ಧರ್ಮಸ್ಥಳ | 13 ವರ್ಷದ ಹಿಂದೆ ಕಾಣೆಯಾದ ಹೇಮಲತಾ; ಎಸ್‌ಐಟಿ ಸೂಚನೆ ಬಳಿಕ ಪ್ರಕರಣ ದಾಖಲು

Date:

ಧರ್ಮಸ್ಥಳದಲ್ಲಿ 17 ವರ್ಷದ ಬಾಲಕಿಯೊಬ್ಬಳು ಕಾಣೆಯಾದ 13 ವರ್ಷಗಳ ನಂತರ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸರು ಇದೀಗ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

2012 ರಲ್ಲಿ ಬಂಟ್ವಾಳ ತಾಲೂಕಿನ ಕವಲಮುದುರು ಎಂಬ ಗ್ರಾಮದ ನಿವಾಸಿ ನಾರಾಯಣ ದೇವಾಡಿಗ ಅವರ ಪುತ್ರಿ 17 ವರ್ಷದ ಹೇಮಾವತಿ ಆಲಿಯಾಸ್‌ ಹೇಮಲತಾ ಅವರನ್ನು ಅಂಗನವಾಡಿ ಕಾರ್ಯಕರ್ತೆ ವಾಸಂತಿ ಎಂಬಾಕೆ ಕರೆದೊಯ್ದಿರುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ವಾಸಂತಿ ಅವರು ಮನಗೆ ಮರಳಿರುತ್ತಾರೆ. ಆದರೆ ಹೇಮಲತಾ ಮನೆಗೆ ಮರಳುವುದೇ ಇಲ್ಲ. ಆಕೆಯ ಸಹೋದರ ನಿತಿನ್‌ ದೇವಾಡಿಗ ಅವರು ಬಿಎಲ್‌ ಆರ್‌ ಪೋಸ್ಟ್‌ ಗೆ ನೀಡಿರುವ ಸಂದರ್ಶನದಲ್ಲಿ ನನ್ನ ಸಹೋದರಿ ಕಾಣೆಯಾಗುತ್ತಿದ್ದಂತೆ ಕೂಡಲೇ 2012 ರಲ್ಲೇ ನಾವು ಪುಂಜಾಲಕಟ್ಟೆ ಪೊಲೀಸ್‌ ಠಾಣೆಗೆ ದೂರು ದಾಖಲಿಸಲು ಹೋದೆವು. ಆದರೆ ಪೊಲೀಸರು ದೂರು ದಾಖಲಿಸಿಕೊಳ್ಳಲು ನಿರಾಕರಿಸಿದರು. ಆಕೆಯನ್ನು ಹುಡುಕುವುದಾಗಿ ಹೇಳಿ ದೂರು ದಾಖಲಿಸಿಕೊಳ್ಳದೆ ನಮ್ಮನ್ನು ಕಳುಹಿಸಿದರು. ಆದರೆ ಇದುವರೆಗೂ ನನ್ನ ಸಹೋದರಿಯನ್ನು ಅವರು ಹುಡುಕಲೇ ಇಲ್ಲ ಎಂದು ತಿಳಿಸಿದ್ದಾರೆ.

ಆ ಸಂದರ್ಭದಲ್ಲಿ ವಾಸಂತಿ ನಮಗೆ ಹೇಮಲತಾ ನನ್ನ ಜತೆ ದೇವಸ್ಥಾನಕ್ಕೆ ಬರಲೇ ಇಲ್ಲ ಎಂದು ಸುಳ್ಳು ಹೇಳಿದಳು. ತನ್ನ ಜೀವನೋಪಾಯಕ್ಕೆ ಉದ್ಯೋಗ ಸಿಗಲಿದೆ ಎಂದು ಕೆಲಸ ಕಲಿಯಲು ನನ್ನ ಸಹೋದರಿ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡುತ್ತಿದ್ದಳು. ಈ ಹಿಂದೆಯೂ ವಾಸಂತಿ ನನ್ನ ಸಹೋದರಿಯನ್ನು ಧರ್ಮಸ್ಥಳಕ್ಕೆ ಕರೆದುಕೊಂಡು ಹೋಗಿದ್ದರು. ಆದರೆ ಎರಡನೇ ಬಾರಿ ಹೋದಾಗ ನನ್ನ ಸಹೋದರಿ ಮರಳಿ ಬರಲೇ ಇಲ್ಲ ಎಂದು ವಿವರಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್‌ಗಷ್ಟೇ ಅಲ್ಲ, ಸಮಾಜಕ್ಕೆ ಅರ್ಥವಾಗಿದೆಯೇ ಆರ್‌ಎಸ್‌ಎಸ್ ಅಜೆಂಡಾ?

ಪೊಲೀಸರು ದೂರು ದಾಖಲಿಸಿಕೊಳ್ಳಲೇ ಇಲ್ಲ. ನಾವು ಪ್ರಭಾವಿಗಳೂ ಅಲ್ಲ, ಆರ್ಥಿಕವಾಗಿ ಬಲಾಢ್ಯರಾಗಿರಲಿಲ್ಲ. ಧರ್ಮಸ್ಥಳದಲ್ಲಿ ಸಂಭವಿಸಿದ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದಂತೆ ಶವಗಳನ್ನು ಹೂತು ಹಾಕಿರುವ ಪ್ರಕರಣ ಕುರಿತು ತನಿಖೆ ನಡೆಸಲು 2025ರ ಜುಲೈ 19 ರಂದು ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ ಐಟಿ) ರಚಿಸಿತು. ನನ್ನ ಸಹೋದರಿ ಹೇಮಲತಾ ಕಾಣೆಯಾಗಿರುವುದಾಗಿ ಎಸ್‌ ಐಟಿ ಗೆ ಮನವಿ ಸಲ್ಲಿಸಿದಾಗ ಅಧಿಕಾರಿಗಳು, ಸ್ಥಳೀಯ ಪೊಲೀಸ್‌ ಠಾಣೆಯನ್ನು ಸಂಪರ್ಕಿಸಲು ಸೂಚಿಸಿದರು.

ಎಸ್‌ ಐಟಿ ನೀಡಿರುವ ಸೀಕೃತಿ ಪತ್ರವನ್ನು ತೋರಿಸಿದಾಗ ಪುಂಜಾಲಕಟ್ಟೆ ಪೊಲೀಸರು ಅಂತಿಮವಾಗಿ 2025 ರ ಆಗಸ್ಟ್‌ 14 ರಂದು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಹೇಮಲತಾ ಅವರ ಮಾಹಿತಿ ಸಂಗ್ರಹಿಸಲು ಸ್ಥಳೀಯ ಪೊಲೀಸರು ಮೂರು ಬಾರಿ ದೇವಾಡಿಗ ಅವರ ಮನೆಗೆ ಭೇಟಿ ನೀಡಿದ್ದಾರೆ. ಪೊಲೀಸರು ವಾಸಂತಿ ಅವರ ಮನೆಗೂ ಭೇಟಿ ನೀಡಿದ್ದಾರೆ. ಮತ್ತೊಮ್ಮೆ ನಮ್ಮ ಮನೆಗೆ ಭೇಟಿ ನೀಡಿದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಾಸಂತಿ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸ್‌ ಮೂಲಗಳು ಖಚಿತಪಡಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...