ಉದ್ಯೋಗಿ ಆತ್ಮಹತ್ಯೆ : ತನಿಖೆ ವೇಳೆ ಭವಿಶ್ ಅಗರ್ವಾಲ್‌ಗೆ ಕಿರುಕುಳ ನೀಡದಂತೆ ಪೊಲೀಸರಿಗೆ ಹೈಕೋರ್ಟ್ ಸೂಚನೆ

Date:

ಓಲಾ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ನಡೆಸುವಾಗ ಓಲಾ ಕಂಪನಿಯ ಸಂಸ್ಥಾಪಕ, ಸಿಇಒ ಭವಿಶ್ ಅಗರ್ವಾಲ್‌ ಮತ್ತು ಇತರರಿಗೆ ಕಿರುಕುಳ ನೀಡದಂತೆ ಕರ್ನಾಟಕ ಹೈಕೋರ್ಟ್ ಪೊಲೀಸರಿಗೆ ಸೂಚಿಸಿದೆ.

- Advertisement -

38 ವರ್ಷದ ಓಲಾ ಎಂಜಿನಿಯರ್ ಕೆ ಅರವಿಂದ್ ಆತ್ಮಹತ್ಯೆ ಮಾಡಿಕೊಂಡಿದ್ದು, ಕೆಲಸದ ಸ್ಥಳದಲ್ಲಿ ನಿರಂತರ ಕಿರುಕುಳಕ್ಕೊಳಗಾಗಿದ್ದಾಗಿ ತಮ್ಮ 28 ಪುಟಗಳ ಡೆತ್‌ನೋಟ್‌ನಲ್ಲಿ ಆರೋಪಿಸಿದ್ದಾರೆ. ಈ ಸಂಬಂಧ ಭವಿಶ್ ಅಗರ್ವಾಲ್‌ ಮತ್ತು ಹಿರಿಯ ಅಧಿಕಾರಿ ಸುಬ್ರತ್ ಕುಮಾರ್ ದಾಸ್ ಅವರ ವಿರುದ್ಧ ಆತ್ಮಹತ್ಯೆಗೆ ಪ್ರೇರೇಪಣೆ ಮಾಡಿದ ಆರೋಪದ ಮೇಲೆ ಬೆಂಗಳೂರು ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಬೆಂಗಳೂರು | ನೌಕರ ಆತ್ಮಹತ್ಯೆ ಪ್ರಕರಣ; ಓಲಾ ಸಿಇಒ ಭವೀಶ್ ಅಗರ್‌ವಾಲ್ ವಿರುದ್ಧ ಎಫ್‌ಐಆರ್

ಪ್ರಕರಣ ದಾಖಲಾದ ಬೆನ್ನಲ್ಲೇ ಎಫ್‌ಐಆರ್‌ನ್ನು ಪ್ರಶ್ನಿಸಿ ಓಲಾ ಸಂಸ್ಥೆಯು ಅರ್ಜಿ ಸಲ್ಲಿಸಿದೆ. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಭವಿಶ್ ಅಗರ್ವಾಲ್ ಮತ್ತು ಇತರರ ವಿರುದ್ಧ ದಾಖಲಾಗಿರುವ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣದ ತನಿಖೆಯ ನೆಪದಲ್ಲಿ ಕಿರುಕುಳ ನೀಡದಂತೆ ಸುಬ್ರಹ್ಮಣ್ಯಪುರ ಠಾಣೆಯ ಪೊಲೀಸರಿಗೆ ಮಧ್ಯಂತರ ಆದೇಶದಲ್ಲಿ ನಿರ್ದೇಶನ ನೀಡಿದೆ.

ಸೆಪ್ಟೆಂಬರ್ 28ರಂದು ಚಿಕ್ಕಲಸಂದ್ರದಲ್ಲಿರುವ ತನ್ನ ಮನೆಯಲ್ಲಿ ಅರವಿಂದ್ ಅವರು ವಿಷ ಸೇವಿಸಿದ್ದಾರೆ. ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ದೊರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕುಟುಂಬಸ್ಥರು ಡೆತ್‌ ನೋಟ್‌ ಪತ್ತೆ ಮಾಡಿ, ಓಲಾ ಹಿರಿಯ ನಿರ್ವಾಹಕರಾದ ಸುಬ್ರತ್ ಕುಮಾರ್ ದಾಸ್ ಮತ್ತು ಭವಿಶ್ ಅಗರ್ವಾಲ್ ಅವರ ವಿರುದ್ಧ ಕೆಲಸದ ಸ್ಥಳದಲ್ಲಿ ಕಿರುಕುಳ ನೀಡಿದ್ದಕ್ಕೆ ದೂರು ದಾಖಲಿಸಿದ್ದಾರೆ. ಕಂಪನಿಯ ಎಚ್‌ಆರ್ ವಿಭಾಗವು ಅರವಿಂದ್‌ರ ಖಾತೆಗೆ ಮಾಡಿದ ಹಣದ ವರ್ಗಾವಣೆಯ ಬಗ್ಗೆ ಸ್ಪಷ್ಟ ಮಾಹಿತಿ ನೀಡಲು ವಿಫಲವಾಗಿದೆ ಎಂದು ದೂರದಾರರು ತಿಳಿಸಿದ್ದಾರೆ.

ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...