ರಾಜ್ಯದ ಉತ್ತರ, ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಭಾರೀ ಮಳೆ: ಜಲಾಶಯಗಳಿಗೆ ಹೆಚ್ಚಿದ ಒಳಹರಿವು

Date:

ಜೂನ್‌ನಲ್ಲಿ ನೀರಸ ಆರಂಭದ ಬಳಿಕ, ಇದೀಗ ಮುಂಗಾರು ಚುರುಕುಗೊಂಡಿದ್ದು, ರಾಜ್ಯದ ಕರಾವಳಿ ಜಿಲ್ಲೆಗಳು, ಮಲೆನಾಡು ಪ್ರದೇಶ ಮತ್ತು ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಭಾರೀ ಮಳೆ ಬೀಳುತ್ತಿದ್ದು, ತಂಪಾದ ಗಾಳಿ ಬೀಸುತ್ತಿದೆ.

- Advertisement -

ಮಲೆನಾಡಿನಲ್ಲಿ ಮಳೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಮಲೆನಾಡಿನಲ್ಲಿ ನಿರಂತರ ಮಳೆ ಸುರಿಯುತ್ತಿರುವುದರಿಂದ ಜುಲೈ ತಿಂಗಳಲ್ಲಿ ತುಂಗಾ ಅಣೆಕಟ್ಟು ಮೊದಲ ಬಾರಿಗೆ ಭರ್ತಿಯಾಗಿದೆ. ಶಿವಮೊಗ್ಗ ಜಿಲ್ಲೆಯ ಗಾಜನೂರಿನಲ್ಲಿರುವ ಜಲಾಶಯಕ್ಕೆ 20,565 ಕ್ಯೂಸೆಕ್ ಒಳಹರಿವು ಬರುತ್ತಿದ್ದು, ಜಲಾಶಯವನ್ನು ಸುರಕ್ಷಿತ ಮಟ್ಟದಲ್ಲಿ ನಿರ್ವಹಿಸಲು 12 ಗೇಟ್‌ಗಳ ಮೂಲಕ 18,051 ಕ್ಯೂಸೆಕ್ ನೀರನ್ನು ತುಂಗಾ ನದಿಗೆ ಬಿಡಲಾಗುತ್ತಿದೆ. ಕಳೆದ ಕೆಲವು ದಿನಗಳಿಂದ ಜಿಲ್ಲಾದ್ಯಂತ ವ್ಯಾಪಕ ಮಳೆಯಾಗುತ್ತಿರುವುದರಿಂದ ಜಲಾಶಯದ ನೀರಿನ ಮಟ್ಟವು 588.24 ಮೀಟರ್ ಪೂರ್ಣ ಜಲಾಶಯದ ಮಟ್ಟವನ್ನು ತಲುಪಿದ್ದು, ಒಟ್ಟು 3.24 ಟಿಎಂಸಿ ನೀರು ಸಂಗ್ರಹವಾಗಿದೆ ಎಂಬುದನ್ನು ನೀರಾವರಿ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಆಗುಂಬೆಯಲ್ಲಿಯೂ ಕಳೆದ 24 ಗಂಟೆಗಳಲ್ಲಿ ದಾಖಲೆಯ 186 ಮಿಮೀ ಮಳೆಯಾಗಿದೆ.

ಕೃಷಿ ಋತುವಿಗೆ ಮುನ್ನ ಜಲಾಶಯ ತುಂಬಿರುವುದರಿಂದ ರೈತರಲ್ಲಿ ಆಶಾವಾದ ಮೂಡಿದ್ದರೂ, ನದಿಯ ಉದ್ದಕ್ಕೂ ಇರುವ ತಗ್ಗು ಪ್ರದೇಶಗಳಲ್ಲಿ ಭಾರೀ ಪ್ರಮಾಣದಲ್ಲಿ ನೀರಿನ ಹೊರಹರಿವು ಹೆಚ್ಚಾಗಿರುವುದರಿಂದಾಗಿ ಪ್ರವಾಹದ ಅಪಾಯ ಹೆಚ್ಚಾಗಿದೆ. ನದಿ ದಂಡೆಯ ಬಳಿ ವಾಸಿಸುವ ನಿವಾಸಿಗಳು ಜಾಗರೂಕರಾಗಿರಲು ಜಿಲ್ಲಾಡಳಿತ ಸೂಚನೆ ನೀಡಿದೆ. ನೀರಿನ ಹೊರಹರಿವು ಕಡಿಮೆಯಾಗುವವರೆಗೆ ಜನರು ಸ್ನಾನ ಮಾಡಲು, ಮೀನುಗಾರಿಕೆ ಮಾಡಲು ಅಥವಾ ಇತರ ಯಾವುದೇ ಚಟುವಟಿಕೆಗೆ ನದಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ರೈತರು, ಜಾನುವಾರುಗಳನ್ನು ದುರ್ಬಲ ಸ್ಥಳಗಳಿಂದ ದೂರ ಸ್ಥಳಾಂತರಿಸಲು ಸೂಚಿಸಲಾಗಿದೆ. ಜಲಾನಯನ ಪ್ರದೇಶದಲ್ಲಿ ಬೀಳುವ ಮಳೆ ಮತ್ತು ಜಲಾಶಯದ ಒಳಹರಿವಿನ ಆಧಾರದ ಮೇಲೆ ಜಲಾಶಯದಿಂದ ಹೊರಹರಿವಿನ ಪ್ರಮಾಣವನ್ನು ನಿಯಮಿತವಾಗಿ ಪರಿಶೀಲಿಸಲಾಗುವುದೆಂದು ಅಧಿಕಾರಿಗಳು ತಿಳಿಸಿದ್ದಾರೆ. ನಿರಂತರ ಮೇಲ್ವಿಚಾರಣೆ ನಡೆಯುತ್ತಿದ್ದು, ನದಿ ಮಟ್ಟ ಏರಿಕೆಯಿಂದ ಉಂಟಾಗುವ ಯಾವುದೇ ಪರಿಸ್ಥಿತಿಯನ್ನು ಎದುರಿಸಲು ತುರ್ತು ಪ್ರತಿಕ್ರಿಯೆ ತಂಡಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ.

ಕೆಲವೇ ದಿನಗಳ ಹಿಂದೆ ತೀವ್ರ ನೀರಿನ ಅಭಾವ ಎದುರಿಸುತ್ತಿದ್ದ ಲಕ್ಕವಳ್ಳಿಯ ಭದ್ರಾ ಜಲಾಶಯಕ್ಕೆ ಈಗ ಒಳಹರಿವು ಹೆಚ್ಚಾಗಿದ್ದು, ಸದ್ಯ ಭದ್ರಾ ಜಲಾಶಯಕ್ಕೆ 2,108 ಕ್ಯುಸೆಕ್‌ಗೂ ಅಧಿಕ ಒಳಹರಿವು ದಾಖಲಾಗುತ್ತಿದೆ. ಭಾನುವಾರದ ಒಳಹರಿವು 7,919 ಕ್ಯುಸೆಕ್‌ಗೆ ಏರಿದೆ. ಮಲೆನಾಡಿನ ಭಾಗದಲ್ಲಿ ಮಳೆ ಹೀಗೆಯೇ ಮುಂದುವರೆದರೆ ಮುಂದಿನ ಕೆಲವು ದಿನಗಳಲ್ಲಿ ಎರಡೂ ಜಲಾಶಯಗಳಿಗೆ ಹೇರಳವಾದ ಒಳಹರಿವು ಬರುವ ನಿರೀಕ್ಷೆಯಿದ್ದು, ನೀರಿನ ಮಟ್ಟ ಮತ್ತಷ್ಟು ವೇಗವಾಗಿ ಏರಲಿದೆ. ಈ ಬೆಳವಣಿಗೆ ಜಲಾನಯನ ಪ್ರದೇಶಗಳಾದ ಕೊಪ್ಪ ಮತ್ತು ಶೃಂಗೇರಿಯಲ್ಲಿ ಉತ್ತಮ ಮಳೆಯಾಗುತ್ತಿರುವುದು ಈ ಭಾಗದ ರೈತರಲ್ಲಿ ಭರವಸೆ ಮೂಡಿಸಿದೆ.

ಜೂನ್ ತಿಂಗಳಲ್ಲಿ ತೀವ್ರ ಹಿನ್ನಡೆ ಅನುಭವಿಸಿದ್ದ ಕಾವೇರಿ ಜಲಾನಯನ ಪ್ರದೇಶದಲ್ಲಿ ಜುಲೈ ಆರಂಭದೊಂದಿಗೆ ಮಳೆ ಚುರುಕಾಗಿದ್ದು, ಹೇಮಾವತಿ, ಗೊರೂರು ಜಲಾಶಯಗಳಿಗೂ ಆಸರೆಯಾಗಿದೆ.

ಕಾವೇರಿ ಕಣಿವೆಯಲ್ಲಿ ಚುರುಕಾದ ಮಳೆ

ಕೊಡಗಿನಲ್ಲಿ ಬಿರುಸಿನ ಮಳೆ: ಕೊಡಗಿನಲ್ಲಿ ಮಳೆಯ ತೀವ್ರತೆ ಕಡಿಮೆಯಾಗಿತ್ತು. ಆದರೆ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಕಾವೇರಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿದ್ದು, ಹಲವಾರು ಜಲಪಾತಗಳು ಮತ್ತು ಹೊಳೆಗಳು ಉಕ್ಕಿ ಹರಿಯುತ್ತಿವೆ. ಇದರಿಂದಾಗಿ ಕೆಆರ್‌ಎಸ್ ಮತ್ತು ಹಾರಂಗಿ ಜಲಾಶಯಗಳ ಒಳಹರಿವಿನಲ್ಲಿ ಚೇತರಿಕೆ ಕಂಡುಬರುತ್ತಿದೆ. ಗುಡ್ಡಗಾಡು ಜಿಲ್ಲೆಯ ಹಲವಾರು ಸ್ಥಳಗಳಲ್ಲಿ ಬಲವಾದ ಗಾಳಿಗೆ ಮರಗಳು ಮತ್ತು ವಿದ್ಯುತ್ ಕಂಬಗಳು ಉರುಳಿಬಿದ್ದಿವೆ.

ಹೇಮಾವತಿ ಹಾಗೂ ಗೊರೂರು ಜಲಾಶಯ: ಚಿಕ್ಕಮಗಳೂರಿನ ಮೂಡಿಗೆರೆ ಮತ್ತು ಹಾಸನದ ಸಕಲೇಶಪುರ ತಾಲೂಕುಗಳಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಹಾಸನದ ಗೊರೂರಿನ ಹೇಮಾವತಿ ಜಲಾಶಯಕ್ಕೆ ಒಳಹರಿವು ತೀವ್ರಗೊಂಡಿದೆ. ಸದ್ಯ ಜಲಾಶಯಕ್ಕೆ 3750 ಕ್ಯುಸೆಕ್‌ಗೂ ಅಧಿಕ ಒಳಹರಿವು ದಾಖಲಾಗುತ್ತಿದ್ದು, ಜಲಾಶಯದ ನೀರಿನ ಮಟ್ಟ ದಿನೇ ದಿನೆ ಏರುತ್ತಿದೆ. ಇದು ಕಾವೇರಿ ಕೊಳ್ಳ(ಜಲಾನಯನ ಪ್ರದೇಶ)ದ ಆತಂಕವನ್ನು ಕೊಂಚ ಮಟ್ಟಿಗೆ ದೂರ ಮಾಡಿದೆ.

ಕೊಡಗಿನಲ್ಲಿ ಮಳೆಯ ತೀವ್ರತೆ ಕಡಿಮೆಯಾಗಿತ್ತು. ಆದರೆ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಕಾವೇರಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಾಗಿದ್ದು, ಹಲವಾರು ಜಲಪಾತಗಳು ಮತ್ತು ಹೊಳೆಗಳು ಉಕ್ಕಿ ಹರಿಯುತ್ತಿವೆ. ಗುಡ್ಡಗಾಡು ಜಿಲ್ಲೆಯ ಹಲವಾರು ಸ್ಥಳಗಳಲ್ಲಿ ಬಲವಾದ ಗಾಳಿಗೆ ಮರಗಳು ಮತ್ತು ವಿದ್ಯುತ್ ಕಂಬಗಳು ಉರುಳಿಬಿದ್ದಿವೆ.

ಕರಾವಳಿ ಜಿಲ್ಲೆಗಳಲ್ಲಿ ಮಳೆ: ಹೊನ್ನಾವರ ಮತ್ತು ಭಟ್ಕಳ ಸೇರಿದಂತೆ ಕರಾವಳಿ ಪ್ರದೇಶಗಳು ಮತ್ತು ಉತ್ತರ ಕನ್ನಡದ ಮಲೆನಾಡು ಭಾಗಗಳಲ್ಲಿ (ಸಿರಸಿ ಮತ್ತು ಸಿದ್ದಾಪುರ) ಭಾರೀ ಮಳೆ ಮುಂದುವರೆದಿದೆ. ಯಲ್ಲಾಪುರ ಪಟ್ಟಣದಲ್ಲಿ ರಸ್ತೆಗೆ ಬೃಹತ್ ಮರ ಉರುಳಿದ ನಂತರ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಸಂಚಾರ ಸ್ವಲ್ಪ ಸಮಯದವರೆಗೆ ಅಸ್ತವ್ಯಸ್ತವಾಯಿತು.

ದಕ್ಷಿಣ ಕನ್ನಡದ ಹಲವು ಭಾಗಗಳಲ್ಲಿ ಭಾನುವಾರ ಭಾರೀ ಮಳೆಯಾಗಿದೆ. ಪುತ್ತೂರು ಪಟ್ಟಣದ ಹೊರವಲಯದಲ್ಲಿರುವ ಬೆದ್ರಾಳ ರೈಲು ಮೇಲ್ಸೇತುವೆ ಬಳಿ ಎಚ್‌ಟಿ ವಿದ್ಯುತ್ ತಂತಿಯ ಕಂಬಗಳು ಮತ್ತು ಮರವೊಂದು ಉರುಳಿಬಿದ್ದ ಪರಿಣಾಮ ಮಂಜೇಶ್ವರ-ಸುಬ್ರಹ್ಮಣ್ಯ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಯಿತು.  

ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಮಳೆ

ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳು ಮತ್ತು ಖಾನಾಪುರ ತಾಲೂಕಿನ ಅರಣ್ಯ ಪ್ರದೇಶಗಳಲ್ಲಿ ನಿರಂತರ ಮಳೆಯಿಂದಾಗಿ ಉತ್ತರ ಕರ್ನಾಟಕದ ಕೃಷ್ಣಾ ಮತ್ತು ಅದರ ಉಪನದಿಗಳು ಭರ್ತಿಯಾಗಿವೆ. ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ರಾಜಾಪುರ ಬ್ಯಾರೇಜ್‌ನಿಂದ 60,000ಕ್ಕೂ ಹೆಚ್ಚು ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಬಿಡುಗಡೆ ಮಾಡಲಾಗಿದೆ.

ವೇದಗಂಗಾ ಮತ್ತು ದೂಧಗಂಗಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಇದರಿಂದಾಗಿ ಬೆಳಗಾವಿ ನಗರದಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಸಂಕಷ್ಟ ಎದುರಾಗಿದೆ. ಕಳೆದ ಎರಡು ದಿನಗಳಲ್ಲಿ ಕನಿಷ್ಠ ನಾಲ್ಕು ಮನೆಗಳಿಗೆ ಹಾನಿಯಾಗಿದ್ದು, ನಗರದಲ್ಲಿ 20ಕ್ಕೂ ಹೆಚ್ಚು ಮರಗಳು ಧರೆಗುರುಳಿವೆ. ಜಿಲ್ಲೆಯ ಚಿಕ್ಕೋಡಿ ಉಪವಿಭಾಗದ ಏಳು ತಗ್ಗು ಸೇತುವೆಗಳು ಮುಳುಗಡೆಯಾಗಿದ್ದು, ನಂತರ ನಿಪ್ಪಾಣಿ ಮತ್ತು ಚಿಕ್ಕೋಡಿ ತಾಲೂಕುಗಳ ಹಲವಾರು ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ನೆರೆಯ ಮಹಾರಾಷ್ಟ್ರದ ರಾಜಾಪುರ-ಜುಗಲ್ ಸೇತುವೆ ಪ್ರವಾಹಕ್ಕೆ ಸಿಲುಕಿರುವುದರಿಂದ, ಗಡಿಯ ಎರಡೂ ಬದಿಗಳಲ್ಲಿನ ರಸ್ತೆ ಸಂಪರ್ಕ ಕಡಿತಗೊಂಡಿದೆ.

ಘಟಪ್ರಭಾದಾದ್ಯಂತ ಇರುವ ಹಿಡಕಲ್ ಅಣೆಕಟ್ಟಿನ ನೀರಿನ ಮಟ್ಟ ಒಂದೇ ದಿನದಲ್ಲಿ ಒಂದೂವರೆ ಅಡಿ ಹೆಚ್ಚಾಗಿದೆ. ಭಾನುವಾರ ಅಣೆಕಟ್ಟಿಗೆ 5,300 ಕ್ಯುಸೆಕ್‌ಗೂ ಅಧಿಕ ಒಳಹರಿವು ಬಂದಿದೆ. ‘ಕರ್ನಾಟಕದ ನಯಾಗರ’ ಗೋಕಾಕ್ ಜಲಪಾತದಲ್ಲಿ ಜೀವಕಳೆ ತುಂಬಿದೆ. ಮಲಪ್ರಭಾಕ್ಕೆ ಅಡ್ಡಲಾಗಿರುವ ನವಿಲುತೀರ್ಥ ಜಲಾಶಯಕ್ಕೂ ಕೂಡ ಒಳಹರಿವು ಬರಲು ಪ್ರಾರಂಭಿಸಿದೆ.

ನದಿ ತೀರದ ಗ್ರಾಮಸ್ಥರಿಗೆ ಹಾಗೂ ಕೆಳಮಟ್ಟದ ಸೇತುವೆಗಳನ್ನು ಬಳಸುವ ಸಾರ್ವಜನಿಕರಿಗೆ ಜಿಲ್ಲಾಡಳಿತಗಳು ಈಗಾಗಲೇ ಎಚ್ಚರಿಕೆ ನೀಡಿವೆ. ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಭಾರೀ ಮಳೆಯ ಮುನ್ಸೂಚನೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲಾಗಿದೆ.

ಇದನ್ನೂ ಓದಿದ್ದೀರಾ? ಮುಂದಿನ 24 ಗಂಟೆಗಳಲ್ಲಿ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಚಿಕ್ಕೋಡಿ ತಾಲೂಕಿನಾದ್ಯಂತ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ರೈತರ ಮೊಗದಲ್ಲಿ ಹರ್ಷ ಮೂಡಿದೆ. ಕಳೆದ ಒಂದು ತಿಂಗಳಿನಿಂದ ಮಳೆ ಬೀಳದ್ದರಿಂದ ಬಿತ್ತನೆ ಮಾಡಿದ ಬೀಜ ಕಮರಿ ಹೋಗುವ ಸ್ಥಿತಿಯಲ್ಲಿದ್ದವು. ಎರಡು ದಿನಗಳಿಂದ ಮಳೆ ಬೀಳುತ್ತಿರುವುದರಿಂದ ಎಲ್ಲೆಡೆ ಹಸಿರುಮಯ ವಾತಾವರಣ ಕಂಡುಬರುತ್ತಿದೆ. ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ ಕೃಷ್ಣಾ, ದೂಧಗಂಗಾ, ವೇದಂಗಾ ಸೇರಿದಂತೆ ವಿವಿಧ ನದಿಗಳಿಗೆ ಅಲ್ಪ ಪ್ರಮಾಣದ ನೀರು ಬಂದಿದ್ದು, ಜನರಲ್ಲಿ ಸಂತಸ ಮನೆ ಮಾಡಿದೆ. ಕಳೆದ ಒಂದು ತಿಂಗಳಿನಿಂದ ಸುರಿಯಬೇಕಿದ್ದ ಮಳೆ ಬಾರದ್ದರಿಂದ ಬತ್ತಿದ್ದ ನದಿ, ಕೆರೆ, ಹಳ್ಳ ಕೊಳ್ಳಗಳಿಗೆ ಇದೀಗ ಜೀವಕಳೆ ಮರುಕಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭದ್ರಾವತಿಯ VISL ಎಜಿಎಂ ಗೋವಿಂದರಾಜು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, VISL ಸಂಸ್ಥೆಯಲ್ಲಿ ಎಜಿಎಂ...

ಸುಪ್ರೀಂ ಕೋರ್ಟ್’ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ: ಕಾರಾಗೃಹ ಡಿಐಜಿ ಸೋಮಶೇಖರ್ ಬಂಧನ

ನಕಲಿ ಸುಪ್ರೀಂ ಕೋರ್ಟ್ ಆದೇಶವನ್ನು ಬಳಸಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬನನ್ನು...

ಬೀದರ್‌ | ಅ.7ರಂದು ಆಣದೂರ ಆರೋಗ್ಯ ಕೇಂದ್ರದಲ್ಲಿ ಸಾಮೂಹಿಕ ರಕ್ತದಾನ ಶಿಬಿರ

ಬೀದರ್‌ ತಾಲೂಕಿನ ಆಣದೂರ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಅ.7ರಂದು ಬೆಳಿಗ್ಗೆ...

ಧಾರವಾಡ | ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ

ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ...