ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ, ಹೈಕೋರ್ಟ್‌ನಿಂದ ಸಿಟಿ ರವಿ ಅರ್ಜಿ ವಜಾ

Date:

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬೆಳಗಾವಿಯ ಸುವರ್ಣಸೌಧದ ಅಧಿವೇಶನದಲ್ಲಿ ಅವಹೇಳನಾಕಾರಿ ಪದ ಬಳಕೆ ಆರೋಪ ಸಂಬಂಧ ದಾಖಲಾದ ಪ್ರಕರಣ ರದ್ದು ಕೋರಿ ಬಿಜೆಪಿ ಶಾಸಕ ಸಿ ಟಿ ರವಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.

- Advertisement -

ಹೈಕೋರ್ಟ್ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಸಿ.ಟಿ.ರವಿ ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಿ, “ಆರೋಪಿಸಿದ ಪದ ಉಚ್ಚರಿಸಿದ್ದರೆ, ಅದು ಮಹಿಳೆಯ ಘನತೆಗೆ ಹಾನಿಯಾಗುತ್ತೆ. ಇದು ಶಾಸನಸಭೆಯ ವಿನಾಯಿತಿಗೆ ಒಳಪಡುವುದಿಲ್ಲ” ಪೀಠ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕೋರ್ಟ್ ಎಫ್‌ಐಆರ್ ರದ್ದತಿಗೆ ಅರ್ಜಿ ಸಲ್ಲಿಸಿದ್ದ ಸಿ.ಟಿ. ರವಿ ಅವರು, “ನಾನು ಶಾಸಕರಾಗಿದ್ದರಿಂದ ನನ್ನ ಮೇಲೆ ಶಾಸನಸಭೆಯ ವಿನಾಯಿತಿ ಇದೆ. ಈ ವಿಷಯವನ್ನು ಸ್ಪೀಕರ್ ನಿರ್ಧರಿಸಬೇಕು” ಎಂದು ವಿಧಾನ ಪರಿಷತ್‌ ಸದಸ್ಯ ಎಫ್‌ಐಆರ್ ರದ್ದುಪಡಿಸಲು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಎಫ್‌ಐಆರ್ ರದ್ದತಿ ಮಾಡದಂತೆ ಲಕ್ಷ್ಮಿ ಹೆಬ್ಬಾಳ್ಕರ್ ಪರ ವಾದ ಮಂಡಿಸಿದ ವಕೀಲ ಶಿವಶಂಕರ್ ಪಾಟೀಲ್, “ಶಾಸಕರಾಗಿದ್ದರೂ ಸಹ, ಮಹಿಳೆಯ ಘನತೆಗೆ ಹಾನಿ ಮಾಡುವ ಅಶ್ಲೀಲ ಪದ ಬಳಸಿದರೆ ಅದು ಶಾಸನಸಭೆಯ ವಿನಾಯಿತಿಗೆ ಒಳಪಡುವುದಿಲ್ಲ” ಎಂದು ವಾದಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಹುಲ್ ಕಾರ್ಯಸೂಚಿಗೆ ಮೋದಿ ಮಣೆ ಹಾಕಿ ಶರಣಾದ ಗುಟ್ಟೇನು?

ಈ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್ ದೂರುದಾರರೇ ಎಂದು ನ್ಯಾಯಮೂರ್ತಿ ನಾಗಪ್ರಸನ್ನ ಪ್ರಶ್ನಿಸಿದ್ದರು. ಆಗ ಹೆಬ್ಬಾಳ್ಕರ್ ಪ್ರಕರಣದಲ್ಲಿ ಕಕ್ಷಿದಾರರಾಗಿ ಇರುವುದಾಗಿ ವಕೀಲರು ದೃಢಪಡಿಸಿದ್ದರು. ವಾದ ಪ್ರತಿವಾದ ಆಲಿಸಿದ್ದ ನ್ಯಾಯಮೂರ್ತಿ ನಾಗಪ್ರಸನ್ನ ಪೀಠ, ಸಿಟಿ ರವಿ ಅವರ ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿತು.

ಪ್ರಕರಣದ ಹಿನ್ನೆಲೆ

ಬೆಳಗಾವಿಯಲ್ಲಿ ನಡೆದ ಅಧಿವೇಶನದ ವೇಳೆ ವಿಧಾನ ಪರಿಷತ್ ಸದಸ್ಯರಾದ ಸಿಟಿ ರವಿ ಅವರು ಶಾಸನಸಭೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಸಂಬಂಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಕಾಂಗ್ರೆಸ್ ನಾಯಕರು ಅಶ್ಲೀಲ ಪದ ಬಳಕೆಯನ್ನು ಖಂಡಿಸಿ ಹೋರಾಟ ಮಾಡಿದ್ದರು. ಜೊತೆಗೆ, ಸಿ.ಟಿ. ರವಿ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...