ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ: ಹವಾಮಾನ ಇಲಾಖೆ

Date:

ಕರ್ನಾಟಕದ 23 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಮಲೆನಾಡು ವಿಭಾಗದ ಜಿಲ್ಲೆಗಳಲ್ಲಿ ಅಧಿಕ ಮಳೆಯ ಎಚ್ಚರಿಕೆ ನೀಡಿದೆ.

- Advertisement -

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ ಘೋಷಿಸಲಾಗಿದೆ. ಇನ್ನು, ವಿಜಯನಗರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್,​ದಾವಣಗೆರೆ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್​ ಘೋಷಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಕಳೆದ ಒಂದು ವಾರದಿಂದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಜನಜೀವನ ಅಸ್ತವ್ಯಸ್ತವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆಯುತ್ತಿರುವ ರಹಸ್ಯವಾಗಿ ಹೂತುಹಾಕಲಾಗಿದ್ದ ಮೃತದೇಹಗಳ ಕಳೇಬರಗಳನ್ನು ಹೊರತೆಗೆಯುವ ಕಾರ್ಯಾಚರಣೆಗೂ ಅಡಚಣೆಯಾಗಿದೆ. ಆದಾಗ್ಯೂ, ಕಾರ್ಯಾಚರಣೆಯನ್ನು ಎಸ್‌ಐಟಿ ಮುಂದುವರೆಸಿದೆ.

Advertisements

ಈ ಲೇಖನ ಓದಿದ್ದೀರಾ?: ಮಾಲೆಗಾಂವ್ ಸ್ಫೋಟ | ಪ್ರಮುಖ ಸಾಕ್ಷಿಗಳನ್ನೇ ಕೈಬಿಟ್ಟಿದ್ದ ಪ್ರಾಸಿಕ್ಯೂಷನ್; ಅನುಮಾನಗಳಿದ್ದರೂ ಮುಗಿದು ಹೋದ ಪ್ರಕರಣ

ಇನ್ನು, ರಾಜ್ಯದ ಹಲವಾರು ಭಾಗಗಳಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಬೆಂಗಳೂರು ನಗರದಲ್ಲಿಯೂ ಸಾಧಾರಣ ಮಳೆಯಾಗುತ್ತಿದೆ. ಆದರೂ, ವಾಹನ ಸಂಚಾರವನ್ನು ಅಸ್ತವ್ಯಸ್ತಗೊಳಿಸಿದೆ. ಉದ್ಯೋಗಕ್ಕೆ ತೆರಳುವ, ಕೂಲಿ ಕೆಲಸ ಮಾಡುವ ಉದ್ಯೋಗಿಗಳು ಮತ್ತು ಕಾರ್ಮಿಕರಿಗೆ ತೊಂದರೆ ಉಂಟಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​’ಪೊಲೀಸರು ಆರ್‌ಎಸ್‌ಎಸ್ ಗುಲಾಮರ ಮಕ್ಕಳಲ್ಲ’: ಪ್ರಿಯಾಂಕ್ ಖರ್ಗೆ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ವಿರುದ್ಧ ತಮ್ಮ ವಾಗ್ದಾಳಿ ಮುಂದುವರಿಸಿರುವ...

ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : ಬಿಜೆಪಿ-ಕಾಂಗ್ರೆಸ್‌ ತೀವ್ರ ಪೈಪೋಟಿ, ಗೆಲುವು ಯಾರಿಗೆ?

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿನ ಓಟಕ್ಕೆ ತಡೆ...

ಅಪ್ರಾಪ್ತ ಮಗನ ಕಾರು ಅಪಘಾತದಲ್ಲಿ ಮೂವರ ಸಾವು; ತಂದೆ ವಿರುದ್ಧದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ಅಪ್ರಾಪ್ತ ವಯಸ್ಸಿನ ಮಗನಿಗೆ ಕಾರು ಚಲಾಯಿಸಲು ಅವಕಾಶ ನೀಡಿದ ಆರೋಪ ಎದುರಿಸುತ್ತಿರುವ...