗಿರಿ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ ಹಲವಾರು ಪ್ರದೇಶಗಳು ನೈಸರ್ಗಿಕ ವಿಕೋಪದಿಂದ ತೀವ್ರ ಸ್ವರೂಪದ ಹಾನಿಗೆ ತುತ್ತಾಗಿವೆ. ಪ್ರತಿ ಎಕರೆ ಬೆಳೆ ನಷ್ಟಕ್ಕೆ ಕನಿಷ್ಠ 50 ಸಾವಿರ ರೂ. ಪರಿಹಾರ ನೀಡಬೇಕು, ಮನೆ ಕಳೆದುಕೊಂಡವರಿಗೆ ತಕ್ಷಣ ಒಂದು ಲಕ್ಷ ರೂ. ಪರಿಹಾರ ನೀಡಿ ಮನೆ ನಿರ್ಮಿಸಲು ವಿಶೇಷ ನೆರವು ಪ್ರಕಟಿಸಬೇಕು, ಉದ್ಯೋಗ ನಷ್ಟ ಅನುಭವಿಸಿರುವ ಪ್ರತಿಯೊಬ್ಬ ಬಡ ರೈತರು, ಕೃಷಿ ಕೂಲಿಕಾರರು ಹಾಗೂ ಎಲ್ಲ ರೀತಿಯ ಕೂಲಿಕಾರರಿಗೆ ಕನಿಷ್ಠ 35 ಸಾವಿರ ರೂ. ಉದ್ಯೋಗ ನಷ್ಟ ಪರಿಹಾರ ಒದಗಿಸಬೇಕು, ಎಲ್ಲ ಖಾಸಗಿ, ಸರ್ಕಾರಿ ಶಾಲಾ ಕಾಲೇಜುಗಳ ಬಾಕಿ ಶುಲ್ಕವನ್ನು ಮನ್ನಾ ಮಾಡಬೇಕು, ರೈತರ, ಕೂಲಿಕಾರರ, ಮಹಿಳೆಯರ ಎಲ್ಲ ರೀತಿಯ ಸಾಲಗಳನ್ನು ಮನ್ನಾ ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಬೂಟು- ಅಸ್ತವ್ಯಸ್ತಗೊಂಡ ಭಾರತದ ಸಂಕೇತ

“ಕಲ್ಯಾಣ ಕರ್ನಾಟಕದ ಜನತೆ ಪಕ್ಷಾತೀತವಾಗಿ ಪ್ರತಿಭಟಿಸುತ್ತಿದ್ದರೂ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಸಮೀಕ್ಷೆ ಮುಂತಾದ ಸಬೂಬುಗಳನ್ನು ಹೇಳಿಕೊಂಡು ಕಾಲಹರಣ ಮಾಡುತ್ತಿವೆ. ಇದು ಕೇಂದ್ರ ಮತ್ತು ರಾಜ್ಯ ಎರಡೂ ಸರ್ಕಾರಗಳ ಜನ ವಿರೋಧಿ ನೀತಿಗಳಿಗೆ ಸ್ಪಷ್ಟ ಸಾಕ್ಷಿಯಾಗಿದೆ” ಎಂದು ಕಿಡಿಕಾರಿದ್ದಾರೆ.

“ಜೀವನದ ಸಂಕಟ, ಸಾಲಭಾಧೆ ಮುಂತಾದ ಕಿರುಕುಳದಿಂದ ಈಗಾಗಲೇ ಕಲ್ಯಾಣ ಕರ್ನಾಟಕದಲ್ಲಿ ರೈತ ಆತ್ಮಹತ್ಯೆಗಳು ವರದಿಯಾಗುತ್ತಿವೆ. ಈಗ ಎದುರಾಗಿರುವ ಅತಿವೃಷ್ಟಿಯು ಪರಿಸ್ಥಿತಿಯನ್ನು ಮತ್ತಷ್ಟು ತೀವ್ರಗೊಳಿಸಲಿದೆ. ಮಳೆ -ಪ್ರವಾಹ ನಂತರದ ಸಾಂಕ್ರಾಮಿಕ ರೋಗಗಳು ಕಾಣಿಸಿಕೊಳ್ಳುತ್ತಿವೆ. ಇಂತಹ ದುಸ್ಥಿತಿಯ ಪರಿಸ್ಥಿತಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎರಡೂ ಹೊಣೆಗಾರರಾಗಿವೆ. ಕೂಡಲೇ ಆತ್ಮಹತ್ಯೆ ತಡೆಗಟ್ಟಲು ಹಾಗೂ ಸಾಂಕ್ರಾಮಿಕ ರೋಗ ಉಲ್ಬಣಗೊಳ್ಳದಂತೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....