ಸಿದ್ದರಾಮಯ್ಯ ಅವರನ್ನು ಹೈಕೋರ್ಟ್ ಆರೋಪಮುಕ್ತರನ್ನಾಗಿ ಮಾಡಿಲ್ಲ: ವಿಜಯೇಂದ್ರ

Date:

ಮೈಸೂರಿನ ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರಪರಾಧಿ ಎಂದು ಹೈಕೋರ್ಟ್ ಹೇಳಿಲ್ಲ. ಸಿಬಿಐ ತನಿಖೆಗೆ ಕೊಡುವುದಿಲ್ಲ ಎಂಬ ತೀರ್ಪು ನೀಡಿದೆ. ಇದರಿಂದ ಮೈಸೂರಿನ ಮುಡಾ ಹಗರಣದ ವಿಷಯದಲ್ಲಿ ಸಿಎಂ ಕುಟುಂಬ ಒಳಗೊಂಡ ಕುರಿತ ಬಿಜೆಪಿ ಹೋರಾಟ ಮತ್ತು ಪಾದಯಾತ್ರೆಗೆ ಹಿನ್ನಡೆ ಆಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

- Advertisement -

ಬೆಂಗಳೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, “ಮೈಸೂರಿನ ಮುಡಾ ಹಗರಣದಲ್ಲಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಹೈಕೋರ್ಟ್‌ನಲ್ಲಿ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡುವಂತೆ ಕೋರಿದ್ದರು. ಆ ಅರ್ಜಿಯನ್ನು ರಾಜ್ಯ ಹೈಕೋರ್ಟ್ ತಿರಸ್ಕರಿಸಿದೆ. ಅದರ ಅರ್ಥ ಸಿಎಂ ಸಿದ್ದರಾಮಯ್ಯನವರು ನಿರಪರಾಧಿ ಎಂದು ಹೈಕೋರ್ಟ್ ಹೇಳಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ಲೋಕಾಯುಕ್ತ ಮತ್ತು ಇ.ಡಿ. ತನಿಖೆ ನಡೆಯುತ್ತಿದೆ. ಮುಂದೇನಾಗುತ್ತದೆ ಕಾದು ನೋಡೋಣ. ರಾಜ್ಯ ಹೈಕೋರ್ಟ್ ತನ್ನ ತೀರ್ಪಿನಲ್ಲಿ ಸಿಎಂ ಕುಟುಂಬ ನಿರಪರಾಧಿಗಳೆಂದು ಹೇಳಿಲ್ಲ. ಮುಡಾ ಹಗರಣದಲ್ಲಿ ಸಿಎಂ ಕುಟುಂಬ ಭಾಗಿ ಆಗಿರುವುದು ಮತ್ತು ಸಾವಿರಾರು ಕೋಟಿ ರೂಪಾಯಿ ಲೂಟಿ ಆದುದನ್ನು ತಿಳಿಸಿ ನಾವು ಹೋರಾಟ ಮಾಡಿದ್ದೆವು. ನಮ್ಮ ಆರೋಪಕ್ಕೆ ಇವತ್ತಿಗೂ ನಾವು ಬದ್ಧರಾಗಿದ್ದೇವೆ” ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದುರಹಂಕಾರಿ ದೊಡ್ಡಣ್ಣನ ಎದುರು ಮಂಡಿಯೂರಿದ ಮೋದಿ

“ಯಡಿಯೂರಪ್ಪ ಅವರ ವಿರುದ್ಧ ಇದ್ದ ಪೋಕ್ಸೋ ಕೇಸಿನಲ್ಲಿ ಕೆಳಹಂತದ ಕೋರ್ಟಿನ ಸಮನ್ಸ್ ಅನ್ನು ರಾಜ್ಯ ಹೈಕೋರ್ಟ್ ಬದಿಗಿರಿಸಿದೆ. ರಾಜ್ಯ ಹೈಕೋರ್ಟ್‍ನಲ್ಲಿ ಈ ಕುರಿತು ಬಹಳ ದಿನ ವಾದ ವಿವಾದ ನಡೆದಿದೆ. ಅದರ ಆಧಾರದಲ್ಲಿ ನಮ್ಮ ಅರ್ಜಿಯನ್ನೂ ಪುರಸ್ಕರಿಸಿ, ಕೆಳಹಂತದ ಕೋರ್ಟಿನ ಸಮನ್ಸ್ ರದ್ದು ಮಾಡಿ ಮರು ಪರಿಶೀಲನೆ ಮಾಡುವಂತೆ ನಿರ್ದೇಶನ ನೀಡಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

SIR ಎಂಬ ತಾಂತ್ರಿಕ ರೋಗ ಮತದಾರರಿಗೆ ಶಾಪವಾಗಿದೆಯೇ?

ಎಸ್‌ಐಆರ್‌ ಪ್ರಕ್ರಿಯೆಯು ಯಶಸ್ವಿಯಾಗಿ ಮುಕ್ತಾಯಗೊಳ್ಳಲು ಸಾರ್ವಜನಿಕ ಜಾಗೃತಿ, ಅಧಿಕೃತ ಮಾಹಿತಿಯ ಸುಲಭ...

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...