ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದಿದ್ದು, ಚಂಡಮಾರುತ ಬೀಸುತ್ತಿದೆ. ಪರಿಣಾಮ, ಕರಾವಳಿ ರಾಜ್ಯಗಳಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದೆ. ಕರ್ನಾಟಕದಲ್ಲಿ ಇನ್ನೂ 5 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮಾತ್ರವಲ್ಲದೆ, 40ರಿಂದ 60 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಎಚ್ಚರಿಕೆಯನ್ನೂ ನೀಡಿದೆ
ಚಂಡಮಾರುತ ಕಾರಣದಿಂದಾಗಿ, ಪಶ್ಚಿಮ ಬಂಗಾಳ, ಬಿಹಾರ, ಸಿಕ್ಕಿಂ, ಒಡಿಶಾ, ತೆಲಂಗಾಣ, ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡು ಹಾಗೂ ಕೇರಳ ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಕರ್ನಾಟಕದಲ್ಲಿ 18 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಗದಗ, ಹಾವೇರಿ, ಧಾರವಾಡ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಮಾತ್ರವಲ್ಲದೆ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ವಿಜಯಪುರ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದೂ ಹೇಳಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗಂಟೆಗೆ 50-70 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಎಂದು ಹೇಳಿದೆ.
ಗುರುವಾರವೂ ರಾಜ್ಯದ ನಾನಾ ಭಾಗಗಳಲ್ಲಿ ಮಳೆಯಾಗಿದೆ. ಹಲವೆಡೆ ಸುರಿದ ಭಾರೀ ಮಳೆಗೆ ಬೆಳೆಗಳು ನಾಶವಾಗಿವೆ.
thanks for providing Best news