ಎಚ್‌ಡಿಕೆ ವಿರುದ್ಧ ಸರ್ಕಾರಿ ಜಮೀನು ಕಬಳಿಕೆ ಆರೋಪ: ಕ್ರಮ ಕೈಗೊಳ್ಳದ ಅಧಿಕಾರಿಗಳನ್ನು ಜೈಲಿಗೆ ಕಳಿಸಬೇಕು ಎಂದ ಹೈಕೋರ್ಟ್

Date:

Advertisements

ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಮತ್ತಿತರರ ವಿರುದ್ಧದ ಸರಕಾರಿ ಜಮೀನು ಅತಿಕ್ರಮಣ ಆರೋಪ ಪ್ರಕರಣದಲ್ಲಿ ಏನೂ ಕ್ರಮ ಜರುಗಿಸದ ಅಧಿಕಾರಿಗಳ ವಿರುದ್ಧ ಹೈಕೋರ್ಟ್‌ ಗರಂ ಆಗಿ ತರಾಟೆಗೆ ತೆಗೆದುಕೊಂಡಿದೆ.

‘‘ಪ್ರತಿವಾದಿಗಳು ಉನ್ನತ ಹುದ್ದೆಯಲ್ಲಿದ್ದಾರೆ. ಐದು ವರ್ಷ ಏನೂ ಕ್ರಮ ಕೈಗೊಂಡಿಲ್ಲವೇ? ಇನ್ನೆರಡು ವಾರ ಕಾಲಾವಕಾಶ ನೀಡುತ್ತೇನೆ. ಅಷ್ಟರಲ್ಲಿಕ್ರಮ ಕೈಗೊಂಡರೆ ಸರಿ. ಇಲ್ಲವಾದರೆ ಅಧಿಕಾರಿಗಳನ್ನು ಜೈಲಿಗೆ ಕಳುಹಿಸುತ್ತೇನೆ. ಸ್ವಲ್ಪ ದಿನ ಜೈಲಿನಲ್ಲಿದ್ದು ಬಂದರೆ ಸರಿಹೋಗ್ತೀರಿ,’’ ಎಂದು ನ್ಯಾಯಾಲಯ ಖಾರವಾದ ಶಬ್ಧಗಳಲ್ಲಿ ಕುಟುಕಿತು.

ಲೋಕಾಯುಕ್ತ ನೀಡಿರುವ ಆದೇಶ ಜಾರಿಗೊಳಿಸುವಲ್ಲಿಸರಕಾರ ವಿಫಲವಾಗಿದೆ ಎಂದು ಸಮಾಜ ಪರಿವರ್ತನಾ ಸಮುದಾಯದ ಎಸ್‌.ಆರ್‌.ಹಿರೇಮಠ ಸಲ್ಲಿಸಿರುವ ಸಿವಿಲ್‌ ನ್ಯಾಯಾಂಗ ನಿಂದನೆ ಅರ್ಜಿಯು ನ್ಯಾಯಮೂರ್ತಿ ಕೆ.ಸೋಮಶೇಖರ್‌ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತು.

Advertisements

ಅರ್ಜಿ ವಿಚಾರಣೆ ವೇಳೆ ಖುದ್ದು ಹಾಜರಿದ್ದ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್‌ ಕಠಾರಿಯಾ ಅವರನ್ನು ನ್ಯಾಯಾಲಯ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿತು. ನ್ಯಾಯಾಲಯವು ಒಂದು ಹಂತದಲ್ಲಿ‘‘ನಿಮ್ಮ ವಿರುದ್ಧ ಈಗಲೇ ನ್ಯಾಯಾಂಗ ನಿಂದನೆಯ ಆರೋಪ ನಿಗದಿಗೊಳಿಸುವ ಪ್ರಕ್ರಿಯೆ ಆರಂಭಿಸಲಾಗುವುದು,’’ ಎಂದು ಕಿಡಿಕಾರಿ ‘‘ನೀವೆಲ್ಲಾ ಕೋರ್ಟ್‌ ಆದೇಶಗಳನ್ನು ಪಾಲನೆ ಮಾಡುವವರೆಗೆ ನಿಮ್ಮ ಸಂಬಳ ಕಟ್‌ ಮಾಡಿದರೆ ಗೊತ್ತಾಗುತ್ತದೆ,’’ ಎಂದು ಹರಿಹಾಯ್ದರು.

ನ್ಯಾಯಮೂರ್ತಿ ಸೋಮಶೇಖರ್‌, ‘‘ಅಧಿಕಾರಿಗಳಿಗೆ ನ್ಯಾಯಾಂಗದ ಭಾಷೆಯೇ ಅರ್ಥವಾಗುತ್ತಿಲ್ಲ. ನೋಡಿ ನೀವು ಹೇಳಿದ್ದನ್ನೆಲ್ಲಾನಾನು ಬರೆದುಕೊಳ್ತೇನೆ. ಸತ್ಯ ಹೇಳಿದ್ರೂ ಸರಿ, ಸುಳ್ಳು ಹೇಳಿದ್ರೂ ಸರಿ. ಅವಕಾಶ ಸಿಕ್ಕರೆ ನಿಮ್ಮನ್ನೆಲ್ಲಾಫಿಕ್ಸ್‌ ಮಾಡಿಬಿಡ್ತೀನಿ,’’ ಎಂದು ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶರ್ಜೀಲ್- ಉಮರ್ ಗೆ ಜಾಮೀನು; ಅಗೋಚರ ಕದಗಳ ಮೇಲೆ ‘ನಾಳೆ ಬಾ’ ಎಂದು ನ್ಯಾಯಾಂಗ ಬರೆದ ಬರೆಹ!

ಕಠಾರಿಯಾ, ‘‘ಸರ್‌, ವ್ಯವಸ್ಥೆ ತುಂಬಾ ಕೆಟ್ಟು ಹೋಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಆದರೂ, ಸರಕಾರ ತನ್ನೆಲ್ಲ ಪ್ರಯತ್ನ ಮಾಡುತ್ತಿದೆ. ಕಳೆದ ಒಂದು ವರ್ಷದಲ್ಲಿನಾವು 14 ಲಕ್ಷ ಎಕರೆಗೂ ಅಧಿಕ ಆಕ್ರಮಿತ ಸರಕಾರಿ ಭೂಮಿಯನ್ನು ವಶಕ್ಕೆ ಪಡೆದಿದ್ದೇವೆ,’’ ಎಂದರು.

ನ್ಯಾಯಪೀಠ, ‘‘ಇ-ಖಾತಾ ಎಂಬುದೇ ಭ್ರಷ್ಟಾಚಾರದ ಆಗರ. ನಮ್ಮಲ್ಲಿಮಾನಸಿಕ ಭ್ರಷ್ಟಾಚಾರ, ಪೂರ್ವಗ್ರಹಪೀಡಿತ ಭಾವನೆಯ ಭ್ರಷ್ಟಾಚಾರ, ಹಣದ ಭ್ರಷ್ಟಾಚಾರ ಎಂಬೆಲ್ಲಾಶ್ರೇಣೀಕೃತ ವ್ಯವಸ್ಥೆಯಿದೆ. ಮೊದಲು ಅವುಗಳಿಂದ ಹೊರಬನ್ನಿ,’’ ಎಂದು ಹೇಳಿತು.
‘‘ಇನ್ನೆರಡು ವಾರಗಳ ಕಾಲಾವಕಾಶ ನೀಡುತ್ತೇನೆ. ಅಷ್ಟರೊಳಗೆ ಪಾಲಿಸಿದರೆ ಸರಿ. ಇಲ್ಲಾಂದ್ರೆ, ಎಲ್ಲಪ್ರತಿವಾದಿಗಳನ್ನೂ ಎಸ್ಕಾರ್ಟ್‌ ಕೊಟ್ಟು ಕರೆಯಿಸಿಬಿಡುತ್ತೇನೆ. ಅಧಿಕಾರಿಗಳನ್ನು ಎಲ್ಲಿಗೆ ಕಳುಹಿಸಬೇಕೊ ಅಲ್ಲಿಗೆ ಕಳುಹಿಸುತ್ತೇನೆ,’’ ಎಂದು ಅಬ್ಬರಿಸಿದರಲ್ಲದೆ, ಪ್ರಕರಣದಲ್ಲಿ ಸಂವಿಧಾನ ಕರಡು ತಜ್ಞರ ಸಮಿತಿ ಮತ್ತು ಎಂ.ಎನ್‌.ರಾಯ್‌ ಅವರ ಉದಾಹರಣೆಗಳನ್ನು ನೀಡುತ್ತಾ, ‘‘ಯಾವುದಾದರೂ ವಿಷಯಕ್ಕೆ ಎಸ್‌ಐಟಿ ರಚಿಸುವುದು ಸರಕಾರಕ್ಕೆ ರೂಢಿಯಾಗಿಬಿಟ್ಟಿದೆ,’’ ಎಂದು ಚಾಟಿ ಬೀಸಿದರು.

ಅರ್ಜಿದಾರ ಪರ ಹಾಜರಿದ್ದ ಹಿರಿಯ ವಕೀಲ ಎಸ್‌.ಬಸವರಾಜ್‌, ‘‘ಕೇತಗಾನಹಳ್ಳಿ ವ್ಯಾಪ್ತಿಯ 14 ಎಕರೆ ಸರಕಾರಿ ಜಮೀನನ್ನು ಎಚ್‌.ಡಿ.ಕುಮಾರಸ್ವಾಮಿ ಹಾಗೂ ಮತ್ತಿತರರು ಒತ್ತುವರಿ ಮಾಡಿರುವುದನ್ನು ತಹಶೀಲ್ದಾರ್‌ ಮತ್ತು ಸಂಬಂಧಿಸಿದ ಕಂದಾಯ ಅಧಿಕಾರಿಗಳು ಗುರುತಿಸಿದ್ದಾರೆ. ಅಂತೆಯೇ, ಲೋಕಾಯುಕ್ತರು ಒತ್ತುವರಿ ತೆರವು ಸಂಬಂಧ ನೀಡಿರುವ ಆದೇಶವನ್ನು ಅನುಷ್ಠಾನಗೊಳಿಸಲು ಸರಕಾರ ಮುಂದಾಗಿಲ್ಲ,’’ ಎಂದರು. ಕೊನೆಗೆ ನ್ಯಾಯಾಲಯ ಸರಕಾರಕ್ಕೆ ಸಮಯ ನೀಡಿ ವಿಚಾರಣೆಯನ್ನು ಫೆ.21ಕ್ಕೆ ಮುಂದೂಡಿತು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X