ಅಪ್ರಾಪ್ತೆಯ 29 ವಾರಗಳ ಗರ್ಭಪಾತಕ್ಕೆ ಹೈಕೋರ್ಟ್ ಅನುಮತಿ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ತರಾಟೆ

Date:

ಲೈಂಗಿಕ ದೌರ್ಜನ್ಯಕ್ಕೆ ಒಳಗಾದ 15 ವರ್ಷದ ಅಪ್ರಾಪ್ತ ಬಾಲಕಿಯ 29 ವಾರಗಳ ಗರ್ಭಪಾತಕ್ಕೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದೆ. ಇದರೊಂದಿಗೆ, ಪೋಕ್ಸೊ (POCSO) ಕಾಯ್ದೆಯಡಿ ಸಂತ್ರಸ್ತರಾದವರಿಗೆ ತಕ್ಷಣದ ಆರೈಕೆ, ರಕ್ಷಣೆ, ಆಪ್ತಸಮಾಲೋಚನೆ ಮತ್ತು ಪುನರ್ವಸತಿ ಒದಗಿಸುವಲ್ಲಿ ಸರ್ಕಾರದ ಶಿಷ್ಟಾಚಾರಗಳು ಸರಿಯಾಗಿ ಪಾಲನೆಯಾಗುತ್ತಿವೆಯೇ ಎಂಬುದನ್ನು ಪರಿಶೀಲಿಸಲು ರಾಜ್ಯಾದ್ಯಂತ ಕಡ್ಡಾಯ ಲೆಕ್ಕಪರಿಶೋಧನೆ (ಆಡಿಟ್) ನಡೆಸುವಂತೆ ಸರ್ಕಾರಕ್ಕೆ ನ್ಯಾಯಾಲಯ ಆದೇಶಿಸಿದೆ.

- Advertisement -

ಚಿತ್ರದುರ್ಗ ಜಿಲ್ಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಈ ಬಾಲಕಿಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ಎಸಗಲಾಗಿತ್ತು. ಈ ಕುರಿತು ಏಪ್ರಿಲ್ 16ರಂದು ಎಫ್‌ಐಆರ್ ದಾಖಲಾಗಿತ್ತು. ಸಾಮಾನ್ಯ ಕಾನೂನಿನನ್ವಯ 24 ವಾರಗಳ ನಂತರ ಗರ್ಭಪಾತಕ್ಕೆ ಅವಕಾಶವಿಲ್ಲದ ಕಾರಣ ಬಾಲಕಿಯ ಪೋಷಕರು ಹೈಕೋರ್ಟ್ ಮೆಟ್ಟಿಲೇರಿದ್ದರು. ವಾಣಿವಿಲಾಸ ಆಸ್ಪತ್ರೆಯ ವೈದ್ಯಕೀಯ ಮಂಡಳಿಯ ವರದಿಯನ್ನು ಆಧರಿಸಿ, ಸಂತ್ರಸ್ತೆಯ ಭವಿಷ್ಯ ಹಾಗೂ ಆಕೆಯ ದೈಹಿಕ ಹಕ್ಕುಗಳನ್ನು ರಕ್ಷಿಸುವ ಹಿತದೃಷ್ಟಿಯಿಂದ 29 ವಾರ 6 ದಿನಗಳ ಗರ್ಭಪಾತಕ್ಕೆ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ಪೀಠವು ಜೂನ್ 8ರಂದು ಅನುಮತಿ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

7 ದಿನಗಳಲ್ಲಿ 8 ಇ-ಮೇಲ್‌ಗಳು; ಆದರೂ ಮತಪಟ್ಟಿಯಲ್ಲಿ ಉಳಿಯಲಿಲ್ಲ...

90 ಕೋಟಿಗೂ ಹೆಚ್ಚು ಮತದಾರರನ್ನು ಹೊಂದಿರುವ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದಲ್ಲಿ 97 ಮತದಾರರು ಎಂಬ ಸಂಖ್ಯೆ ಅತಿ ಚಿಕ್ಕದಾಗಿ ಕಾಣಬಹುದು. ಆದರೆ, ಗೋವಾದ ಈ 97 ಮತದಾರರ ಪ್ರಕರಣವು ಚುನಾವಣಾ ಆಯೋಗದ ಕಾರ್ಯವಿಧಾನ,...

ಮತದಾರರ ಪಟ್ಟಿ: ನಿರ್ಧಾರ ತೆಗೆದುಕೊಳ್ಳುವುದು, ಜಾರಿಗೆ ತರುವುದು ಯಾರು?

ಗೋವಾದ 97 ಮತದಾರರ ಪ್ರಕರಣ ಚುನಾವಣಾ ವ್ಯವಸ್ಥೆಯ ಮುಂದಿರುವ ಒಂದು ಮಹತ್ವದ ಪ್ರಶ್ನೆಯನ್ನು ಎದುರುತರುತ್ತದೆ: ಸ್ಥಳೀಯ ಮಟ್ಟದ ಮತದಾರರ ನೋಂದಣಿ ಅಧಿಕಾರಿಗಳು (ERO) ದಾಖಲೆಗಳನ್ನು ಪರಿಶೀಲಿಸಿ ಅಂತಿಮ ಪಟ್ಟಿಯಲ್ಲಿ ಸೇರಿಸಲು ಅರ್ಹರೆಂದು ಕಂಡುಕೊಂಡ...

ಈ ಪ್ರಕರಣದಲ್ಲಿ ಅಧಿಕಾರಿಗಳ ತೀವ್ರ ನಿರ್ಲಕ್ಷ್ಯವನ್ನು ನ್ಯಾಯಾಲಯವು ಎತ್ತಿ ತೋರಿಸಿದೆ. ಎಫ್‌ಐಆರ್ ದಾಖಲಾದ ತಕ್ಷಣ ಠಾಣಾಧಿಕಾರಿಗಳು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಅಥವಾ ಮಕ್ಕಳ ಕಲ್ಯಾಣ ಸಮಿತಿಗೆ ಮಾಹಿತಿ ನೀಡಿಲ್ಲ. ಅಧಿಕಾರಿಗಳು ತ್ವರಿತವಾಗಿ ಕಾರ್ಯನಿರ್ವಹಿಸಿದ್ದರೆ ಗರ್ಭಪಾತದ ನಿರ್ಧಾರವನ್ನು ಮೊದಲೇ ತೆಗೆದುಕೊಳ್ಳಬಹುದಿತ್ತು. ಇದರಿಂದ ಬಾಲಕಿ ಮತ್ತು ಆಕೆಯ ಕುಟುಂಬಕ್ಕೆ ಇಷ್ಟೊಂದು ಮಾನಸಿಕ ಯಾತನೆ ಎದುರಾಗುತ್ತಿರಲಿಲ್ಲ ಎಂದು ನ್ಯಾಯಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಇದನ್ನು ಓದಿದ್ದೀರಾ? ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ಕುಟುಂಬದಿಂದ ನೂರಾರು ಎಕರೆ ಭೂಮಿ ಖರೀದಿ

ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಅಧಿಕಾರಿಗಳು ನಿಗದಿತ ಶಿಷ್ಟಾಚಾರವನ್ನು (ಪ್ರೋಟೋಕಾಲ್) ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದಾರೆಯೇ ಎಂಬುದರ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರು ರಾಜ್ಯಾದ್ಯಂತ ಆಡಿಟ್ ನಡೆಸಬೇಕು. ಪೊಲೀಸ್ ಇಲಾಖೆ ಹಾಗೂ ಸಂಬಂಧಿತ ಇಲಾಖೆಗಳ ಸಮನ್ವಯದ ಬಗ್ಗೆ ಪರಿಶೀಲಿಸಿ ಹೈಕೋರ್ಟ್‌ಗೆ ವರದಿ ಸಲ್ಲಿಸಬೇಕು ಹಾಗೂ ಯಾವುದೇ ನ್ಯೂನತೆಗಳಿದ್ದರೂ 4 ವಾರಗಳೊಳಗೆ ನ್ಯಾಯಾಲಯದ ಗಮನಕ್ಕೆ ತರಬೇಕು ಎಂದು ಸೂಚಿಸಲಾಗಿದೆ.

ಪ್ರಕರಣದಲ್ಲಿ ಕರ್ತವ್ಯ ಲೋಪ, ನಿರ್ಲಕ್ಷ್ಯ ಹಾಗೂ ನ್ಯಾಯಾಲಯದ ಹಿಂದಿನ ಆದೇಶಗಳನ್ನು ಪಾಲಿಸದ ಅಧಿಕಾರಿಗಳ ಬಗ್ಗೆ ವಿಚಾರಣೆ ನಡೆಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕರು ವರದಿ ನೀಡಬೇಕು. ಆ ವರದಿಯ ಆಧಾರದ ಮೇಲೆ ಸಂಬಂಧಪಟ್ಟ ಅಧಿಕಾರಿಗಳನ್ನು ಗುರುತಿಸಿ, ಅವರ ವಿರುದ್ಧ ಕಾನೂನು ಪ್ರಕಾರ ಕಠಿಣ ಶಿಸ್ತು ಕ್ರಮ ಜರುಗಿಸುವಂತೆಯೂ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ದೇಶದ್ರೋಹಿ; ಕೂಡಲೇ ರಾಜೀನಾಮೆ ನೀಡಲಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅತಿ ದೊಡ್ಡ ದೇಶದ್ರೋಹಿ ಎಂಬುದು ಬಹಿರಂಗವಾಗಿದೆ....

ಗ್ಯಾನೇಶ್‌ ಕುಮಾ‌ರ್ – ಮೇಧಾ ರೂಪಂ: ತಪ್ಪು ಕಾರಣಗಳಿಗಾಗಿ ಸುದ್ದಿಯ ಸುಳಿಯಲ್ಲಿ ಐಎಎಸ್ ಅಪ್ಪ-ಮಗಳ ಜೋಡಿ

ಉನ್ನತ ಸಾಂವಿಧಾನಿಕ ಹಾಗೂ ಆಡಳಿತಾತ್ಮಕ ಹುದ್ದೆಗಳನ್ನು ಅಲಂಕರಿಸಿರುವ ಐಎಎಸ್ ಅಧಿಕಾರಿಗಳಾದ ಅಪ್ಪ–ಮಗಳ...

IIT ಬಾಂಬೆ ವಿದ್ಯಾರ್ಥಿ ಸಾಹಿಲ್‌ ಆತ್ಮಹತ್ಯೆ ಪ್ರಕರಣ | ಪೋಷಕರ ಬೆಂಬಲಕ್ಕೆ ನಿಂತ ರಾಹುಲ್‌ ಗಾಂಧಿ

IIT ಬಾಂಬೆ ವಿದ್ಯಾರ್ಥಿ ಸಾಹಿಲ್‌ ವಕೋಡೆ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌...

ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಹಸಿರು ನಿಶಾನೆ; ಚಾಲಕರ ಸಂಘದಿಂದ ಸುಪ್ರೀಂಗೆ ಮೇಲ್ಮನವಿ

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಹಸಿರು ನಿಶಾನೆ ತೋರಿಸಿದ್ದ ಹೈಕೋರ್ಟ್ ತೀರ್ಪು...