ಮೇ 20ರವರೆಗೂ ರಾಜ್ಯದಲ್ಲಿ ಭಾರೀ ಮಳೆ, ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮುಂಜಾಗ್ರತೆ ಕ್ರಮಕ್ಕೆ ಸೂಚನೆ

Date:

ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಜೋರಾಗುತ್ತಿದ್ದು, ರಾಜ್ಯದ ಹಲವೆಡೆ ಬುಧವಾರ ಮಳೆ ಸುರಿದಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮತ್ತು ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗಿದೆ.

- Advertisement -

ಮೇ 20ರವರೆಗೂ ರಾಜ್ಯದಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಳೇ ಮೈಸೂರು ಭಾಗದಲ್ಲಿ ಸಾಧಾರಣ ಮಳೆಯಾಗಿದ್ದು, ಮುಂದಿನ 2-3 ದಿನಗಳ ಕಾಲ ಮಳೆ ಜೋರಾಗುವ ಸಾಧ್ಯತೆ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಸಿಂಧನೂರು, ಮಸ್ಕಿ ಹಾಗೂ ಜಿಲ್ಲೆಯ ಕೆಲವೆಡೆ ಸುರಿದ ಗುಡುಗು ಸಹಿತ ಭಾರಿ ಮಳೆಗೆ ಒಬ್ಬರು ಸಿಡಿಲಿಗೆ ಮೃತಪಟ್ಟಿದ್ದು, ಮೂರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿಂಧನೂರು ತಾಲೂಕಿನಲ್ಲಿ ಭಾರಿ ಮಳೆಗೆ ಭತ್ತದ ಬೆಳೆ ನಾಶವಾದರೆ ಹಲವು ತಗ್ಗು ಪ್ರದೇಶಗಳಲ್ಲಿ ನೀರು ಹರಿದು ಜಲಾವೃತ್ತವಾಗಿ ಅಪಾರ ಹಾನಿಗೊಂಡಿದೆ.

ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲ್ಲೂಕಿನ ಕಟಗೇರಿ ಗ್ರಾಮದಲ್ಲಿ ಮಂಗಳವಾರ ಸಂಜೆ ಸಿಡಿಲು ಬಡಿದು ಪಾರ್ವತೆವ್ವ ಹನಮಂತ ಅಪ್ಪನ್ನವರ (56) ಮೃತಪಟ್ಟಿದ್ದಾರೆ.

ಬೆಳಗಾವಿ ಜಿಲ್ಲೆಯ ಗೋಕಾಕದಲ್ಲಿ ಮಂಗಳವಾರ ಚರಂಡಿಯಲ್ಲಿ ಮಳೆ ನೀರಿನೊಂದಿಗೆ ಕೊಚ್ಚಿಹೋಗಿದ್ದ ಕಾಟೆಪ್ಪ ದುರಗಪ್ಪ ಶಿರಹಟ್ಟಿ (52) ಎಂಬುವರ ಶವ ಬುಧವಾರ ಪತ್ತೆಯಾದೆ. ಚರಂಡಿ ದಾಟುವ ವೇಳೆ ಅವರು ಆಯ ತಪ್ಪಿ ಬಿದ್ದಿದ್ದರು.

ಗದಗ ಜಿಲ್ಲೆಯ ಲಕ್ಷ್ಮೀಶ್ವರದಲ್ಲಿ, ಕಲಬುರಗಿ ನಗರ ಹಾಗೂ ಬೀದರ್ ಜಿಲ್ಲೆಯ ವಿವಿಧೆಡೆ ಬಿರುಸಿನ ಮಳೆಯಾಗಿದೆ. ರಾಮನಗರ ಜಿಲ್ಲೆಯಾದ್ಯಂತ ಉತ್ತಮ ಮಳೆ ಸುರಿಯಿತು. ಬಾಗೇಪಲ್ಲಿ ಪಟ್ಟಣದಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆ ಸುರಿಯಿತು. ಹೊಲ-ಗದ್ದೆಗಳಲ್ಲಿ ನೀರು ಸಂಗ್ರಹವಾಗಿ ಭತ್ತ, ಜೋಳ, ಹೂವು ಬೆಳೆ ನೆಲ ಕಚ್ಚಿದೆ. ಕುರಿ, ಮೇಕೆ, ಎತ್ತು, ಹಂದಿ ಶೆಡ್‌ಗಳಿಗೆ ಮಳೆ ನೀರು ನುಗ್ಗಿದೆ.

ಮೈಸೂರು ಸೇರಿದಂತೆ ಜಿಲ್ಲೆಯ ಹಲವೆಡೆ ಗುಡುಗು, ಸಿಡಿಲು ಸಹಿತ ಮಳೆಯಾಯಿತು. ಹಾಸನ ಜಿಲ್ಲೆಯ ಅರಕಲಗೂಡು ಹಾಗೂ ಸುತ್ತಮುತ್ತ ಸುಮಾರು ಅರ್ಧಗಂಟೆ ಮಳೆ ಸುರಿದಿದೆ. ಹಾಗೆಯೇ ಕೊಡಗು ಜಿಲ್ಲೆಯಲ್ಲೂ ಉತ್ತಮ ಮಳೆಯಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನಿರ್ಭೀತ ನ್ಯಾಯಮೂರ್ತಿಗಳು ಮತ್ತು ಕಾಕತಾಳೀಯ ಕಾವ್ಯಾತ್ಮಕ ನ್ಯಾಯ

ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಹೆಚ್ಚು ಮಳೆ

ಹವಾಮಾನ ಇಲಾಖೆಯ ಪ್ರಕಾರ, ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಗುಡುಗು-ಮಿಂಚಿನೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಸಾರ್ವಜನಿಕರಿಗೆ ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದೆ. ಕಡಿಮೆ ಒಡನಾಟದ ಪ್ರದೇಶಗಳಲ್ಲಿ ಭೂಕುಸಿತದ ಸಾಧ್ಯತೆಯನ್ನು ತಳ್ಳಿಹಾಕದಿರುವುದರಿಂದ, ಮಲೆನಾಡು ಭಾಗದ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಕೋರಲಾಗಿದೆ.

ಹವಾಮಾನ ಇಲಾಖೆಯ ಮುನ್ಸೂಚನೆಯಂತೆ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂದಿನ ಕೆಲವು ದಿನಗಳವರೆಗೆ ಮಳೆಯ ತೀವ್ರತೆ ಮುಂದುವರಿಯುವ ಸಾಧ್ಯತೆಯಿದೆ. ಈ ಸಂದರ್ಭದಲ್ಲಿ ರೈತರು ಮತ್ತು ಸಾರ್ವಜನಿಕರು ಮಳೆಗಾಲಕ್ಕೆ ಸಂಬಂಧಿಸಿದ ಸಿದ್ಧತೆಗಳನ್ನು ಪೂರ್ಣಗೊಳಿಸಿಕೊಳ್ಳುವಂತೆ ಜಿಲ್ಲಾಡಳಿತ ಸಲಹೆ ನೀಡಿದೆ.

ತಂಬಾಕು ಬೆಳೆಗಾರರಲ್ಲಿ ಸಂತಸ

ಹಾಸನ, ಕೊಡಗು, ಚಾಮರಾಜನಗರ ಜಿಲ್ಲೆಯ ವಿವಿಧೆಡೆ ಹಾಗೂ ಮೈಸೂರಿನಲ್ಲಿ ಬುಧವಾರ ಸಂಜೆ ಬಿರುಸಿನ ಮಳೆ ಸುರಿದಿದ್ದು, ತಂಬಾಕು, ಜೋಳ ಬೆಳೆಗಾರರ ಮುಖದಲ್ಲಿ ಹರ್ಷ ಮೂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....

KPSC ನೇಮಕಾತಿ ಹಗರಣ: SIT ರಚನೆಗೆ ಸುಪ್ರೀಂ ತಡೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ...

ನಾಳೆ ‘ಕೊಂದವರು ಯಾರು?’ ರಾಷ್ಟ್ರೀಯ ವಿಚಾರ ಸಂಕಿರಣ: ಪಿತೃಪ್ರಧಾನತೆ, ಹೊಣೆಗಾರಿಕೆ ಕುರಿತು ಚರ್ಚೆಗೆ ವೇದಿಕೆ

ಕರ್ನಾಟಕದ ‘ನಾವೆದ್ದು ನಿಲ್ಲದಿದ್ದರೆ' ಸಂಘಟನೆಯು ಆರಂಭಿಸಿರುವ 'ಕೊಂದವರು ಯಾರು? Who Killed...