ರಾಜ್ಯಪಾಲರ ‘ಪಲಾಯನ’ ರಹಸ್ಯ ಇಲ್ಲಿದೆ- ‘ಮನರೇಗ’ದ ಮೆಚ್ಚುಗೆ- ‘ವಿಬಿ ಜಿ ರಾಮ್ ಜಿ’ಯ ಟೀಕೆ

Date:

ರಾಜ್ಯಪಾಲರ ಭಾಷಣದ ಮೂರನೆಯ ಪ್ಯಾರಾದಿಂದ 11ನೆಯ ಪ್ಯಾರಾದ ಹತ್ತು ಅಂಶಗಳು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ ಅವರನ್ನು ಇಕ್ಕಟ್ಟಿಗೆ ಸಿಕ್ಕಿಸಿ ಕಡೆಗೆ ಭಾಷಣವನ್ನು ಓದದೆ ಪಲಾಯನ ಮಾಡಲು ಕಾರಣವಾಗಿವೆ ಎಂಬುದು ಸ್ಪಷ್ಟ.

- Advertisement -

ಮಹಾತ್ಮಾಗಾಂಧೀ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಯೋಜನೆಯ (ಮನರೇಗ) ಮರುಜಾರಿಗೆ ಆಗ್ರಹಿಸುವ ಮತ್ತು ಮೋದಿ ಸರ್ಕಾರ ಮನರೇಗ ಯೋಜನೆಯನ್ನು ತಿರುಚಿ ವಿಕೃತಗೊಳಿಸಿ ಅದರ ಗ್ರಾಮೀಣ ಬಡವರ ಪರ ಆತ್ಮವನ್ನೇ ಕೊಂದು, ಅದರ ಜಾಗದಲ್ಲಿ ತಂದಿರುವ ವಿಬಿ ಜಿ ರಾಮ್ ಜಿ ಯೋಜನೆಯ ಕುರಿತ ಕಟು ಟೀಕೆಗಳು ಈ ಪ್ಯಾರಾಗಳಲ್ಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಮಹಾತ್ಮಾಗಾಂಧೀ ಅವರ ಹೆಸರನ್ನು ಕೈ ಬಿಟ್ಟಿರುವ ನಡೆಯನ್ನೂ ಟೀಕೆಗೆ ಗುರಿಪಡಿಸಲಾಗಿದೆ.

ಈ ಅಂಶಗಳ ಕುರಿತು ಭಾಷಣದ ಮೂಲ ಪಠ್ಯವನ್ನು ಈ ಕೆಳಕಂಡಂತಿದೆ:

“ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ” ಕಾಯ್ದೆಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಆ ಮೂಲಕ ಗ್ರಾಮೀಣ ಪ್ರದೇಶದ ಕೂಲಿ ಕಾರ್ಮಿಕರು, ಸಣ್ಣ ರೈತರ, ಮಹಿಳೆಯರ ಉದ್ಯೋಗದ ಮತ್ತು ನಿರುದ್ಯೋಗ ಭತ್ಯೆಯ ಹಕ್ಕನ್ನು ಕಸಿದುಕೊಂಡಿದೆ. ಗ್ರಾಮೀಣ ಭಾರತದ ಅಭಿವೃದ್ಧಿ ಪರ್ವದ ಬೃಹತ್‌ ಅಧ್ಯಾಯವಾಗಿದ್ದ “ಮನರೇಗಾ” ಕಾಯ್ದೆಯ ರದ್ಧತಿಯ ಮೂಲಕ ಭಾರತೀಯ ಗ್ರಾಮೀಣ ಬದುಕನ್ನು ದುರ್ಬಲಗೊಳಿಸಲಾಗಿದೆ.

ಗಾಂಧೀಜಿಯವರು, ಗ್ರಾಮಗಳು ಸ್ವತಂತ್ರವಾದ, ಸ್ವಾಯತ್ತವಾದ ಘಟಕಗಳಾಗಬೇಕು ಎಂದು ಆಶಿಸಿದ್ದರು, “ಗ್ರಾಮಗಳು ನಾಶವಾದಲ್ಲಿ ಭಾರತವೂ ನಾಶವಾಗುತ್ತದೆ. ಈ ದೇಶ ಯಾವ ಸಂದೇಶವನ್ನು ಜಗತ್ತಿಗೆ ನೀಡಬೇಕೊ ಅದು ಇಲ್ಲವಾಗುತ್ತದೆ. ಗ್ರಾಮಗಳನ್ನು ಶೋಷಣೆ ಮಾಡುವುದು ಪೂರ್ಣವಾಗಿ ನಿಂತರೆ ಮಾತ್ರವೇ ಗ್ರಾಮ ಪುನರುಜ್ಜೀವನ ಸಾಧ್ಯವಾದೀತು. ಗ್ರಾಮಗಳು ಸ್ವಾವಲಂಬಿಗಳಾಗುವ ಕಡೆಗೆ ನಮ್ಮ ಗಮನವನ್ನೆಲ್ಲ ಕೇಂದ್ರೀಕರಿಸಬೇಕು“ಎಂದಿದ್ದರು. ಗ್ರಾಮಗಳು ಕೊಳಕು ಕೂಪಗಳಾಗಬಾರದು. ಅನ್ನ, ಉದ್ಯೋಗಗಳನ್ನು ಹುಡುಕಿಕೊಂಡು ನಗರಗಳಿಗೆ ವಲಸೆ ಹೋಗಬಾರದೆಂಬುದೂ ಸಹ ಗಾಂಧೀಜಿಯವರ ಅಭಿಪ್ರಾಯವಾಗಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು 2005 ರಲ್ಲಿ “ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ”ಯನ್ನು ಪ್ರಾರಂಭಿಸಿತ್ತು. ಈ ಯೋಜನೆಯಲ್ಲಿ ರಾಜ್ಯವು ಕಳೆದ 20 ವರ್ಷಗಳಲ್ಲಿ 76.89 ಲಕ್ಷ ಕಾಮಗಾರಿಗಳನ್ನು 61.03 ಸಾವಿರ ಕೋಟಿ ರೂ ವೆಚ್ಚದಲ್ಲಿ ಕೈಗೊಳ್ಳಲಾಗಿದೆ. 182.5 ಕೋಟಿ ಮಾನವ ದಿನಗಳಷ್ಟು ಉದ್ಯೋಗವನ್ನು ಸೃಜಿಸಿದೆ.

ಮನರೇಗಾ ಕಾಯ್ದೆಯು ಖಾತ್ರಿ ಮಾಡಿದ್ದ ಉದ್ಯೋಗದ ಖಾತ್ರಿಯನ್ನು ಹೊಸ ವಿಬಿ ಗ್ರಾಮ್ ಜಿ ಕಾಯ್ದೆಯು ಕಿತ್ತುಕೊಂಡಿದೆ. ಮನರೇಗಾ ಕಾಯ್ದೆಯ ಸೆಕ್ಷನ್ 3 ರ ಪ್ರಕಾರ ಯಾವುದೇ ಪಂಚಾಯಿತಿಯಲ್ಲಿ ಉದ್ಯೋಗ ನೀಡಬೇಕೆಂದು ಅರ್ಜಿ ಹಾಕಿದ ಪ್ರತಿಯೊಬ್ಬರಿಗೂ ಉದ್ಯೋಗ ನೀಡಬೇಕೆಂದು ಸ್ಪಷ್ಟವಾಗಿ ನಮೂದಿಸಲಾಗಿದೆ. ಬೇಡಿಕೆಯನ್ನು ಆಧರಿಸಿ ಉದ್ಯೋಗ ನೀಡಬೇಕೆಂಬ ತತ್ವವನ್ನು ಧ್ವಂಸ ಮಾಡಿ ಪೂರೈಕೆ ಆಧಾರಿತ ಯೋಜನೆ ಮಾಡಲಾಗಿದೆ. ಕಾರ್ಪೊರೇಟ್‌ ಬಂಡವಾಳಿಗರ ಹಿತಾಸಕ್ತಿಯನ್ನು ಕಾಪಾಡುವ ಉದ್ದೇಶದಿಂದ, ʼವಿಬಿ ಗ್ರಾಮ್‌ ಜಿʼ ಯೋಜನೆಯನ್ನು ರೂಪಿಸಲಾಗಿದೆ. ಆ ಮೂಲಕ ಗ್ರಾಮೀಣ ಜನರ ಹಿತಾಸಕ್ತಿಯನ್ನು ಗಾಳಿಗೆ ತೂರಲಾಗಿದೆ. ಇದರಿಂದಾಗಿ ಗ್ರಾಮೀಣ ಆಸ್ತಿ ಸೃಜನೆಯ ಮೇಲೆ ಮತ್ತು ಕೂಲಿಕಾರರು ಅವರು ಇರುವ ಸ್ಥಳಗಳಲ್ಲಿಯೇ ಉದ್ಯೋಗ ಒದಗಿಸಬೇಕೆಂಬ ಘನವಾದ ಉದಾತ್ತ ಉದ್ದೇಶಗಳನ್ನು ತರಗೆಲೆಗಳಂತೆ ಉದುರಿಸಲಾಗಿದೆ. ಇಂತಹ ಪ್ರಗತಿ ವಿರೋಧಿ ಕ್ರಮವನ್ನು ನನ್ನ ಸರ್ಕಾರ ಬಲವಾಗಿ ಖಂಡಿಸುತ್ತದೆ. ಹೆಸರಾಂತ ಮನರೇಗಾ ರಾಷ್ಟ್ರದಾದ್ಯಂತ ಪ್ರಸಿದ್ಧಿ ಪಡೆದಿತ್ತು. ಪ್ರಗತಿಯ ಪ್ರತೀಕವಾಗಿತ್ತು ಎಂಬುದನ್ನು ನೀರಿನಲ್ಲಿ ಹೋಮ ಮಾಡಿದಂತೆ ಕೇಂದ್ರ ಸರ್ಕಾರ ಈ ಯೋಜನೆಗೆ ತಿಲಾಂಜಲಿಯನ್ನಿಟ್ಟಿದೆ.

ಮನರೇಗಾ ಯೋಜನೆಯಲ್ಲಿದ್ದ ಗಾಂಧೀಜಿಯವರ ಪ್ರಧಾನ ಆಶಯವಾದ ಗ್ರಾಮ ಸ್ವರಾಜ್ಯದ ಕಲ್ಪನೆಯನ್ನು ಹೊಸ ಕಾಯ್ದೆಯು ದುರ್ಬಲಗೊಳಿಸಿದೆ. ರಾಷ್ಟ್ರದ ಪ್ರಜಾಸತ್ತೆಗೆ ಮೂಲಭೂತ ಅಡಿಪಾಯ ಒದಗಿಸುವ ಪಂಚಾಯತ್‌ ರಾಜ್‌ ಸಂಸ್ಥೆಗಳು ಅಧಿಕಾರ ವಿಕೇಂದ್ರಿಕರಣದ ಸಂಕೇತಗಳು. ಈ ವಿಕೇಂದ್ರಿಕೃತ ವ್ಯವಸ್ಥೆಯ ಅಡಿಪಾಯವನ್ನೇ ಬುಡಮೇಲು ಮಾಡಿ ಕೇಂದ್ರಿಕೃತ ವ್ಯವಸ್ಥೆಗೆ ಕೇಂದ್ರ ಸರ್ಕಾರವು ಬುನಾದಿ ಹಾಕಿದೆ. ಮನರೇಗಾ ಕಾಯ್ದೆಯಲ್ಲಿ ಕಾಮಗಾರಿಗಳನ್ನು ಗ್ರಾಮ ಸಭೆಗಳಲ್ಲಿಟ್ಟು ತೀರ್ಮಾನ ಮಾಡಿ ಅನುಷ್ಠಾನ ಮಾಡಲಾಗುತ್ತಿತ್ತು. ಹೊಸ ಕಾಯ್ದೆಯಲ್ಲಿ ಗ್ರಾಮಸಭೆಗಳಿಗಿದ್ದ ಅಧಿಕಾರವನ್ನು ಕೇಂದ್ರ ಸರ್ಕಾರದ ಮಾನದಂಡಗಳ ಮೂಲಕ ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಕೇಂದ್ರದ ಈ ಕ್ರಮಗಳು ಕೇವಲ ಪ್ರಜಾಸತ್ತಾತ್ಮಕತೆಗೆ ವಿರೋಧಿ ಮಾತ್ರ ಅಲ್ಲ, ರಾಷ್ಟ್ರದ ಬಹುಪಾಲು ನಾಗರೀಕರ ಬೇಡಿಕೆಗಳನ್ನು ನಿರ್ಲಕ್ಷಿಸುವ ಮತ್ತು ರಾಷ್ಟ್ರದ ಹಿತಾಸಕ್ತಿಯನ್ನು ವಿನಾಶದ ಅಂಚಿಗೆ ದೂಡುವ ಪ್ರಗತಿ ವಿರೋಧಿ ಕ್ರಮವಾಗಿದೆ.

ನರೇಗಾ ಯೋಜನೆಯಿಂದಾಗಿ ಗುಳೆ ಹೋಗುವ ಸಮಸ್ಯೆ ಕಡಿಮೆಯಾಗಿತ್ತು. ಆದರೆ ಹೊಸ ಕಾಯ್ದೆಯಲ್ಲಿ ನಿರ್ಧಾರಗಳನ್ನು ಕೇಂದ್ರದಿಂದ ಹೇರಲಾಗುತ್ತದೆ. ದೆಹಲಿಯಲ್ಲಿ ಅಧಿಕಾರಿಗಳ ಪರಿಷತ್ತನ್ನು ರಚಿಸಲಾಗುತ್ತದೆ. ಈ ಅಧಿಕಾರಿಗಳ ಪರಿಷತ್ತು ಯಾವ ಪಂಚಾಯಿತಿಗಳಲ್ಲಿ ಈ ಯೋಜನೆಗಳನ್ನು ಜಾರಿಗೆ ತರಬೇಕೆಂಬುದನ್ನು ನಿರ್ಣಯಿಸುತ್ತದೆ. ಉದ್ಯೋಗ ಅರಸಿ ದೊಡ್ಡ ದೊಡ್ಡ ಪಟ್ಟಣಗಳಿಗೆ ಗುಳೆ ಹೋಗುವ ಅಥವಾ ವಲಸೆ ಹೋಗುವ ವ್ಯವಸ್ಥೆಯನ್ನು ಪುನರ್ ಸ್ಥಾಪಿಸುವ ಈ ʼವಿಬಿ ಗ್ರಾಮ್ ಜಿʼ ಯೋಜನೆಯನ್ನು ನನ್ನ ಸರ್ಕಾರ ಅತ್ಯಂತ ಪ್ರಬಲವಾಗಿ ವಿರೋಧಿಸುತ್ತದೆ.‌ ಮನರೇಗಾ ಕಾಯ್ದೆಯು ದಲಿತರು, ಆದಿವಾಸಿಗಳು, ಮಹಿಳೆಯರು, ಹಿಂದುಳಿದವರು, ರೈತಾಪಿ ಸಮುದಾಯಗಳ ಜನರ ಉದ್ಯೋಗದ ಹಕ್ಕುಗಳನ್ನು ಮೊಟಕುಗೊಳಿಸಲಾಗಿದೆ.

ಉದ್ಯೋಗ ಖಾತ್ರಿಗೆ ಸಂಬಂಧಿಸಿದ ಕಾಯ್ದೆಯನ್ನು ರದ್ದುಗೊಳಿಸಿ ಹೊಸ ಕಾಯ್ದೆಯನ್ನು ಜಾರಿಗೊಳಿಸುವಾಗ ರಾಜ್ಯಗಳ ಅಭಿಪ್ರಾಯ ಪಡೆಯಬೇಕಾಗಿತ್ತು. ಕೇಂದ್ರ ಪುರಸ್ಕೃತ ಯೋಜನೆಗಳಲ್ಲಿ ರಾಜ್ಯಗಳ ಪಾಲೂ ಇರುತ್ತದೆ. ಹೀಗಿರುವಾಗ ರಾಜ್ಯಗಳನ್ನು ಸಂಪರ್ಕಿಸದೆ ಜಾರಿಗೊಳಿಸಿರುವುದು ಸಂವಿಧಾನ ಬಾಹಿರ ನಡೆಯಾಗಿರುತ್ತದೆ.

ಮನರೇಗಾದಲ್ಲಿದ್ದ ಕಾರ್ಮಿಕ ಕೇಂದ್ರಿತ ಹಕ್ಕುಗಳನ್ನು ಮೊಟಕುಗೊಳಿಸಿ ಅವರನ್ನು ಗುತ್ತಿಗೆದಾರರ ಅಧೀನಕ್ಕೆ ನೀಡಲಾಗುತ್ತಿದೆ. ಬೆಲೆಯೇರಿಕೆ, ಹಣದುಬ್ಬರಗಳನ್ನು ಆಧರಿಸಿ ಕೂಲಿಯನ್ನು ಪರಿಷ್ಕರಿಸುತ್ತಿದ್ದ ಅವಕಾಶಗಳೂ ಹೊಸ ಕಾಯ್ದೆಯಲ್ಲಿ ಕ್ಷೀಣಿಸಿವೆ. ಇದರಿಂದ ಬಡ ಕೂಲಿ ಕಾರ್ಮಿಕರ ಸಾಮಾಜಿಕ ಭದ್ರತೆಯು ಇಲ್ಲವಾಗುತ್ತಿದೆ.

ಮಹಾತ್ಮ ಗಾಂಧೀಜಿಯವರ ಹೆಸರನ್ನು ತೆಗೆದು ಹಾಕಲಾಗಿದೆ. ಕೇಂದ್ರ ಸರ್ಕಾರದ ನೀತಿಗಳಿಂದ ಆರ್ಥಿಕ ಸಮಸ್ಯೆಗಳನ್ನು ಎದುರಿಸುತ್ತಿರುವ ರಾಜ್ಯ ಸರ್ಕಾರಗಳು ಹೊಸ ಕಾಯ್ದೆಯ ಪ್ರಕಾರ ಶೇ.40 ರಷ್ಟು ಅನುದಾನವನ್ನು ನೀಡಬೇಕಾಗುತ್ತದೆ. ರಾಜ್ಯವು ಅನುದಾನ ನೀಡದಿದ್ದರೆ ಕೇಂದ್ರವು ʼವಿಬಿ ಗ್ರಾಮ್ ಜಿʼ ಯೋಜನೆಗೆ ಅನುದಾನಗಳನ್ನು ನೀಡುವುದಿಲ್ಲ. ಹಾಗಾಗಿ ಯೋಜನೆಯು ನಿಧಾನವಾಗಿ ಅವಸಾನದ ಹಾದಿಯ ಕಡೆಗೆ ತೆರಳುತ್ತದೆ.

ಈ ಎಲ್ಲ ಕಾರಣಗಳಿಂದ ಕೇಂದ್ರ ಸರ್ಕಾರವು ತಂದಿರುವ ಗುತ್ತಿಗೆದಾರ ಕೇಂದ್ರಿತ, ಬೃಹತ್‌ ಭ್ರಷ್ಟಾಚಾರಕ್ಕೆ ಅವಕಾಶ ಕಲ್ಪಿಸುವ “ವಿಬಿ ಗ್ರಾಮ್ ಜಿ” ಕಾನೂನನ್ನು ತಕ್ಷಣ ರದ್ದುಪಡಿಸಿ, ಬಡವರ, ಕೃಷಿ ಕಾರ್ಮಿಕರ, ಗ್ರಾಮೀಣ ಆಸ್ತಿ ಸೃಜನೆಗೆ ಅವಕಾಶ ಕಲ್ಪಿಸುವ, ನಿರುದ್ಯೋಗಿ ಭತ್ಯೆ ಒದಗಿಸುವ ಕಾರ್ಮಿಕರು ಅವರಿರುವ ಸ್ಥಳದಲ್ಲಿಯೇ ಕೆಲಸ ಒದಗಿಸುವ “ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ”ಯನ್ನು ಮರು ಸ್ಥಾಪಿಸಬೇಕೆಂದು ನನ್ನ ಸರ್ಕಾರ ಕೇಂದ್ರವನ್ನು ಒತ್ತಾಯಿಸುತ್ತದೆ”.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈಶಾನ್ಯ ಶಿಕ್ಷಕರ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಶಶೀಲ್‌ ನಮೋಶಿ ಗೆಲುವು

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತ ಎಣಿಕೆಯಲ್ಲಿ ಬಿಜೆಪಿ...

ಕನ್ನಡಿಗರ ಉದ್ಯೋಗ ಹಕ್ಕುಗಳ ರಕ್ಷಣೆಗೆ ʼನಮ್ಮ ನಾಡು ನಮ್ಮ ಉದ್ಯೋಗʼ ಚಳವಳಿ ಆರಂಭ

ಕರ್ನಾಟಕದಲ್ಲಿ ಕನ್ನಡಿಗರ ಉದ್ಯೋಗಾವಕಾಶಗಳ ರಕ್ಷಣೆ ಹಾಗೂ ಖಾಸಗಿ ವಲಯದಲ್ಲಿ ಸ್ಥಳೀಯರಿಗೆ ನ್ಯಾಯಯುತ...

ಸೌಜನ್ಯ ಪ್ರಕರಣ ಮರು ತನಿಖೆಗೆ ವೇಗ: ಹಿಂದಿನ ತನಿಖಾಧಿಕಾರಿಗಳಿಗೆ SIT ನೋಟಿಸ್, 15ಕ್ಕೂ ಹೆಚ್ಚು ಮಂದಿಗೆ ಬುಲಾವ್

ರಾಜ್ಯಾದ್ಯಂತ ತೀವ್ರ ಗಮನ ಸೆಳೆದಿರುವ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ...

ಕರ್ನಾಟಕ SIR | ಅಂತಿಮ ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರಿದೆಯೇ ಪರಿಶೀಲಿಸಿ

ರಾಜ್ಯದಲ್ಲಿ ಗ್ಯಾನೇಶ್‌ ಕುಮಾರ್‌/ಚುನಾವಣಾ ಆಯೋಗ ಹೇರಿದ್ದ ಎಸ್‌ಐಆರ್‌ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಿಮ...