ದೇಹದ ಅಪಹಾಸ್ಯ, ನಿಂದನೆ ಮಾತ್ರವೇ ಮಹಿಳೆಯ ಮರ್ಯಾದೆ ಭಂಗದ ಅಪರಾಧವಲ್ಲ: ಹೈಕೋರ್ಟ್

Date:

ಕೇವಲ ದೇಹದ ಅಪಹಾಸ್ಯ (ಬಾಡಿ ಶೇಮಿಂಗ್‌) ಮತ್ತು ಅವಾಚ್ಯವಾಗಿ ನಿಂದಿಸುವುದು ಐಪಿಸಿ ಸೆಕ್ಷನ್ 509ರ ಅಡಿಯಲ್ಲಿ ಮಹಿಳೆಯ ಮರ್ಯಾದೆ ಭಂಗ ಮಾಡಿದ ಅಪರಾಧದ ವ್ಯಾಪ್ತಿಗೆ ಬರುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ.

- Advertisement -

ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2023ರಲ್ಲಿ ಮಹಿಳೆಯೊಬ್ಬರ ವಿರುದ್ಧ ಇಬ್ಬರು ಯುವತಿಯರು ಅವಾಚ್ಯವಾಗಿ ನಿಂದಿಸಿ, ಬಾಡಿ ಶೇಮಿಂಗ್ ಮಾಡಿದ್ದರು ಪ್ರಕರಣ ಎಂದು ದಾಖಲಾಗಿತ್ತು. ಆ ಘಟನೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಎಫ್‌ಐಆರ್ ಮತ್ತು ದೋಷಾರೋಪ ಪಟ್ಟಿಯನ್ನು ರದ್ದುಗೊಳಿಸುವಂತೆ ಕೋರಿ ಆರೋಪಿ‌ ಯುವತಿಯರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್. ಕೃಷ್ಣಕುಮಾರ್ ಅವರಿದ್ದ ಪೀಠ ವಿಚಾರಣೆ ನಡೆಸಿದೆ. ಆರೋಪಿಗಳ ಅರ್ಜಿಯನ್ನು ಪುರಸ್ಕರಿಸಿದ್ದು, ಈ ಆದೇಶ ಹೊರಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ವಿಚಾರಣೆ ವೇಳೆ ಕಾನೂನಿನ ನಿಯಮಗಳನ್ನು ವಿಶ್ಲೇಷಿಸಿದ ಹೈಕೋರ್ಟ್, “ಸೆಕ್ಷನ್ 509ರ ಅಡಿಯಲ್ಲಿ ಅಪರಾಧ ನಿರೂಪಣೆಯಾಗಲು ಅಗತ್ಯವಿರುವ ಮೂಲಭೂತ ಕಾನೂನಾತ್ಮಕ ಅಂಶಗಳು ಈ ಆರೋಪಗಳಲ್ಲಿ ಕಂಡುಬರುತ್ತಿಲ್ಲ. ಒಬ್ಬ ವ್ಯಕ್ತಿಯ ದೈಹಿಕ ನೋಟವನ್ನು ನಿಂದಿಸುವುದು ಅಥವಾ ಬಾಯಿಗೆ ಬಂದಂತೆ ಮಾತನಾಡುವುದು ಖಂಡನೀಯವಾದರೂ, ಅದು ಸ್ವಯಂಚಾಲಿತವಾಗಿ ಮಹಿಳೆಯ ಮಾನಹಾನಿ ಯತ್ನ ಎಂದು ಪರಿಗಣಿತವಾಗುವುದಿಲ್ಲ” ಎಂದು ಅಭಿಪ್ರಾಯಪಟ್ಟಿದೆ.

ಅಲ್ಲದೆ, ಇದೇ ಘಟನೆಗೆ ಸಂಬಂಧಿಸಿದಂತೆ ಮೂರನೇ ಆರೋಪಿಯ ವಿರುದ್ಧದ ವಿಚಾರಣೆಯನ್ನು ಹೈಕೋರ್ಟ್ ಈಗಾಗಲೇ ರದ್ದುಗೊಳಿಸಿರುವುದನ್ನು ಗಮನಿಸಿದ ನ್ಯಾಯಪೀಠ, ಸಮಾನತೆಯ ತತ್ವವನ್ನು ಆಧರಿಸಿ ಇಬ್ಬರು ಮಹಿಳಾ ಅರ್ಜಿದಾರರ ವಿರುದ್ಧ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಬಾಕಿ ಇದ್ದ ಕ್ರಿಮಿನಲ್ ನಡಾವಳಿಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಿ ಆದೇಶಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಹುಲಸೂರ | ಗಡಿಭಾಗದ ಸರ್ಕಾರಿ ಶಾಲೆಗಳಿಗೆ ಕನ್ನಡ ಶಿಕ್ಷಕರ ನೇಮಕಕ್ಕೆ ಕಸಾಪ ಮನವಿ

ಮಹಾರಾಷ್ಟ್ರದ ಗಡಿಯೊಂದಿಗೆ ಹೊಂದಿಕೊಂಡಿರುವ ಬೀದರ್ ಜಿಲ್ಲೆಯ ಹುಲಸೂರ ತಾಲೂಕಿನ ಉರ್ದು ಹಾಗೂ...

ಬೀದರ್‌ | ಅ.24ರಿಂದ ಕಲ್ಯಾಣ ಪರ್ವ: ಭಿತ್ತಿ ಪತ್ರ ಬಿಡುಗಡೆ

ಬಸವಕಲ್ಯಾಣದ ಮಹಾ ಮಠದ ಮಹಾಮನೆ ಆವರಣದಲ್ಲಿ ಬಸವ ಧರ್ಮ ಪೀಠದ ವತಿಯಿಂದ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...